Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂತ್ರಸ್ತರಿಗೆ ಪರ್ಯಾಯ ಭೂಮಿ ನೀಡಲು 374...

ಸಂತ್ರಸ್ತರಿಗೆ ಪರ್ಯಾಯ ಭೂಮಿ ನೀಡಲು 374 ಎಕರೆ ಜಮೀನು ಗುರುತಿಸಲಾಗಿದೆ: ಸಚಿವ ಆರ್.ಅಶೋಕ್

ಚಿಕ್ಕಮಗಳೂರು: ನೆರೆ ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ19 Sept 2019 10:46 PM IST
share
ಸಂತ್ರಸ್ತರಿಗೆ ಪರ್ಯಾಯ ಭೂಮಿ ನೀಡಲು 374 ಎಕರೆ ಜಮೀನು ಗುರುತಿಸಲಾಗಿದೆ: ಸಚಿವ ಆರ್.ಅಶೋಕ್

ಚಿಕ್ಕಮಗಳೂರು, ಸೆ.19: ಅತಿವೃಷ್ಟಿಯಿಂದ ಮನೆ ಹಾಗೂ ಭೂಮಿಯನ್ನು ಕಳೆದುಕೊಂಡವರಿಗೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೂಡಿಗೆರೆ ತಾಲೂಕಿನ ಬಿದರಹಳ್ಳಿಯ ನೆರೆ ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಅಪಾರ ಭೂಮಿ, ಮನೆ ಹಾಗೂ ಬೆಳೆಗಳು ನಾಶವಾಗಿದ್ದು, ಸಂತ್ರಸ್ತರಿಗೆ ತುಂಬಲಾರದ ನಷ್ಟವಾಗಿದೆ. ಈ ನಿಟ್ಟಿನಲ್ಲಿ ಮನೆ, ಭೂಮಿ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಂತ್ರಸ್ತರಿಗೆ ಪರ್ಯಾಯವಾಗಿ ಮನೆ ಕಟ್ಟಲು ಜಾಗ ಹಾಗೂ ಜಮೀನನ್ನು ನೀಡಲು ಈಗಾಗಲೇ 374 ಎಕರೆ ಸರಕಾರಿ ಜಾಗವನ್ನು ಗುರುತಿಸಿದೆ. ಮುಂದಿನ ದಿನಗಳಲ್ಲಿ ಈ ಜಾಗವನ್ನು ಸಂತ್ರಸ್ತರಿಗೆ ನೀಡಲಾಗುವುದು. ಜೊತೆಗೆ ಬಾಡಿಗೆ ಮನೆಯಲ್ಲಿರುವರನ್ನು ಜಿಲ್ಲಾಧಿಕಾರಿಗಳೇ ಗುರುತಿಸಿ ತಲಾ 5000 ರೂ. ನೀಡಬೇಕೆಂದು ಸೂಚಿಸಿದರು. 

ಯಾವುದೇ ಸಂತ್ರಸ್ತರಿಗೆ ಜಮೀನು ಖಾತೆ ಇದ್ದರೂ ಅಥವಾ ಇಲ್ಲದಿದ್ದರೂ ಕಣ್ಣಿಗೆ ಕಾಣುವ ನೋವಿನ ಸಂದರ್ಭಗಳನ್ನು ಅರಿತು ಯಾವ ದಾಖಲಾತಿ ಇಲ್ಲದೆಯೇ ಅಧಿಕಾರಿಗಳು ಸಂತ್ರಸ್ತರಿಗೆ ಪರಿಹಾರ ನೀಡಲು ಮುಂದಾಗಬೇಕು. ಅತಿವೃಷ್ಟಿಯಿಂದ ಜೀವ ಕಳೆದುಕೊಂಡವರಿಗೆ ತಲಾ 5 ಲಕ್ಷ ನೀಡಲಾಗಿದೆ. ಆ ಹಣವನ್ನು ಚೆಕ್ ಮುಖಾಂತರ ನೀಡದೇ ನೇರವಾಗಿ ಸಂತ್ರಸ್ತರ ಖಾತೆಗೆ ಹಣ ವರ್ಗಾವಣೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿ, ಪಾತ್ರೆ ಪರಿಕರಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 10,000 ರೂ. ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿಗಳ ಪರಿಹಾರ ನಿಧಿ ಖಾತೆಯಲ್ಲಿ ಅನುದಾನವಿದ್ದು, ಹಾನಿಗೊಳಗಾಗಿರುವ ಪ್ರದೇಶಗಳಿಗೆ ಅವಶ್ಯಕತೆಗನುಗುಣವಾಗಿ ಹಣ ಬಿಡುಗಡೆ ಮಾಡಬಹುದಾಗಿದ್ದು, ಕೇಂದ್ರ ಸರ್ಕಾರದ ಬೆಳೆ ಹಾನಿ ಪರಿಹಾರ ಇನ್ನೂ ನಾಲ್ಕೈದು ದಿನಗಳಲ್ಲಿ ಬರಲಿದೆ ಎಂದು ಭರವಸೆ ನೀಡಿದರು. ಸಂತ್ರಸ್ತರನ್ನು ಸ್ಥಳಾಂತರಿಸಲು ಜಾಗ ಗುರುತಿಸಿರುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮಳೆ ಹಾನಿಯಿಂದ ಭಾಗಶಃ ಶೇ.80ರಷ್ಟು ಮನೆ ಕಳೆದುಕೊಂಡವರಿಗೆ ಶೀಘ್ರ 1 ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ಹಣವನ್ನು ನೆರೆ ಸಂತ್ರಸ್ತರಿಗೆ ನೇರವಾಗಿ ನೀಡುವುದರಿಂದ ತಮ್ಮ ತಮ್ಮ ಮನೆಗಳ ದುರಸ್ಥಿ ಕಾರ್ಯಗಳನ್ನು ಸುಲಭವಾಗಿ ಸಂತ್ರಸ್ತರೇ ಕೈಗೊಳ್ಳಬಹುದಾಗಿದೆ. ಅಲ್ಲದೇ ನೆರೆ ಸಂತ್ರಸ್ತರ ಮಕ್ಕಳಿಗೆ ಅವಶ್ಯವಿರುವ ಶಿಕ್ಷಣವನ್ನು ಒದಗಿಸಬೇಕು ಹಾಗೂ ಸಂತ್ರಸ್ತ ವಿದ್ಯಾರ್ಥಿಗಳನ್ನು ಯಾವುದೇ ಕಾರಣಕ್ಕೂ ಅನುತ್ತೀರ್ಣ ಮಾಡಬಾರದೆಂದು ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರಲ್ಲದೇ ಸಂತ್ರಸ್ತರಿಗೆ 100 ದಿನಗಳ ನರೇಗಾದ ವತಿಯಿಂದ ಕೆಲಸ ಒದಗಿಸಲಾಗುವುದುಎಂದು ಹೇಳಿದರು.

ಈ ಸಂದರ್ಭದಲ್ಲಿ ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ ಕುಮಾರಸ್ವಾಮಿ, ಜಿ.ಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಮಾಜಿ ಸಚಿವ ಜೀವರಾಜ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ.ಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಎಸ್.ಅಶ್ವತಿ, ಅಪರ ಜಿಲ್ಲಾಧಿಕಾರಿ ಡಾ.ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

ಅತಿವೃಷ್ಟಿಯಿಂದ ಸಂತ್ರಸ್ತರಾಗಿ ಬಿದರಹಳ್ಳಿ ಗ್ರಾಮದಲ್ಲಿನ ನೆರ ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ್ದ ಸಚಿವ ಅಶೋಕ್, ಆಹಾರ ಗುಣ ಮಟ್ಟವನ್ನು ಪರಿಶೀಲಿಸುವ ಉದ್ದೇಶದಿಂದ ಸಂತ್ರಸ್ತರ ಜೊತೆ ಊಟ ಮಾಡಿದರು. ಈ ವೇಳೆ ಸಂತ್ರಸ್ತರು, ಕಾಳಜಿ ಕೇಂದ್ರಕ್ಕೆ ಸಚಿವರು ಬರುತ್ತಾರೆಂಬ ಕಾರಣಕ್ಕೆ ಇಂದು ಒಳ್ಳೆಯ ಅಡುಗೆ ಮಾಡಿ ಹಾಕಿದ್ದಾರೆ. ಬಾಕಿ ದಿನದಂದು ಕಳಪೆ ಗುಣಮಟ್ಟದ ಊಟ ನೀಡುತ್ತಾರೆ. ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಸಚಿವರ ಬಳಿ ದೂರು ಹೇಳಿದರು. ಇದಕ್ಕೆ ಸಚಿವ ಅಶೋಕ್, ಜಿಲ್ಲಾಧಿಕಾರಿ ಸೇರಿದಂತೆ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ಪಡೆದು, ಸಂತ್ರಸ್ತರಿಗೆ ಪ್ರತಿನಿತ್ಯವೂ ಉತ್ತಮ ಆಹಾರ ನೀಡಬೇಕು. ಈ ಬಗ್ಗೆ ದೂರು ಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X