ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಮಣಿಪಾಲ, ಸೆ.18: ಕುಷ್ಠ ರೋಗದಿಂದ ಬಳಲುತ್ತಿದ್ದ 80 ಬಡಗುಬೆಟ್ಟು ಗ್ರಾಮದ ಕೆಳಕಬ್ಯಾಡಿಯ ವಾಸು ನಾಯ್ಕ(49) ಎಂಬವರು ಸೆ.17ರಂದು ಜೀವನದಲ್ಲಿ ಜಿಗುಪ್ಸೆಗೊಂಡು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ಕಟಪಾಡಿ ಮಟ್ಟು ನಿವಾಸಿ ಸುಧಾಕರ ಸಾಲ್ಯಾನ್(55) ಎಂಬವರು ಸೆ.17ರಂದು ರಾತ್ರಿ ವೇಳೆ ಮನೆಯ ಎದುರುಗಡೆ ಸೀಟಿನ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ ಆಲಂಬಿ ನಿವಾಸಿ ಪಾಂಡುರಂಗ ನಾಯ್ಕ (59) ಎಂಬವರು ಸೆ.14ರ ಸಂಜೆಯಿಂದ ಸೆ.17ರ ಬೆಳಗಿನ ಮಧ್ಯಾವಧಿಯಲ್ಲಿ ಸಿಮೆಂಟ್ ಶೀಟಿನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story





