Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ತಾಲೂಕು, ಜಿಲ್ಲಾ ಹಾಗೂ ರಾಜ್ಯ...

ಉಡುಪಿ: ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ13 Sept 2019 9:44 PM IST
share

ಉಡುಪಿ, ಸೆ.13: ಕಳೆದ ವರ್ಷದಂತೆ ಈ ಬಾರಿಯೂ ಭಾರತದ ಗಣತಂತ್ರ ದಿವಸದ ಪ್ರಯುಕ್ತ ಹಾಗೂ ಸಂಧಾನ ದಿವಸವನ್ನು ಆಚರಿಸುವ ಸಲುವಾಗಿ ‘ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು’ ಕುರಿತ ಇಂಗ್ಲೀಷ್/ಹಿಂದಿ ಭಾಷೆಯ ಭಾಷಣ ಸ್ಪರ್ಧೆಯನ್ನು ನೆಹರು ಯುವ ಕೇಂದ್ರ, ತಾಲೂಕು, ಹಾಗೂ ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಿದೆ. ಜಿಲ್ಲೆ, ರಾಜ್ಯಮತ್ತು ರಾಷ್ಟ್ರ ಮಟ್ಟದ ವಿಜೇತರುಗಳಿಗೆ ಆಕರ್ಷಕ ಬಹುಮಾನಗಳನ್ನು ಭಾರತ ಸರಕಾರದ ಯುವ ಕಾಯರ್ ಹಾಗೂ ಕ್ರೀಡಾ ಸಚಿವಾಲಯ ನೀಡಲಿದೆ.

ತಾಲೂಕು ಮಟ್ಟದಲ್ಲಿ ಪ್ರಥಮ ಮೂರು ಸ್ಥಾನ ಪಡೆದವರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ ಪ್ರಶಸ್ತಿ ಪತ್ರ ನೀಡಲಾಗು ವುದು. ಜಿಲ್ಲಾ ಮಟ್ಟದ ವಿಜೇತರಿಗೆ ಪ್ರಥಮ ಬಹುಮಾನ 5,000ರೂ., ದ್ವಿತೀಯ ಬಹುಮಾನ 2,000 ಹಾಗೂ ತೃತೀಯ ಬಹುಮಾನ 1000 ರೂ.ಗಳನ್ನು ನೀಡಲಾಗುವುದು. ಮುಂದಿನ ಹಂತದಲ್ಲಿ ರಾಜ್ಯ ಮಟ್ಟದ ವಿಜೇತರಿಗೆ ಪ್ರಥಮ ಬಹುಮಾನ 25,000ರೂ., ದ್ವಿತೀಯ ಬಹುಮಾನ 10,000 ರೂ., ತೃತೀಯ ಬಹುಮಾನ 5,000 ರೂ. ನೀಡಲಾಗುವುದು.

ಅಂತಿಮ ಸುತ್ತಿನಲ್ಲಿ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನ 2 ಲಕ್ಷ ರೂ., ದ್ವಿತೀಯ ಬಹುಮಾನ ಒಂದು ಲಕ್ಷ ರೂ., ತೃತೀಯ ಬಹುಮಾನ 50,000 ರೂ.ಗಳನ್ನು ನೀಡಲಾಗುವುದು. ಕಳೆದ ವರ್ಷದ ಸ್ಪರ್ಧೆಯಲ್ಲಿ ಉಡುಪಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿ ಶ್ರೇಯಸ್ ಕೋಟ್ಯಾನ್ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಎರಡು ಲಕ್ಷ ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಪಡೆದಿದ್ದರು. 2017-18ನೇ ಸಾಲಿನಲ್ಲಿ ಶೆರ್‌ಲಿನ್ ಡಿ ಅಲ್ಮೇಡಾ ಅವರು ರಾಜ್ಯಮಟ್ಟದಲ್ಲಿ ದ್ವಿತೀಯ ಬಹುಮಾನ ಪಡೆದಿದ್ದರು.

ಈ ಬಾರಿಯ ಭಾಷಣದ ವಿಷಯ: ಸಬ್ಕಾ ಸಾಥ್,ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್‌ನ ಥೀಮ್‌ನೊಂದಿಗೆ ‘ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣ’. ವಿಷಯವನ್ನು ಮಂಡಿಸಲು 9-10 ನಿಮಿಷ ಕಾಲಾವಕಾಶವಿರುತ್ತದೆ. ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ಭಾಷಣ ಮಾಡಲು ಅವಕಾಶ.

ತಾಲೂಕು ಮಟ್ಟದ ಆಯ್ಕೆ ಪ್ರಕ್ರಿಯೆ ವಿವರ. ಉಡುಪಿ, ಕಾಪು, ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಸೆ.24ರಂದು ಬೆಳಗ್ಗೆ 10:30ಕ್ಕೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಎನ್ನೆಸ್ಸೆಸ್ ಅಧಿಕಾರಿ ಪ್ರಿಯಾಶ್ರೀ ಕೆ.ಟಿ(ಮೊಬೈಲ್: 9901566510, 9353169353), ಸುಚಿತ್ (9739430331) ಇವನ್ನು ಸಂಪರ್ಕಿಸಬಹುದು.

ಕಾರ್ಕಳ, ಹೆಬ್ರಿ ತಾಲೂಕುಗಳಿಗೆ ಸಂಬಂಧಿಸಿದಂತೆ ಸೆ.27ರಂದು ಬೆಳಗ್ಗೆ 11 ಗಂಟೆಗೆ ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಎನ್ನೆಸ್ಸೆಸ್ ಸುಚಿತ್ರಾ (8197488357)ರನ್ನು ಸಂಪರ್ಕಿಸಬಹುದು.

ಕುಂದಾಪುರ, ಬೈಂದೂರು ತಾಲೂಕುಗಳಿಗೆ ಸಂಬಂಧಿಸಿದಂತೆ ಸೆ.23ರಂದು ಬೆಳಗ್ಗೆ 11 ಗಂಟೆಗೆ ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅಲ್ಲಿನ ಎನ್ನೆಸ್ಸೆಸ್ ಅಧಿಕಾರಿ ಅರುಣ್ ಕುಮಾರ್ (ಮೊಬೈಲ್ 9480396456, 9972404202)ರನ್ನು ಸಂಪರ್ಕಿಸಬಹುದಾಗಿದೆ.

ಈ ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವ ಅಭ್ಯರ್ಥಿಗಳು 18-29 ವಯೋ ಮಿತಿಯಲ್ಲಿರಬೇಕು. ಅವರು ಜಿಲ್ಲೆಯ ನಿವಾಸಿಗಳಾಗಿರಬೇಕು. ಸ್ಪರ್ಧಾಳುಗಳು ತಮ್ಮ ಪಾಸ್‌ಪೋರ್ಟ್ ಸೈಜ್‌ನ ಒಂದು ಪೋಟೊ, ಆಧಾರ್ ಕಾರ್ಡ್( ಕಡ್ಡಾಯ) ಪ್ರತಿ, ಪ್ಯಾನ್ ಕಾರ್ಡ್/ ಶಾಲಾ ಕಾಲೇಜಿನಿಂದ ಅಥವಾ ಕಚೇರಿ/ಸಂಸ್ಥೆಗಳಿಂದ ನೀಡಲಾದ ಅಧಿಕೃತ ಫೋಟೊ ಇರುವ ಗುರುತಿನ ಚೀಟಿಯನ್ನು ಅಗತ್ಯವಾಗಿ ತರಬೇಕು.

ಈ ಕುರಿತು ಹೆಚ್ಚಿನ ಮಾಹಿತಿಗಳಿಗಾಗಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ವಿಲ್ಪ್ರೆಡ್ ಡಿಸೋಜ ಇವರನ್ನು ಸಂಪರ್ಕಿಸ ಬಹುದು ಎಂದು ನೆಹರು ಯುವ ಕೇಂದ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X