Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಡಹಬ್ಬ ಸಾಮಾನ್ಯರ ದಸರಾ ಆಗಬೇಕು: ಸಚಿವ...

ನಾಡಹಬ್ಬ ಸಾಮಾನ್ಯರ ದಸರಾ ಆಗಬೇಕು: ಸಚಿವ ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ12 Sept 2019 10:42 PM IST
share
ನಾಡಹಬ್ಬ ಸಾಮಾನ್ಯರ ದಸರಾ ಆಗಬೇಕು: ಸಚಿವ ವಿ.ಸೋಮಣ್ಣ

ಮೈಸೂರು,ಸೆ.12: ವಿಶ್ವ ವಿಖ್ಯಾತ ನಾಡಹಬ್ಬವು ಸಾಮನ್ಯರ ದಸರಾವಾಗಬೇಕು. ಅಧಿಕಾರಿಗಳ ಮತ್ತು ರಾಜಕಾರಣಿಗಳ ದಸರಾ ಆಗಬಾರದು. ಇದಕ್ಕೆ ಅಧಿಕಾರಿಗಳು ಸಹಕರಿಸಬೇಕು ಎಂದು ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಮೂಡಾ ಕಚೇರಿಯ ಸಭಾಂಗಣದಲ್ಲಿ ಇಂದು ದಸರಾ ಸಿದ್ಧತೆ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಾಡಹಬ್ಬ ನಮ್ಮ ಮನೆಯ ಸ್ವತ್ತು ಆಗಬಾರದು. ದಸರಾ ಪಾಸ್ ಪಡೆದಿರುವವರಿಗೆ ಹಾಗೂ ಸಾಮಾನ್ಯರಿಗೆ ಮತ್ತು ದೇಶ ವಿದೇಶಗಳಿಂದ ಬರುವವರಿಗೆ ದಸರಾ ವೀಕ್ಷಣೆ ಮಾಡಲು ಅಧಿಕಾರಿಗಳು ಸಹಕರಿಸಬೇಕು. ಇದರಿಂದ ಹೊಸ ಸಂದೇಶ ಜನತೆಗೆ ತಲುಪಬೇಕು ಎಂದರು.

ಸೆಪ್ಟೆಂಬರ್ 29 ರಂದು ಬೆಳಗ್ಗೆ 10 ಗಂಟೆ 21 ನಿಮಿಷಕ್ಕೆ ದಸರಾ ಕ್ರೀಡಾ ಜ್ಯೋತಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಕ್ರೀಡಾ ಜ್ಯೋತಿಯು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಂಚರಿಸಿ ಅಕ್ಟೋಬರ್ 1 ಕ್ಕೆ ಮೈಸೂರಿಗೆ ತಲುಪುವುದು. ಈಗಾಲೇ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ ಪ್ರಾರಂಭವಾಗಿದ್ದು, ಜಿಲ್ಲಾಮಟ್ಟದಲ್ಲಿ ಸೆಪ್ಟಂಬರ್ 14 ರಿಂದ ಪ್ರಾರಂಭವಾಗಲಿದೆ ಎಂದು ದಸರಾ ಕ್ರೀಡಾ ಕೂಟ ಉಪಸಮಿತಿಯ ಸದಸ್ಯರು ಸಭೆಗೆಯಲ್ಲಿ ತಿಳಿಸಿದರು.

ರೈತ ದಸರಾವು ಅಕ್ಟೋಬರ್ 1ರಿಂದ 3ರವರಗೆ ನಡೆಯಲಿದೆ. ಅದರ ಜೊತೆಗೆ ಮತ್ಸ್ಯ ಮೇಳವನ್ನು ಆಯೋಜಿಸಲಾಗುವುದು ಎಂದು ರೈತ ದಸರಾ ಉಪ ಸಮಿತಿಯವರು ಮಾಹಿತಿ ನೀಡಿದರು.

ದಸರಾ ದೀಪಾಲಂಕಾರವು ಮೈಸೂರು ನಗರದ ಸೌಂದರ್ಯ ಹೆಚ್ಚಿಸುತ್ತದೆ.ಪ್ರವಾಸಿಗರು ಸ್ಥಳೀಯರನ್ನು ಆಕರ್ಷಿಸುತ್ತದೆ.ಆಗಾಗಿ ದಸರಾ ದೀಪಾ ಅಲಂಕಾರದ ಬಗ್ಗೆ ಗಮನಹರಿಸುವಂತೆ ದೀಪಲಂಕಾರ ಉಪ ಸಮಿತಿಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಯೋಗ ದಸರಾ ಉಪ ಸಮಿತಿಯವರು ಅದರ ಬಗ್ಗೆ ಎಸ್.ಎ.ರಾಮದಾಸ್ ಅವರಿಂದ ಸಲಹೆ ಮತ್ತು ಸೂಚನೆಗಳನ್ನು ಪಡೆಯುವಂತೆ ತಿಳಿಸಿದರು.

ಆಹಾರ ಮೇಳವು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 10 ರವರಗೆ ಎರಡು ಸ್ಥಳದಲ್ಲಿ ನಿಗದಿಪಡಿಸಲಾಗಿದೆ. ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನ ಹಾಗೂ ಲಲಿತ್ ಮಹಲ್ ಮೈದಾನದಲ್ಲಿ ಆಯೋಜಿಸಲಾಗುವುದು ಎಂದು ಮೂಡಾ ಆಯುಕ್ತರಾದ ಪಿ.ಎಸ್ ಕಾಂತರಾಜು ಸಭೆ ತಿಳಿಸಿದರು.

ಎಸ್.ಎಂ.ಪಿ ಬಿಲ್ಡರ್ಸ್ ಶಿವಪ್ರಕಾಶ್ ಅವರು ದಸರಾ ಆಚರಣೆಗಾಗಿ 5 ಲಕ್ಷ ರೂಪಾಯಿಗಳನ್ನು ಚೆಕ್ ಮೂಲಕ ದೇಣಿಗೆಯಾಗಿ ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ನೀಡಿದರು.

ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಲ್ಪನಾ, ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷಾಧಿಕಾರಿ ಅಭಿರಾಂ ಜಿ ಶಂಕರ್, ನಗರ ಪೋಲಿಸ್ ಆಯುಕ್ತ ಕೆ.ಟಿ. ಬಾಲಕೃಷ್ಣ, ಪೋಲಿಸ್ ವರಿಷ್ಠಾಧಿಕಾರಿ ರಿಷ್ಯಂತ್, ಅಪರಜಿಲ್ಲಾಧಿಕಾರಿ ಪೂರ್ಣಿಮಾ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧೀಕಾರಿ ಕೆ.ಜ್ಯೋತಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X