Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಕಾನೂನು ವಿದ್ಯಾರ್ಥಿನಿಯ ಅತ್ಯಾಚಾರ...

​ಕಾನೂನು ವಿದ್ಯಾರ್ಥಿನಿಯ ಅತ್ಯಾಚಾರ ಆರೋಪ: ಚಿನ್ಮಯಾನಂದನ 7 ಗಂಟೆ ವಿಚಾರಣೆ ನಡೆಸಿದ ಸಿಟ್

ವಾರ್ತಾಭಾರತಿವಾರ್ತಾಭಾರತಿ13 Sept 2019 11:16 AM IST
share
​ಕಾನೂನು  ವಿದ್ಯಾರ್ಥಿನಿಯ ಅತ್ಯಾಚಾರ ಆರೋಪ: ಚಿನ್ಮಯಾನಂದನ 7 ಗಂಟೆ ವಿಚಾರಣೆ ನಡೆಸಿದ ಸಿಟ್

ಹೊಸದಿಲ್ಲಿ, ಸೆ.13: ಬಿಜೆಪಿ ನಾಯಕ ಹಾಗೂ ​ಕಾನೂನು  ವಿದ್ಯಾರ್ಥಿನಿಯ ಅತ್ಯಾಚಾರ ಆರೋಪಿ ಚಿನ್ಮಯಾನಂದನನ್ನು ವಿಶೇಷ ತನಿಖಾ ತಂಡ ಗುರುವಾರ ಸುಮಾರು 7 ಗಂಟೆಗಳ ಕಾಲ ವಿಚಾರಣೆ ನಡೆಸಿದೆ.
ವಿಚಾರಣೆಯನ್ನು ಸಂಜೆ 6:20ರಿಂದ ರಾತ್ರಿ 1.00ರ ತನಕ ನಡೆಸಲಾಗಿದೆ ಎಂದು ಸಿಟ್ ಮೂಲಗಳು ತಿಳಿಸಿವೆ. ಆದರೆ, ಪೊಲೀಸರು ಇನ್ನಷ್ಟೇ ಮಾಜಿ ಕೇಂದ್ರ ಸಚಿವ ಚಿನ್ಮಯಾನಂದನ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಬೇಕಾಗಿದೆ.
   ತನ್ನ ಪುತ್ರಿ ಮಾಡಿರುವ ಆರೋಪಕ್ಕೆ ಪೂರಕವಾಗಿರುವ ನಿರ್ಣಾಯಕ ದಾಖಲೆಗಳು ನಾಪತ್ತೆಯಾಗಿವೆ. ಆರೋಪಿಯ ವಿರುದ್ಧ ಪುರಾವೆಗಳನ್ನು ನನ್ನ ಪುತ್ರಿ ತನ್ನ ಹಾಸ್ಟೆಲ್ ರೂಮ್‌ನಲ್ಲಿ ಸುರಕ್ಷಿತವಾಗಿ ಇಟ್ಟಿದ್ದಳು. ನ್ಯಾಯಾಲಯದ ಆದೇಶದ ಬಳಿಕ ಇದನ್ನು ಸೀಲ್ ಮಾಡಲಾಗಿತ್ತು. ವಿಶೇಷ ತನಿಖಾ ತಂಡ(ಸಿಟ್)ಸೆ.9 ರಂದು ನ್ಯಾಯಾಲಯದಲ್ಲಿ ಸೀಲ್ ತೆರೆದು ನೋಡಿದಾಗ ಕೆಲವು ದಾಖಲೆಗಳು ಹಾಸ್ಟೆಲ್ ರೂಮ್‌ನಿಂದ ಕಳವಾಗಿರುವುದು ಪತ್ತೆಯಾಗಿದೆ ಎಂದು ಕಾನೂನು ವಿದ್ಯಾರ್ಥಿನಿಯ ತಂದೆ ಆರೋಪಿಸಿದ್ದಾರೆ.
12 ವಿಡಿಯೋಗಳು ರಾಜಕಾರಣಿಯಾಗಿ ಪರಿವರ್ತಿತನಾಗಿರುವ ಸಂತ ಚಿನ್ಮಯಾನಂದನ ಕರಾಳ ಮುಖಕ್ಕೆ ಸಾಕ್ಷಿಯಾಗಿದ್ದವು. ಚಿನ್ಮಯಾನಂದ ಮುಖ್ಯಮಂತ್ರಿ ಆದಿತ್ಯನಾಥನ ಆತ್ಮೀಯ ಸ್ನೇಹಿತನಾಗಿರುವ ಕಾರಣ ಪೊಲೀಸರು ಚಿನ್ಮಯಾನಂದನನ್ನು ರಕ್ಷಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕಾನೂನು ವಿದ್ಯಾರ್ಥಿನಿಯ ತಂದೆ ಹೇಳಿದ್ದಾರೆ.
23ರ ಹರೆಯದ ಕಾನೂನು ವಿದ್ಯಾರ್ಥಿನಿ ಶಹಜಾನ್ಪುರದಲ್ಲಿ ಚಿನ್ಮಯಾನಂದ ನಡೆಸುತ್ತಿರುವ ಸ್ವಾಮಿ ವಿವೇಕಾನಂದ ಸ್ನಾತಕೋತ್ತರ ಕಾಲೇಜಿನಲ್ಲಿ ವಿದ್ಯಾಭಾಸ ಮಾಡುತ್ತಿದ್ದಳು. ಬಿಜೆಪಿ ನಾಯಕ ಚಿನ್ಮಯಾನಂದ ತನ್ನನ್ನು ಬ್ಲಾಕ್‌ಮೇಲ್ ಮಾಡಿ, ಪದೇ ಪದೇ ಅತ್ಯಾಚಾರ ನಡೆಸಿದ್ದಲ್ಲದೆ, ಇದನ್ನು ಚಿತ್ರೀಕರಿಸಿದ್ದ ಎಂದು ಯುವತಿ ಆರೋಪಿಸಿದ್ದಾಳೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X