ಸೆ.17ರಂದು ಪೆರಿಯರ್ ಪ್ರಶಸ್ತಿ ಪ್ರದಾನ
ಬೆಂಗಳೂರು, ಸೆ.13: ವಿಚಾರವಾದಿಗಳ ವೇದಿಕೆ ವತಿಯಿಂದ ಪೆರಿಯರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.17ರಂದು ಗಾಂಧಿ ಭವನದಲ್ಲಿ ಏರ್ಪಸಲಾಗಿದೆ ಎಂದು ವೇದಿಕೆಯ ರಾಜ್ಯ ಸಂಚಾಲಕ ಚಳುವಳಿ ರಾಜಣ್ಣ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2017-18ರ ಸಾಲಿನ ಪೆರಿಯರ್ ಪ್ರಶಸ್ತಿಯನ್ನು ವಿಚಾರವಾದಿ ಬಿ.ಟಿ.ಲಲಿತಾ ನಾಯಕ್ ಹಾಗೂ ರಿಪಬ್ಲಿಕನ್ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ರವರಿಗೆ ನೀಡಲಾಗುತ್ತದೆ. 2019ರ ಪೆರಿಯರ್ ಪ್ರಶಸ್ತಿಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ.ಸಮತಾ ದೇಶಮಾನೆ ಮತ್ತು ಮಾನವ ಬಂದುತ್ವ ವೇದಿಕೆಯ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ಗೆ ನೀಡಲಾಗುತ್ತಿದ್ದು, ಪುರಸ್ಕಾರವು ಹತ್ತು ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಗುತ್ತದೆ ಎಂದರು.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದು, ಹೋರಾಟಗಾರ್ತಿ ಕಲೈ ಸೆಲ್ವಿ ಮುಖ್ಯ ಅತಿಥಿಗಳಾಗಿ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.
Next Story