Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರ್ಥಿಕ ಹಿಂಜರಿತದಿಂದ ಆಟೋ ಮೊಬೈಲ್...

ಆರ್ಥಿಕ ಹಿಂಜರಿತದಿಂದ ಆಟೋ ಮೊಬೈಲ್ ಕ್ಷೇತ್ರಕ್ಕೆ ಹಿನ್ನಡೆಯಾಗಿರುವುದು ಸತ್ಯ: ಸಚಿವ ಜಗದೀಶ್ ಶೆಟ್ಟರ್

ವಾರ್ತಾಭಾರತಿವಾರ್ತಾಭಾರತಿ17 Sept 2019 11:46 PM IST
share
ಆರ್ಥಿಕ ಹಿಂಜರಿತದಿಂದ ಆಟೋ ಮೊಬೈಲ್ ಕ್ಷೇತ್ರಕ್ಕೆ ಹಿನ್ನಡೆಯಾಗಿರುವುದು ಸತ್ಯ: ಸಚಿವ ಜಗದೀಶ್ ಶೆಟ್ಟರ್

ತುಮಕೂರು,ಸೆ.17: ಕೈಗಾರಿಕಾ ವಲಯದಲ್ಲಿ ಉದ್ಯೋಗಾವಕಾಶ ಸೃಷ್ಠಿ ಹಾಗೂ ಆರ್ಥಿಕ ಮಟ್ಟ ಚೇತರಿಕೆಗೆ ಕ್ರಮ ಕೈಗೊಳ್ಳುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‍ ಶೆಟ್ಟರ್ ತಿಳಿಸಿದರು. 

ಆರ್ಥಿಕ ಹಿಂಜರಿತ ಕೇವಲ ನಮ್ಮ ರಾಜ್ಯ, ರಾಷ್ಟ್ರಕ್ಕೆ ಮಾತ್ರ ಆಗಿಲ್ಲ. ಇಡೀ ಜಗತ್ತಿನಲ್ಲೇ ಇದೆ. ಆದರೆ ಇದರಿಂದ ಆಟೋ ಮೊಬೈಲ್ ಕ್ಷೇತ್ರಕ್ಕೆ ಭಾರೀ ಹಿನ್ನಡೆಯಾಗಿರುವುದು ಸತ್ಯ. ಈ ಎಲ್ಲದರ ಬಗ್ಗೆ ಅಧ್ಯಯನ ನಡೆಸಿ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. 

ನಗರದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡುವ ಮುನ್ನ ಸಿದ್ದಗಂಗಾ ಮಠಕ್ಕೆ ತೆರಳಿ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗಾರಿಕಾ ಕ್ಷೇತ್ರದಲ್ಲಿ ಕೆಲವು ವಲಯಗಳಿಗೆ ಆರ್ಥಿಕ ಹಿಂಜರಿತ ಪರಿಣಾಮ ಬೀರಿದೆ. ಇಡೀ ಜಗತ್ತಿನಲ್ಲೇ ಆಟೋಮೊಬೈಲ್ ಕ್ಷೇತ್ರದ ಮೇಲೆ ಇದರ ಪರಿಣಾಮ ಬೀರಿದೆ ಎಂದರು. 

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ಅಧ್ಯಯನ ನಡೆಸುತ್ತಿದ್ದು, ಆದಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವಲ್ಲಿ ಆದ್ಯತೆ ನೀಡುವಂತೆ ಕೈಗಾರಿಕೋದ್ಯಮಿಗಳಿಗೆ ಒತ್ತಾಯ ಮಾಡಲಾಗುವುದು ಎಂದರು. 

ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ಶ್ರೀಮಠಕ್ಕೆ ಭೇಟಿ ನೀಡಿದ್ದು, ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದಾರೆ. ಹಾಗೆಯೇ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದವನ್ನು ಪಡೆದಿದ್ದೇನೆ. ಇನ್ನು ಮುಂದೆ ಎಲ್ಲ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸುವುದಾಗಿ ಅವರು ಹೇಳಿದರು.  

ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಇರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಆ ಬಗ್ಗೆ ಯಾರೂ ಸಹ ಹೇಳಿಕೆಯನ್ನೂ ಕೊಟ್ಟಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.  

ಅಸ್ಪೃಶ್ಯತೆ ಅಂತ್ಯವಾಗಲಿ: ಅಭಿವೃದ್ದಿ ಕಾರ್ಯದ ವಿಚಾರವಾಗಿ ಬಂದ ಸಂಸದರನ್ನೇ ಗ್ರಾಮ ಪ್ರವೇಶಕ್ಕೆ ಅವಕಾಶ ನೀಡದಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಜಗತ್ತು ಬದಲಾವಣೆಯಾಗಿದೆ. ಇಂಥ ಸಂದರ್ಭದಲ್ಲಿ ಸ್ಪೃಶ್ಯ, ಅಸ್ಪೃಶ್ಯತೆ ಎಂಬುದು ಅಂತ್ಯವಾಗಬೇಕು ಎಂದು ಸಚಿವ ಜಗದೀಶ್‍ ಶೆಟ್ಟರ್ ಹೇಳಿದರು.  

ಜಗತ್ತು ಬದಲಾವಣೆಯಾಗತ್ತಿರುವಾಗ ಇಂತಹ ಮೌಢ್ಯತೆಗಳು ಜೀವಂತವಾಗಿರುವುದು ದುರ್ದೈವ. 12ನೇ ಶತಮಾನದಲ್ಲಿ ಬಸವಣ್ಣನವರು ಅಸ್ಪೃಶ್ಯತೆಯ ವಿರುದ್ಧ ಹೋರಾಟ ನಡೆಸಿದ್ದರು. ಬಸವಣ್ಣನವರ ಮಾದರಿಯಲ್ಲೇ ಅಂಬೇಡ್ಕರ್, ಮಹಾತ್ಮ ಗಾಂಧೀಜಿಯವರು ಸಹ ತಮ್ಮ ಹೋರಾಟವನ್ನು ಮುಂದುವರೆಸಿದ್ದರು. ಆದರೂ ಸಹ 21ನೇ ಶತಮಾನದಲ್ಲೂ ಈ ಅಸ್ಪೃಶ್ಯತೆ ಜೀವಂತವಾಗಿರುವುದು ತಲೆತಗ್ಗಿಸುವಂತಹ ಸಂಗತಿ, ಇದು ಖಂಡನೀಯ ಎಂದರು. 

ಅಸ್ಪೃಶ್ಯತೆ, ಮೂಢನಂಬಿಕೆಗಳ ಬಗ್ಗೆ ಗ್ರಾಮಸ್ಥರು ವಿಚಾರ ಮಾಡಿಕೊಳ್ಳಬೇಕು. ಇದರಿಂದ ದೂರಗಾಮಿ ಪರಿಣಾಮಗಳು ಆಗುತ್ತವೆ. ಆದ್ದರಿಂದ ಗ್ರಾಮಸ್ಥರೆಲ್ಲಾ ಒಂದೆಡೆ ಕುಳಿತು ಈ ಆಚರಣೆಗೆ ಅಂತ್ಯ ಹಾಡಬೇಕು ಎಂದರು. ಸಂಸದ ನಾರಾಯಣಸ್ವಾಮಿ ಅವರನ್ನು ಗ್ರಾಮಕ್ಕೆ ಕರೆದುಕೊಂಡು ಹೋಗಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಅವರು ಹೇಳಿದರು. ಓರ್ವ ಲೋಕಸಭಾ ಸದಸ್ಯನಿಗೆ ಈ ಗತಿ ಬಂದರೆ ಇನ್ನು ಸಾಮಾನ್ಯರ ಪರಿಸ್ಥಿತಿ ಏನು ಎಂದು ಆತಂಕ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಈ ಮೌಢ್ಯ ಆಚರಣೆ ವಿರುದ್ಧ ಗ್ರಾಮಸ್ಥರಲ್ಲಿ ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು. ಒಂದು ವೇಳೆ ಅಧಿಕಾರಿಗಳ ಸಲಹೆ-ಸೂಚನೆ, ಜನಜಾಗೃತಿ ಮೂಡಿಸುವ ಕಾರ್ಯ ಇದ್ಯಾವುದಕ್ಕೂ ಸ್ಪಂದಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಅವರು ಎಚ್ಚರಿಸಿದರು. 

ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ಮುಖಂಡರಾದ ಶಿವಪ್ರಸಾದ್, ರವಿ ಹೆಬ್ಬಾಕ, ಕೊಪ್ಪಲ್ ನಾಗರಾಜು, ಪಾಲಿಕೆ ಸದಸ್ಯ ಮಲ್ಲಿಕಾರ್ಜುನ್, ರುದ್ರೇಶ್, ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ, ಕೆಐಎಡಿಬಿ ಸಿಇಓ ಬಸವರಾಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X