Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಮ್ಮ ರಾಜಕೀಯ ಭವಿಷ್ಯವನ್ನೇ ಸಮಾಧಿ...

ನಮ್ಮ ರಾಜಕೀಯ ಭವಿಷ್ಯವನ್ನೇ ಸಮಾಧಿ ಮಾಡಿಬಿಟ್ಟಿರಿ: ಸಿಎಂ ವಿರುದ್ಧ ಅನರ್ಹ ಶಾಸಕರ ಆಕ್ರೋಶ

"ನಿಮ್ಮನ್ನು ನಂಬಿ ನಾವು ಹಾಳಾಗಿದ್ದೇವೆ, ನಮಗೆ ವಿಷ ಕೊಟ್ಟುಬಿಡಿ"

ವಾರ್ತಾಭಾರತಿವಾರ್ತಾಭಾರತಿ21 Sept 2019 8:02 PM IST
share
ನಮ್ಮ ರಾಜಕೀಯ ಭವಿಷ್ಯವನ್ನೇ ಸಮಾಧಿ ಮಾಡಿಬಿಟ್ಟಿರಿ: ಸಿಎಂ ವಿರುದ್ಧ ಅನರ್ಹ ಶಾಸಕರ ಆಕ್ರೋಶ

ಬೆಂಗಳೂರು, ಸೆ. 21: ‘ನಮ್ಮಿಂದ ನೀವು ಸಿಎಂ ಆಗಿದ್ದೀರಿ. ಆದರೆ, ಇದೀಗ ನಮ್ಮ ರಾಜಕೀಯ ಭವಿಷ್ಯವನ್ನೆ ಸಮಾಧಿ ಮಾಡಿಬಿಟ್ಟಿರಿ, ನಿಮ್ಮನ್ನು ನಂಬಿ ನಾವು ಹಾಳಾಗಿದ್ದೇವೆ, ನಮಗೆ ವಿಷ ಕೊಟ್ಟುಬಿಡಿ’ ಎಂದು ಅನರ್ಹ ಶಾಸಕರು, ಮುಖ್ಯಮಂತ್ರಿ ಯಡಿಯೂರಪ್ಪ ಮುಂದೆ ಆಕ್ರೋಶ ಹೊರಹಾಕಿದ್ದಾರೆ.

ಶನಿವಾರ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಸದಾಶಿವ ನಗರದ ಅರಣ್ಯ ಇಲಾಖೆ ಅತಿಥಿ ಗೃಹದಲ್ಲಿ ಅನರ್ಹ ಶಾಸಕರಾದ ಬಿ.ಸಿ.ಪಾಟೀಲ್, ಕೆ.ಸುಧಾಕರ್, ಎಚ್.ವಿಶ್ವನಾಥ್, ಮುನಿರತ್ನ, ಆರ್.ಶಂಕರ್, ನಾರಾಯಣಗೌಡ, ಬೈರತಿ ಬಸವರಾಜು, ಕೆ.ಗೋಪಾಲಯ್ಯ, ಆರ್.ರೋಷನ್ ಬೇಗ್ ಅವರೊಂದಿಗೆ ಸಿಎಂ ಬಿಎಸ್‌ವೈ ದಿಢೀರ್ ಗೌಪ್ಯ ಸಮಾಲೋಚನೆ ನಡೆಸಿದರು.

‘ಯಾವುದೇ ಕಾರಣಕ್ಕೂ ನೀವು ಭಯ ಪಡುವ ಅಗತ್ಯವಿಲ್ಲ. ನಿಮ್ಮ ಪರವಾಗಿ ನಾನೇ ಖುದ್ದು ಹೊಸದಿಲ್ಲಿಗೆ ತೆರಳುತ್ತೇನೆ. ಚುನಾವಣೆಯಲ್ಲಿ ನೀವೇ ಸ್ಪರ್ಧಿಸುವುದು, ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಿದ್ದು, ನಿಮ್ಮೊಂದಿಗೆ ನಾವಿದ್ದೇವೆ’ ಎಂದು ಯಡಿಯೂರಪ್ಪ ಅಭಯ ನೀಡಿದರೂ, ಅನರ್ಹ ಶಾಸಕರ ಅಸಮಾಧಾನ ಶಮನವಾಗಿಲ್ಲ ಎನ್ನಲಾಗಿದೆ.

ಚುನಾವಣಾ ಆಯೋಗದ ಮುಖ್ಯಸ್ಥ ಸಂಜೀವ್ ಕುಮಾರ್ ಅವರೇ ‘ನಾವು (ಅನರ್ಹರು) ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ’ ಎಂದು ಹೇಳಿದ್ದಾರೆ. ಹೀಗಾಗಿರುವಾಗ ‘ನಾವು ಎಲ್ಲಿ ಹೋಗಿ ನಿಲ್ಲಬೇಕು’ ಎಂದು ಅನರ್ಹ ಶಾಸಕರು, ಯಡಿಯೂರಪ್ಪನವರನ್ನು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆಂದು ಗೊತ್ತಾಗಿದೆ.

ಅನರ್ಹ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದೆ ಸಿಎಂ ಬಿಎಸ್‌ವೈ, ಡಿಸಿಎಂ ಲಕ್ಷ್ಮಣ ಸವದಿ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅಕ್ಷರಶಃ ಮೌನಕ್ಕೆ ಶರಣಾಗಿದ್ದರು ಎನ್ನಲಾಗಿದ್ದು, ಇದೇ ವೇಳೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರೊಂದಿಗೆ ಮುಂದಿನ ಕಾನೂನು ಹೋರಾಟದ ಬಗ್ಗೆಯೂ ಚರ್ಚಿಸಿದ್ದಾರೆಂದು ತಿಳಿದು ಬಂದಿದೆ.

ಅನರ್ಹ ಶಾಸಕರು ಉಪ ಚುನಾವಣೆ ಸ್ಪರ್ಧಿಸಲು ಸಾಧ್ಯವಿಲ್ಲ. ಹೀಗಾಗಿ ಅ.21ಕ್ಕೆ ಆಯೋಗ ಚುನಾವಣೆ ಘೋಷಣೆ ಮಾಡಿದ್ದು, ಆ ದಿನಾಂಕ ಮುಂದೂಡಬೇಕು. ಜತೆಗೆ ಉಪ ಚುನಾವಣೆ ಸ್ಪರ್ಧೆಗೆ ತಮಗೆ ಅವಕಾಶ ನೀಡಬೇಕೆಂದು ಕೋರುವುದು ಸೇರಿದಂತೆ ಅನರ್ಹ ಶಾಸಕರ ಮುಂದಿನ ನಡೆಯ ಬಗ್ಗೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗಿದೆ.

ಸಿಎಂ ದಿಲ್ಲಿಗೆ: ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಕಾನೂನು ಹೋರಾಟ ಹಾಗೂ ಉಪ ಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಹೈಕಮಾಂಡ್‌ನೊಂದಿಗೆ ಚರ್ಚಿಸಲು ಸಿಎಂ ಬಿಎಸ್‌ವೈ ನಾಳೆಯೇ ದಿಲ್ಲಿಗೆ ತೆರಳುವ ಸಾಧ್ಯತೆಗಳಿವೆ.

‘ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಶಾಸಕತ್ವ ಅನರ್ಹಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದ ಸೆ.22ಕ್ಕೆ ನಮ್ಮ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ’

-ಆರ್.ಶಂಕರ್, ಅನರ್ಹ ಶಾಸಕ

‘ನಮ್ಮ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ನಾಳೆ(ಸೆ.22) ವಿಚಾರಣೆಗೆ ಬರಲಿದ್ದು, ನಮಗೆ ನ್ಯಾಯಾಲಯದಲ್ಲಿ ಜಯ ಸಿಗುವ ವಿಶ್ವಾಸವಿದೆ. ಚುನಾವಣಾ ಆಯೋಗದ ತೀರ್ಮಾನವೇ ಅಂತಿಮವಲ್ಲ. ಹೀಗಾಗಿ ನಮಗೆ ಯಾವುದೇ ಆತಂಕವಿಲ್ಲ’

-ಎಸ್.ಟಿ.ಸೋಮಶೇಖರ್, ಅನರ್ಹ ಶಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X