Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಕರ್ತರಿಗೆ ಕಾನೂನಿನ ತಿಳುವಳಿಕೆ...

ಪತ್ರಕರ್ತರಿಗೆ ಕಾನೂನಿನ ತಿಳುವಳಿಕೆ ಅಗತ್ಯ: ಸುಧೀರ್ ಕುಮಾರ್ ಮುರೊಳ್ಳಿ

ವಾರ್ತಾಭಾರತಿವಾರ್ತಾಭಾರತಿ16 Sept 2019 10:28 PM IST
share
ಪತ್ರಕರ್ತರಿಗೆ ಕಾನೂನಿನ ತಿಳುವಳಿಕೆ ಅಗತ್ಯ: ಸುಧೀರ್ ಕುಮಾರ್ ಮುರೊಳ್ಳಿ

ವಿದ್ಯಾಗಿರಿ: “ಆರಾಧನೆಗೆ ಶ್ರೇಷ್ಠ ಗ್ರಂಥ ಭಾರತದ ಸಂವಿಧಾನವಾಗಿದೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಪ್ರಜಾಪ್ರಭುತ್ವ ಮತ್ತು ಭಾರತೀಯ ಸಂವಿಧಾನದ ಮೂಲ ಅಡಿಪಾಯವಾಗಿವೆ ಎಂದು ಖ್ಯಾತ ವಕೀಲರು ಹಾಗೂ ವಾಗ್ಮಿ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.

ಅವರು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಲಾದ “ಮಾಧ್ಯಮ ಮತ್ತು ಕಾನೂನು” ಎಂಬ ವಿಷಯದ ಕುರಿತು ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪತ್ರಕರ್ತರು ಯಾವಾಗಲೂ ಮಾಧ್ಯಮ ಕಾನೂನು ಮತ್ತು ಕಾಯ್ದೆಗಳ ಬಗ್ಗೆ ತಿಳಿದುಕೊಂಡಿರಬೇಕು. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ಸುದ್ದಿಗಳ ನೈಜತೆಯನ್ನು ಅರಿತು ಪ್ರಸಾರ ಮಾಡಬೇಕು. ಕೆಲವೊಮ್ಮೆ ಸುದ್ದಿಗಳನ್ನು ಕೊಡುವುದರಿಂದ ಆಗುವ ಅಪಾರ್ಥಕ್ಕೆ ಇಡೀ ಸಮಾಜ ಬೆಲೆ ತೆರಬೇಕಾಗುತ್ತದೆ. ಏಕಾಧಿಪತ್ಯದಲ್ಲಿ ಜನರಿಗೆ ಪ್ರಶ್ನಿಸುವಂತಹ ಅವಕಾಶಗಳಿರುವುದಿಲ್ಲ. ಆದರೆ ಸಂವಿಧಾನವು ಅದಕ್ಕೆ ಪೂರಕವಾಗಿದೆ. ನಮ್ಮಲ್ಲಿನ ಅಂತರಂಗದ ಸಿದ್ಧಾಂತಗಳು ಬದಲಾಗಬೇಕಿದೆ ಎಂದರು.

ಅನುವಾದಕರಾದವರು ಪ್ರತಿಯೊಂದು ವಿಷಯವನ್ನು ಅರಿತು ಅನುವಾದಿಸಬೇಕು. ಎರಡನೇ ಮಹಾಯುದ್ಧದ ಸಂಧರ್ಭದಲ್ಲಿ ಜಪಾನ್‍ನ ವಿರುದ್ಧ ದೇಶಗಳು ಜಪಾನ್ ಯುದ್ಧ ಮಾಡುತ್ತದೋ ಅಥವಾ ಶರಣಾಗುತ್ತದೋ ಎಂದು ಕೇಳಿದಾಗ  ಜಪಾನ್ ಪರಿಶೀಲಿಸುತ್ತೇವೆ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದರೂ ಒಬ್ಬ ಪತ್ರಕರ್ತ ಮಾಡಿದ ತಪ್ಪು ಅನುವಾದದಿಂದ ಹಿರೋಶಿಮಾ ನಾಗಸಾಕಿ ಮೇಲೆ ಬಾಂಬ್ ದಾಳಿಯಾಯಿತು.  ಜಪಾನ್‍ನ ಮೊಕುಸಾಟ್ಸು ಎಂಬ ಪದಕ್ಕೆ ಪರಿಶೀಲಿಸುತ್ತೇನೆ ಹಾಗೂ ನಿರ್ಲಕ್ಷಿಸುತ್ತನೆ ಎಂಬ ಅರ್ಥವಿದೆ. ಈ ಪದವನ್ನು ಪರ್ತಕರ್ತ ಅನುವಾದಿಸುವಾಗ ಮಾಡಿದ ಯಡವಟ್ಟಿನಿಂದ ಇಂದಿನವರೆಗೂ ಆ ಪ್ರದೇಶದಲ್ಲಿ ಯಾತನೆ ಅನುಭವಿಸುವ ಸ್ಥಿತಿ ಒದಗಿ ಬಂದಿದೆ. ಈ ಕಾರಣದಿಂದ ಪತ್ರಕರ್ತನಿಗೆ ವಿಷಯದ ಕುರಿತ ಸರಿಯಾದ ತಿಳುವಳಿಕೆ ಹಾಗೂ ಪದಗಳ ಬಳಕೆಯ ಪರಿಜ್ಞಾನ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಆಡಳಿತಾಧಿಕಾರಿ ಪ್ರೊ.ಬಾಲಕೃಷ್ಣ ಶೆಟ್ಟಿ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಂಯೋಜಕ ಡಾ.ಶ್ರೀನಿವಾಸ ಪೆಜತಾಯ, ಪದವಿ ವಿಭಾಗ ಮುಖ್ಯಸ್ಥೆ ರೇಷ್ಮಾ ಉಪಸ್ಥಿತರಿದ್ದರು. ದಿಶಾ ಭಟ್ ಸ್ವಾಗತಿಸಿ, ಶ್ರೀಲಕ್ಷ್ಮಿ ಘಾಟೆ ವಂದಿಸಿ, ಆಶ್ರಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X