Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ವಿದ್ಯಾರ್ಥಿಗಳಿಗೆ ಉಚಿತ ಸೈಕಲ್...

ಭಟ್ಕಳ: ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ20 Sept 2019 6:12 PM IST
share
ಭಟ್ಕಳ: ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ

ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿಕ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು.

ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ನೀಡುತ್ತಿರುವ ಉದ್ದೇಶ ಯಾಕೆಂದು ವಿದ್ಯಾರ್ಥಿಗಳು ಮೊದಲು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳ ಶಿಕ್ಷಣದ ಮಟ್ಟ ಹೆಚ್ಚಿಸಲು ಮತ್ತು ನಿಮ್ಮ ಉಜ್ವಲ ಭವಿಷ್ಯವನ್ನು ರೂಪಿಸಬೇಕೆಂಬ ಉದ್ದೇಶದಿಂದ ಸರಿಯಾದ ಸಮಯಕ್ಕೆ ಶಾಲೆಗೆ ಹೋಗಿ ತಲುಪಿಕೊಂಡು ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂದು ಸರ್ಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಿಕೊಂಡು ಬರುತ್ತಿದ್ದೆ. ಅದರ ಸರಿಯಾದ ಉಪಯೋಗ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಸರ್ಕಾರ ನಿಮಗೆ ಉಚಿತವಾಗಿ ಸೈಕಲ್ ನೀಡುತ್ತಿದೆ ಎಂದು ತಿಳಿದುಕೊಳ್ಳಬೇಡಿ, ಅದು ನಿಮ್ಮ ಹಣ, ಸಾರ್ವಜನಿಕರ ಹಣ, ನಿಮ್ಮ ಹಣದಲ್ಲಿಯೇ ನಿಮಗೆ ಸೈಕಲ್ ನೀಡುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಉಚಿತ ಸೈಕಲ್ ವಿತರಣೆಯಾದ ನಂತರ ಅದು ಹೆಚ್ಚಾಗಿ ದುರುಪಯೋಗವಾಗುತ್ತಿದೆ. ವಿದ್ಯಾರ್ಥಿಗಳ ಹತ್ತಿರ ಇರದೇ ಬೇರೆ ವ್ಯಕ್ತಿಗಳು ಅದರ ಉಪಯೋಗ ಪಡೆಯುತ್ತಿರುತ್ತಾರೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಪಂಚಯತ್ ಅಧ್ಯಕ್ಷೆ ಜಯಶ್ರೀ ಮೊಗೇರ, ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲೆಗೆ ಬರುವ ಉದ್ದೇಶಕ್ಕಾಗಿ ನೀಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಇದರ ದುರುಪಯೋಗ ಪಡೆದುಕೊಳ್ಳದೆ ಶಾಲೆಗಳಿಗೆ ಮಾತ್ರ ಸೈಕಲ್ ತೆಗೆದುಕೊಂಡು ಹೋಗುವಂತೆ ಪಾಲಕರು ಸರಿಯಾಗಿ ಗಮನವಹಿಸಬೇಕು ಮತ್ತು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಾಲಕರು ಕೂಡ ಮಕ್ಕಳು ಶಾಲೆಯಿಂದ ಮನೆಗೆ ಬಂದ ಮೇಲೆ ಅವರ ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕೆಂದು ಹೇಳಿದರು.

ನಂತರ ಬಸ್ ಪಾಸ್ ಮತ್ತು ಹಾಸ್ಟೆಲ್ ನಲ್ಲಿ ಇರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ  20 ಬಾಲಕರಿಗೆ ಹಾಗೂ 26  ಬಾಲಕಿಯರಿಗೆ ಸೈಕಲ್ ಗಳನ್ನು ವಿತರಿಸಿದರು .

15 ಲಕ್ಷ ರೂಪಾಯಿ ವೆಚ್ಚದಲ್ಲಿ ಸೋನಾರಕೇರಿ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು. ಮತ್ತು ಕೃಷಿ ಇಲಾಖೆಯಲ್ಲಿ ರೈತ ಫಲಾನುಭವಿಗಳಿಗೆ ಕೃಷಿಗೆ ಸಂಬಂಧ ಪಟ್ಟ ಸಲಕರಣೆಗಳನ್ನು ವಿತರಿಸಲಾಯಿತು.

ಈ ಸಂಧರ್ಭದಲ್ಲಿ ಬಿಜೆಪಿ ಮಂಡಲ ಘಟಕದ ಅಧ್ಯಕ ರಾಜೇಶ ನಾಯ್ಕ, ಜಿಲ್ಲಾ ಪಂಚಾಯತ ಸದಸ್ಯೆ ಸಿಂಧು ಭಾಸ್ಕರ್ ನಾಯ್ಕ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ ನಾಯ್ಕ, ರಾಘವೇಂದ್ರ ಶೇಟ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X