Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿಸೆಂಬರ್‌ನಲ್ಲಿ ಪ್ರಥಮ ವಿದ್ಯಾರ್ಥಿ...

ಡಿಸೆಂಬರ್‌ನಲ್ಲಿ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ15 Sept 2019 8:36 PM IST
share
ಡಿಸೆಂಬರ್‌ನಲ್ಲಿ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನ

ಮಂಗಳೂರು, ಸೆ.15: ತುಳು ಪರಿಷತ್ ಆಶ್ರಯದಲ್ಲಿ ಪ್ರಥಮ ಬಾರಿಗೆ ವಿದ್ಯಾರ್ಥಿ ತುಳು ಸಮ್ಮೇಳನವನ್ನು ಡಿಸೆಂಬರ್‌ನಲ್ಲಿ ಮಂಗಳೂರು ಪುರಭವನದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.

ಮಂಗಳೂರು ಹೊಟೇಲ್ ವುಡ್‌ಲ್ಯಾಂಡ್ಸ್ ಸಭಾಂಗಣದಲ್ಲಿ ನಡೆದ ತುಳು ಪರಿಷತ್ ಕೇಂದ್ರೀಯ ಸಮಿತಿ ಸಭೆಯಲ್ಲಿ ಸಮ್ಮೇಳನದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ವಿದ್ಯಾರ್ಥಿ ತುಳು ಸಮ್ಮೇಳನ ಆಯೋಜನಾ ಸಮಿತಿಯ ಗೌರವಾಧ್ಯಕ್ಷರಾಗಿ ಕಲಾವಿದ, ಸಂಘಟಕ ಸ್ವರ್ಣ ಸುಂದರ್ ಅವರನ್ನು ಆಯ್ಕೆ ಮಾಡಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಸ್ವರ್ಣ ಸುಂದರ್, ಯುವ ಸಮುದಾಯದಲ್ಲಿ ತುಳು ಭಾಷೆ, ಸಂಸ್ಕೃತಿಯ ಬಗ್ಗೆ ಅಭಿಮಾನ ಮತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ತುಳು ಸಮ್ಮೇಳನವು ಅತ್ಯಂತ ಮಹತ್ವದ ಕಾರ್ಯಕ್ರಮವಾಗಲಿದೆ. ತುಳು ಭಾಷಿಗರೆಲ್ಲರೂ ಈ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಮ್ಮೇಳನ ಸಮಿತಿಯ ಅಧ್ಯಕ್ಷ ಪ್ರಭಾಕರ್ ನೀರುಮಾರ್ಗ ಮಾತನಾಡಿ, ವಿದ್ಯಾರ್ಥಿ ತುಳು ಸಮ್ಮೇಳನವು ಅತ್ಯಂತ ಮೌಲಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದರು.

ತುಳು ಪರಿಷತ್ ಅಧ್ಯಕ್ಷ ಹಾಗೂ ಸಮ್ಮೇಳನ ಸಮಿತಿಯ ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸುವರು. ಕಾಲೇಜು ವಿದ್ಯಾರ್ಥಿಗಳೇ ಸಮ್ಮೇಳನದ ಗೋಷ್ಠಿ, ಕಾರ್ಯಕ್ರಮಗಳನ್ನು ನಡೆಸಿಕೊಡುವರು ಎಂದು ಮಾಹಿತಿ ನೀಡಿದರು.

ತುಳು ಪರಿಷತ್ ಪ್ರಧಾನ ಕಾರ್ಯದರ್ಶಿ ಬೆನೆಟ್ ಅಮ್ಮನ್ನ ಮಾತನಾಡಿ, ವಿದ್ಯಾರ್ಥಿ ಸಮ್ಮೇಳನದ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಬದುಕಿನ ಸಂಶೋಧನೆ, ದಾಖಲೀಕರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯಲಿದೆ ಎಂದು ತಿಳಿಸಿದರು.

ತುಳು ಪರಿಷತ್ ಉಪಾಧ್ಯಕ್ಷ ಧರಣೇಂದ್ರಕುಮಾರ್, ಪ್ರೊ.ವಿನುತಾ ರೈ, ಮಮತಾ ಡಿ.ಎಸ್.ಗಟ್ಟಿ, ಶಿವಾನಂದ ಕರ್ಕೇರಾ, ಡಾ.ವಾಸುದೇವ ಬೆಳ್ಳೆ, ಪ್ರಶಾಂತ್ ಕಾರಂತ್, ವಾಣಿ ರಾಜಗೋಪಾಲ್, ಪಲ್ಲವಿ ಕಾರಂತ್ ಸಭೆಯಲ್ಲಿ ಮಾತನಾಡಿದರು.

ವಿದ್ಯಾರ್ಥಿ ತುಳು ಸಮ್ಮೇಳನದ ವಿವಿಧ ಕಾರ್ಯಕ್ರಮ ಸ್ವರೂಪಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಈ ಚರ್ಚೆಯಲ್ಲಿ ತುಳು ಪರಿಷತ್ ಸದಸ್ಯರಾದ ಸುಭಾಶ್ಚಂದ್ರ ಕಣ್ವತೀರ್ಥ, ಗೋಪಾಲ್ ಅಂಚನ್, ಅಕ್ಷತಾ ಶೆಟ್ಟಿ, ಶೋಭಾ ಶೆಟ್ಟಿ, ರಮೇಶ್ ಮಂಚಕಲ್, ಬಾಬು ಪಾಂಗಾಳ, ಇಸ್ಮಾಯೀಲ್ ಪೆರಿಂಜೆ, ಸುದರ್ಶನ್, ಅಮಿತಾ ಆಳ್ವ, ಮಣಿ ರೈ, ಅವಿನಾಶ್, ಹರೀಶ್, ವಸಂತ್, ದಿನೇಶ್, ಜಯಲಕ್ಷ್ಮೀ ಶೆಟ್ಟಿ, ಭರತೇಶ್ ಮೊದಲಾದವರು ಭಾಗವಹಿಸಿದ್ದರು.

ಪ್ರಧಾನ ಸಭೆಗೆ ಮೊದಲು ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಸಮಾಲೋಚನಾ ಸಭೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಸಮ್ಮೇಳನದ ಕಾರ್ಯಕ್ರಮಗಳ ಸ್ವರೂಪದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.

ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ತಮ್ಮ ಕಾಲೇಜುಗಳಲ್ಲಿ ವಿವಿಧ ಗೋಷ್ಠಿ, ಸ್ಪರ್ಧೆಗಳನ್ನು ಆಯೋಜಿಸುವುದಾಗಿ ವಿದ್ಯಾರ್ಥಿಗಳು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X