Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಶೇಷ ಸ್ಥಾನಮಾನ ರದ್ಧತಿಯಿಂದ...

ವಿಶೇಷ ಸ್ಥಾನಮಾನ ರದ್ಧತಿಯಿಂದ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಹಿನ್ನಡೆ: ಡಿ.ವಿ.ಸದಾನಂದ ಗೌಡ

ವಾರ್ತಾಭಾರತಿವಾರ್ತಾಭಾರತಿ21 Sept 2019 9:28 PM IST
share
ವಿಶೇಷ ಸ್ಥಾನಮಾನ ರದ್ಧತಿಯಿಂದ ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಹಿನ್ನಡೆ: ಡಿ.ವಿ.ಸದಾನಂದ ಗೌಡ

ಉಡುಪಿ, ಸೆ.21: ಕಾಶ್ಮೀರ ಭಯೋತ್ಪಾದಕರ ಸ್ವರ್ಗ ಆಗಲು ಆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿರುವುದೇ ಕಾರಣ. ಇದೀಗ ಆ ಸ್ಥಾನಮಾನ ರದ್ಧುಗೊಳಿಸಿರುವುದರಿಂದ ಅಲ್ಲಿ ಭಯೋತ್ಪಾದನೆಗೆ ಬಹಳ ದೊಡ್ಡ ಹಿನ್ನಡೆಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ರಾಷ್ಟ್ರೀಯ ಏಕತಾ ಅಭಿಯಾನದ ಪ್ರಯುಕ್ತ ಮಣಿಪಾಲದ ಕಂಟ್ರಿ ಇನ್ ಹೊಟೇಲಿನ ಸಭಾಂಗಣದಲ್ಲಿ ಆಯೋಜಿಸಲಾದ 370ನೆ ವಿಧಿ ರದ್ಧತಿ ಬಗ್ಗೆ ಜನ ಜಾಗೃತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅಭಿವೃದ್ದಿ ಹಾಗೂ ಉತ್ತಮ ಆಡಳಿತ ಬಹಳ ಮುಖ್ಯವಾಗಿರುತ್ತದೆ. ಒಂದು ದೇಶಕ್ಕೆ ಎರಡು ಧ್ವಜ, ಎರಡು ಸಂವಿಧಾನ, ಎರಡು ಕಾನೂನು ದೊಡ್ಡ ಕಳಂಕವಾಗಿದೆ. ಅಖಂಡ ಭಾರತ ನಿರ್ಮಾಣ ಮಾಡುವುದೇ ನಮ್ಮ ಉದ್ದೇಶವಾಗಿದೆ ಎಂದರು.

ಮುಂದೆ ಕಾಶ್ಮೀರ ವಿಶೇಷ ಸ್ಥಾನಮಾನ ರದ್ದತಿಯನ್ನು ರದ್ದು ಮಾಡಲು ಯಾರಿಗೂ ಸಾಧ್ಯವಿಲ್ಲ. ಯಾಕೆ ಇನ್ನು ಕಾಂಗ್ರೆಸ್ ಎಂದಿಗೂ ಅಧಿಕಾರಕ್ಕೆ ಬರುವುದೇ ಇಲ್ಲ. ಈ ಮೊದಲು ಕೇಂದ್ರ ಸರಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡ ಕಾಶ್ಮೀರದ ರಾಜಕಾರಣಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

ಇಂದು ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ. ಇದು ಕೂಡ ಬಿಜೆಪಿಯ ಚುನಾವಣಾ ಪ್ರಣಾಳಿಕೆಯ ಒಂದು ಭಾಗವಾಗಿದೆ. ಈಗಾಗಲೇ ಪ್ರಣಾಳಿಕೆಯಲ್ಲಿ ನೀಡಿದ ಶೇ.85-90ರಷ್ಟು ಭರವಸೆಗಳನ್ನು ಈಡೇರಿಸಲಾಗಿದೆ. ಒಂದು ದೇಶ, ಒಂದು ಚುನಾವಣೆ, ಒಂದು ತೆರಿಗೆ ನಮ್ಮ ಮುಂದಿರುವ ಗುರಿಯಾಗಿದೆ. ಆದರೆ ಒಂದು ಭಾಷೆ ಎಂಬ ವಿಚಾರ ನಮ್ಮ ಮುಂದೆ ಇಲ್ಲ ಎಂದರು.

ಈಗಾಗಲೇ ಕಾಶ್ಮೀರ ಬಿಟ್ಟು ಬಂದವರಿಗೆ ಮತ್ತೆ ಕಾಶ್ಮೀರಕ್ಕೆ ವಾಪಾಸ್ಸು ಹೋಗಲು ಎಲ್ಲ ರೀತಿಯ ವ್ಯವಸ್ಥೆಯನ್ನು ಕೇಂದ್ರ ಸರಕಾರ ಮಾಡಲಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ನಾವು ಮುಂದಿನ ದಿನಗಳಲ್ಲಿ ಪಡೆದೇ ಪಡೆಯುತ್ತೇವೆ. ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದನೆ ಹೆಚ್ಚಾಗುತ್ತದೆ ಎಂಬ ಆತಂಕ ಬೇಡ. ಈ ವಿಚಾರದಲ್ಲಿ ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದರು.

ಕಾಶ್ಮೀರದಲ್ಲಿ ಪ್ರತಿಯೊಂದು ಇಲಾಖೆಯಿಂದಲೂ ಒಂದೊಂದು ರೀತಿಯ ಯೋಜನೆಗಳನ್ನು ಹಮ್ಮಿಕೊಳ್ಳಲು ಈಗಾಗಲೇ ಚಿಂತನೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ನನ್ನ ಇಲಾಖೆಗೆ ಸಂಬಂಧಪಟ್ಟಂತೆ ಯೋಜನೆ ಜಾರಿಗೆ ತರಲು ಕಾಶ್ಮೀರ ರಾಜ್ಯಪಾಲರು ಹಾಗೂ ಮುಖ್ಯಕಾರ್ಯದರ್ಶಿ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯೆ ಡಾ.ತೇಜಸ್ವಿನಿ ದಿಕ್ಸೂಚಿ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ವಹಿಸಿದ್ದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಸಕರುಗಳಾದ ಸುನೀಲ್ ಕುಮಾರ್, ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಸುಕುಮಾರ್ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಮುಖಂಡ ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಸಾಣೂರು ನರಸಿಂಹ ಕಾಮತ್ ಸ್ವಾಗತಿಸಿದರು. ವಿಜಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X