ಸೆ.21ಕ್ಕೆ ನೇರ ಫೋನ್- ಇನ್ ಕಾರ್ಯಕ್ರಮ
ಬೆಂಗಳೂರು, ಸೆ.19: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿ ಸೆ.21ರಂದು ಮಂಡಲಿಯ ಅಧ್ಯಕ್ಷರೊಂದಿಗೆ ನೇರ ಫೋನ್- ಇನ್ ಕಾರ್ಯಕ್ರಮವನ್ನು ಆಯೋಜಿಸಿದೆ.
ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ, ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು- ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು. ದೂ.ಸಂ: 080- 22945119 ಅನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story