ಗಿರಿಗಿಟ್ ಪ್ರಕರಣ: ಇಬ್ಬರ ಬಂಧನ
ಮಂಗಳೂರು, ಸೆ.15: ‘ಗಿರಿಗಿಟ್’ ತುಳು ಚಿತ್ರಪ್ರದರ್ಶನಕ್ಕೆ ತಡೆಯಾಜ್ಞೆ ತಂದ ವಕೀಲರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂದರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉರ್ವ ನಿವಾಸಿ ಭಾಸ್ಕರ (50) ಮತ್ತು ಸುರತ್ಕಲ್ ಕೃಷ್ಣಾಪುರ ನಿವಾಸಿ ರಿತೇಶ್ (32) ಬಂಧಿತರು.
ಈ ಪ್ರಕರಣ ಕುರಿತಂತೆ ಪೊಲೀಸರು ಶನಿವಾರ ಎಂಟು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇನ್ನೂ ಕೆಲವು ಮಂದಿ ಆರೋಪಿಗಳಿದ್ದು, ಅವರನ್ನು ಕೂಡ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ತಡೆಯಾಜ್ಞೆ ತಂದ ವಕೀಲರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ ಆರೋಪದ ಮೇಲೆ ಒಟ್ಟು ಎರಡು ಪ್ರತ್ಯೇಕ ಪ್ರಕರಣಗಳು ಬಂದರು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.
Next Story





