ಸೆ.19: ಎಸ್ಸೆಸ್ಸೆಫ್ ದ.ಕ. ವೆಸ್ಟ್ ಝೋನ್ ನಿಂದ ‘ಝಕ್ವಿಕ್ ಕ್ಯಾಂಪ್’
ಕೊಣಾಜೆ, ಸೆ.18: ಎಸ್ಸೆಸ್ಸೆಫ್ ದ.ಕ. ವೆಸ್ಟ್ ಝೋನ್ ನಿಂದ ‘ಝಕ್ವಿಕ್ ಕ್ಯೂ ಟೀಮ್ ಮೆಂಬರ್ಸ್ ಮೀಟ್’ ಕಾರ್ಯಕ್ರಮವು ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಅಧ್ಯಕ್ಷತೆಯಲ್ಲಿ ಸೆ.19ರಂದು ಸಂಜೆ 6 ಗಂಟೆಗೆ ತಿಬ್ಲೆಪದವುವಿನ ಅಲ್- ಮದೀನಾ ಹಾಲ್ ನಲ್ಲಿ ನಡೆಯಲಿದೆ.
ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸದಸ್ಯ ಸೈಯದ್ ಖುಬೈಬ್ ತಂಙಳ್ ರ ದುಆದೊಂದಿಗೆ ಆರಂಭವಾಗುವ ಕಾರ್ಯಕ್ರಮವನ್ನು ಅಲ್- ಮದೀನಾ ಸಂಸ್ಥೆಯ ಜನರಲ್ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸುವರು.
ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ಹಾಗೂ ರಾಜ್ಯ ಸದಸ್ಯ ನೌಫಲ್ ಸಖಾಫಿ ಕಳಸ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು. ಎಸ್ಸೆಸ್ಸೆಫ್ ದ.ಕ. ಜಿಲ್ಲಾಧ್ಯಕ್ಷ ಇಬ್ರಾಹೀಂ ಸಖಾಫಿ ಸೆರ್ಕಳ ಪ್ರಾಸ್ತಾವಿಕ ಭಾಷಣ ಮಾಡುವರು ಎಂದು ಎಸ್ಸೆಸ್ಸೆಫ್ ದ.ಕ. ವೆಸ್ಟ್ ಝೋನ್ ಪ್ರಧಾನ ಕಾರ್ಯದರ್ಶಿ ಹೈದರಲಿ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story