ಬಿಎಂಟಿಸಿ ಬಸ್ ಬೈಕ್‌ಗೆ ಢಿಕ್ಕಿ: ವ್ಯಕ್ತಿ ಸಾವು

ಬೆಂಗಳೂರು, ಸೆ.18: ಬಿಎಂಟಿಸಿ ಬಸ್ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿರುವ ದುರ್ಘಟನೆ ಎಚ್‌ಎಎಲ್ ಪೊಲೀಸ್ ನಿಲ್ದಾಣದ ಬಳಿ ನಡೆದಿದೆ. ಕಗ್ಗದಾಸಪುರದ ನಾಗಾರ್ಜುನ(32) ಮೃತರು ಎಂದು ಗುರುತಿಸಲಾಗಿದೆ.
ಮಂಗಳವಾರ ನಾಗಾರ್ಜುನ ಅವರು ಕೆಲಸಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಎಚ್‌ಎಎಲ್ ಪೊಲೀಸ್ ಠಾಣೆ ಬಳಿ ನಗರದಿಂದ ಮಾರತ್‌ಹಳ್ಳಿ ಕಡೆ ಹೋಗುತ್ತಿದ್ದ ಮಾರ್ಗದಲ್ಲಿ ಬಿಎಂಟಿಸಿ ಬಸ್, ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡ ನಾಗಾರ್ಜುನ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿರುವ ಎಚ್‌ಎಎಲ್ ವಿಮಾನ ನಿಲ್ದಾಣ ಸಂಚಾರ ಪೊಲೀಸರು ಬಸ್ ಚಾಲಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
Next Story