Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂತ್ರಸ್ತರ ಮನೆ ನಿರ್ಮಾಣಕ್ಕೆ ತಲಾ ಒಂದು...

ಸಂತ್ರಸ್ತರ ಮನೆ ನಿರ್ಮಾಣಕ್ಕೆ ತಲಾ ಒಂದು ಲಕ್ಷ ರೂ. ಬಿಡುಗಡೆ: ಸಚಿವ ಜಗದೀಶ್ ಶೆಟ್ಟರ್

ಬೆಳಗಾವಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಧಿಕಾರಿಗಳು, ಮುಖಂಡರ ಸಭೆ

ವಾರ್ತಾಭಾರತಿವಾರ್ತಾಭಾರತಿ20 Sept 2019 7:41 PM IST
share
ಸಂತ್ರಸ್ತರ ಮನೆ ನಿರ್ಮಾಣಕ್ಕೆ ತಲಾ ಒಂದು ಲಕ್ಷ ರೂ. ಬಿಡುಗಡೆ: ಸಚಿವ ಜಗದೀಶ್ ಶೆಟ್ಟರ್

ಬೆಳಗಾವಿ, ಸೆ.20: ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಾಣ ಆರಂಭಿಸಲು ತಕ್ಷಣವೇ ತಲಾ ಒಂದು ಲಕ್ಷ ರೂ. ಬಿಡುಗಡೆಗೆ ಸಚಿವ ಸಂಪುಟ ಸಭೆ ನಿರ್ಧರಿಸಿದ್ದು, ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಬಿಡುಗಡೆಗೆ ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. 

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳು ಹಾಗೂ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳೆಹಾನಿ ಸಮೀಕ್ಷೆ ಪೂರ್ಣಗೊಂಡ ತಕ್ಷಣವೇ ಎನ್.ಡಿ.ಆರ್.ಎಫ್. ಮಾರ್ಗಸೂಚಿಯ ಜತೆಗೆ ರಾಜ್ಯ ಸರಕಾರ ಕೂಡ ವಿಶೇಷ ಪರಿಹಾರ ಪ್ರಕಟಿಸಲಿದೆ ಎಂದರು.

ಪ್ರವಾಹದಿಂದ ಉಂಟಾಗಿರುವ ಹಾನಿಯ ಕುರಿತು ಕೇಂದ್ರ ಸರಕಾರಕ್ಕೆ ಈಗಾಗಲೇ ಮನವಿ ನೀಡಲಾಗಿದ್ದು, ಶೀಘ್ರ ಕೇಂದ್ರ ಸರಕಾರ ಪರಿಹಾರ ಬಿಡುಗಡೆಯನ್ನು ಮಾಡಲಿದೆ. ಆಗಿರುವ ಹಾನಿಯನ್ನು ಸರಿಪಡಿಸಿ ಸಾಮಾನ್ಯ ಸ್ಥಿತಿಗೆ ತರುವುದು ಸರಕಾರದ ಆದ್ಯತೆಯಾಗಿದೆ. ಹಾನಿಯ ಗಂಭೀರತೆಯನ್ನು ಅರಿತು ತಕ್ಷಣವೇ ಪ್ರತಿ ಕುಟುಂಬಕ್ಕೆ ಹತ್ತು ಸಾವಿರ ರೂ.ಪರಿಹಾರ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸಮೀಕ್ಷೆ ಮತ್ತು ತಾಂತ್ರಿಕ ಲೋಪದೋಷಗಳಿಂದ ಪರಿಹಾರದಿಂದ ವಂಚಿತಗೊಂಡ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು. ಎನ್.ಡಿ.ಆರ್.ಎಫ್. ಮಾರ್ಗಸೂಚಿಯ ಪ್ರಕಾರ ಪರಿಹಾರ ಕಡಿಮೆ ಆಗುವುದರಿಂದ ಸರಕಾರ ಹೆಚ್ಚಿನ ಪರಿಹಾರವನ್ನು ಮೊಟ್ಟಮೊದಲ ಬಾರಿಗೆ ಘೋಷಣೆ ಮಾಡಿದೆ. ಬೆಳಗಾವಿ ಜಿಲ್ಲೆಗೆ ತಕ್ಷಣ 200 ಕೋಟಿ ರೂ.ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದ ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಸುಧಾರಣೆಗೆ 500 ಕೋಟಿ ರೂ.ಬಿಡುಗಡೆ ಮಾಡಲಾಗಿದೆ. ಬೆಳೆಹಾನಿಯಾಗಿರುವುದರಿಂದ ಸಾಲ ವಸೂಲಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಈಗಾಗಲೇ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ. ಸಾಲಮನ್ನಾ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚೆ ನಡೆಸಲಾಗುವುದು ಎಂದು ಜಗದೀಶ್ ಶೆಟ್ಟರ್ ಭರವಸೆ ನೀಡಿದರು.

ಪರಿಹಾರ ಕೆಲಸ ಕಾರ್ಯಗಳು ನಡೆಯುತ್ತಿರುವುದರಿಂದ ಅನಿವಾರ್ಯ ಕಾರಣಗಳಿಂದಾಗಿ ಈ ಬಾರಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಆಗುತ್ತಿಲ್ಲ. ರೈತರು ಹಾಗೂ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ತುರ್ತಾಗಿ ಭೇಟಿ ನೀಡಿದ್ದೇನೆ. ಮುಂಬರುವ ದಿನಗಳಲ್ಲಿ ಮತ್ತೊಮ್ಮೆ ಸಭೆ ನಡೆಸಿ ವಿಸ್ತೃತ ಚರ್ಚೆ ನಡೆಸುವುದಾಗಿ ಅವರು ತಿಳಿಸಿದರು.

ಹತ್ತು ಸಾವಿರ ಕೋಟಿ ರೂ.ಹಾನಿ: ಪ್ರವಾಹದಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆ ಹತ್ತು ಸಾವಿರ ಕೋಟಿ ರೂ.ಹಾನಿಯಾಗಿದ್ದು, ಇದುವರೆಗೆ 167 ಕೋಟಿ ಬಿಡುಗಡೆಯಾಗಿದೆ. 6.66 ಲಕ್ಷ ಹೆಕ್ಟೇರ್ ಮುಂಗಾರು ಬಿತ್ತನೆಯಾಗಿದ್ದು, ಇದರಲ್ಲಿ 2.77 ಲಕ್ಷ ಹೆಕ್ಟೇರ್ ಹಾನಿಯಾಗಿದೆ. ಪ್ರಮುಖವಾಗಿ ಕಬ್ಬು ಬೆಳೆಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು.

ಆಗಸ್ಟ್ ಮೊದಲ ವಾರದಲ್ಲಿ ಶೇ.490 ರಷ್ಟು ಅಧಿಕ ಮಳೆಯಾಗಿದ್ದು, ನೆರೆ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಒಟ್ಟಾರೆ 5.20 ಲಕ್ಷ ಕ್ಯೂಸೆಕ್ ನೀರು ಹರಿದ ಪರಿಣಾಮ 377 ಗ್ರಾಮಗಳಲ್ಲಿ ಪ್ರವಾಹ ಉಂಟಾಯಿತು. 4.15 ಲಕ್ಷ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಗೊಳಿಸಿ 493 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿ, ತುರ್ತು ರಕ್ಷಣಾ ಕಾರ್ಯ ಕೈಗೊಳ್ಳಲಾಗಿತ್ತು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ 28 ಜನ ಸಾವನ್ನಪ್ಪಿದ್ದು, ಈಗಾಗಲೇ 25 ಕುಟುಂಬಗಳಿಗೆ ತಲಾ ಐದು ಲಕ್ಷ ರೂ.ಪರಿಹಾರ ವಿತರಿಸಲಾಗಿದೆ. 1.12 ಲಕ್ಷ ಕುಟುಂಬಗಳಿಗೆ ತಲಾ ಹತ್ತು ಸಾರ ರೂಪಾಯಿಗಳ ಪರಿಹಾರ ವಿತರಿಸಲಾಗಿದೆ. ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, 69,183 ಮನೆಗಳು ಹಾನಿಗೊಳಗಾಗಿರುವುದು ಕಂಡುಬಂದಿದೆ. ಅವುಗಳ ಸಂಪೂರ್ಣ ವಿವರಗಳನ್ನು ರಾಜೀವ ಗಾಂಧಿ ವಸತಿ ನಿಗಮದ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಬೊಮ್ಮನಹಳ್ಳಿ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಆನಂದ ಮಾಮನಿ, ಅನಿಲ್ ಬೆನಕೆ, ಮಹಾಂತೇಶ ದೊಡ್ಡಗೌಡರ, ದುರ್ಯೋಧನ ಐಹೊಳೆ, ಅಭಯ್ ಪಾಟೀಲ್, ಜಿ.ಪಂ.ಅಧ್ಯಕ್ಷೆ ಆಶಾ ಐಹೊಳೆ, ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಜಿ.ಪಂ. ಸಿಇಓ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ರೈತ ಮುಖಂಡರಾದ ಚೂನಪ್ಪ ಪೂಜಾರಿ, ಸಿದರಾಯ ಮೋದಗಿ, ಪ್ರಕಾಶ್ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X