Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂತರ್‌ರಾಷ್ಟ್ರೀಯ ಕ್ರಿಕೆಟ್‌ಗೆ...

ಅಂತರ್‌ರಾಷ್ಟ್ರೀಯ ಕ್ರಿಕೆಟ್‌ಗೆ ಝಿಂಬಾಬ್ವೆ ನಾಯಕ ಮಸಕಝ ವಿದಾಯ

ವಾರ್ತಾಭಾರತಿವಾರ್ತಾಭಾರತಿ21 Sept 2019 11:47 PM IST
share
ಅಂತರ್‌ರಾಷ್ಟ್ರೀಯ ಕ್ರಿಕೆಟ್‌ಗೆ ಝಿಂಬಾಬ್ವೆ ನಾಯಕ ಮಸಕಝ ವಿದಾಯ

ಚಿತ್ತಗಾಂಗ್, ಸೆ.21: ಝಿಂಬಾಬ್ವೆ ನಾಯಕ ಹ್ಯಾಮಿಲ್ಟನ್ ಮಸಕಝ ಅಫ್ಘಾನಿಸ್ತಾನ ವಿರುದ್ಧ ಶುಕ್ರವಾರ ನಡೆದ ಟ್ವೆಂಟಿ-20 ಪಂದ್ಯದಲ್ಲಿ ಆಡುವುದರೊಂದಿಗೆ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದರು.

 36ರ ಹರೆಯದ ಮಸಕಝ ಚಿತ್ತಗಾಂಗ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದಾಗ ಉಭಯ ತಂಡಗಳ ಆಟಗಾರರು ಬ್ಯಾಟ್ ಎತ್ತಿ ಹಿಡಿದು ಗೌರವ ಸಲ್ಲಿಸಿದರು. ತನ್ನ ಕೊನೆಯ ಪಂದ್ಯದಲ್ಲಿ 42 ಎಸೆತಗಳಲ್ಲಿ 71 ರನ್ ಗಳಿಸಿದ ಮಸಕಝ ಝಿಂಬಾಬ್ವೆ ತಂಡ 7 ವಿಕೆಟ್‌ಗಳಿಂದ ಜಯ ಸಾಧಿಸಲು ನೆರವಾದರು. ಝಿಂಬಾಬ್ವೆ ಟ್ವೆಂಟಿ-20ಯಲ್ಲಿ ಅಫ್ಘಾನ್ ವಿರುದ್ಧ ಮೊದಲ ಜಯ ದಾಖಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನಿಸ್ತಾನ 8 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತ್ತು. ಈ ಸೋಲಿನೊಂದಿಗೆ ಸತತ 12 ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಅಫ್ಘಾನ್‌ನ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ. 42 ಎಸೆತಗಳ ಇನಿಂಗ್ಸ್‌ನಲ್ಲಿ ಐದು ಸಿಕ್ಸರ್ ಹಾಗೂ ನಾಲ್ಕು ಬೌಂಡರಿಗಳನ್ನು ಗಳಿಸಿದ ಮಸಕಝ ತನ್ನ 18 ವರ್ಷಗಳ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ಗೆ ತನ್ನದೇ ಶೈಲಿಯಲ್ಲಿ ತೆರೆ ಎಳೆದರು. ತನ್ನ ಕೊನೆಯ ಟ್ವೆಂಟಿ-20 ಪಂದ್ಯದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿದ ಆಟಗಾರ ಎನಿಸಿಕೊಂಡರು.

2001ರಲ್ಲಿ ಕ್ರಿಕೆಟ್‌ಗೆ ಕಾಲಿಟ್ಟಿರುವ ಮಸಕಝ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಝಿಂಬಾಬ್ವೆ ಬೆಳವಣಿಗೆಗೆ ಪ್ರಮುಖ ಪಾತ್ರವಹಿಸಿದ್ದರು. ‘‘ನನ್ನ ತಂಡದ ಆಟಗಾರರೊಂದಿಗೆ ಬೆಳಗ್ಗೆ ಮಾತನಾಡುವಾಗ ಕಣ್ಣೀರು ಹಾಕಿದ್ದೆ. ನಿವೃತ್ತಿ ಕುರಿತು ನನ್ನ ಅಧಿಕೃತ ಘೋಷಣೆಯ ಮೊದಲು ತಂಡದ ಸದಸ್ಯರಿಗೆ ಮನವರಿಕೆ ಮಾಡಿಕೊಳ್ಳಲು ಯತ್ನಿಸಿದ್ದೆ. ನಾನು ಮೂರೇ ವಾಕ್ಯವನ್ನು ಹೇಳಿದ್ದು,ಅದೊಂದು ನಿಜವಾಗಿಯೂ ಭಾವನಾತ್ಮಕ ಕ್ಷಣವಾಗಿತ್ತು’’ ಎಂದು ಮಸಕಝ ಹೇಳಿದ್ದಾರೆ.

 ವೆಸ್ಟ್‌ಇಂಡೀಸ್ ವಿರುದ್ಧ ಆಡಿದ ತನ್ನ ಚೊಚ್ಚಲ ಟೆಸ್ಟ್ ನಲ್ಲಿ 17 ವರ್ಷ ಹಾಗೂ 254 ದಿನಗಳಲ್ಲಿ ಶತಕ ಸಿಡಿಸಿದ್ದ ಮಸಕಝ ಈ ಸಾಧನೆ ಮಾಡಿದ ಕಿರಿಯ ಆಟಗಾರ ಎನಿಸಿಕೊಳ್ಳುವುದರೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ್ದರು. ಇವರ ವಿಶ್ವ ದಾಖಲೆ ಕೇವಲ ಮೂರು ತಿಂಗಳು ಮಾತ್ರ ಉಳಿದಿತ್ತು. ಬಾಂಗ್ಲಾದೇಶದ ಮುಹಮ್ಮದ್ ಅಶ್ರಫುಲ್ ಈ ದಾಖಲೆಯನ್ನು ಮುರಿದಿದ್ದರು.

ಮಸಕಝ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಝಿಂಬಾಬ್ವೆಯ ಮೊದಲ ಕರಿಯ ಆಟಗಾರನಾಗಿದ್ದಾರೆ. ರಾಷ್ಟ್ರೀಯ ಒಕ್ಕೂಟದೊಂದಿಗೆ ಆಟಗಾರರ ಸಂಘರ್ಷ ನಡೆದ ಕಾರಣ ಮಸಕಝ ತನ್ನ 2ನೇ ಟೆಸ್ಟ್ ಶತಕವನ್ನು ಬಾಂಗ್ಲಾದೇಶ ವಿರುದ್ಧ 2011ರಲ್ಲಿ ಗಳಿಸಿದ್ದರು.

ಮಸಕಝ 38 ಟೆಸ್ಟ್, 209 ಏಕದಿನ ಹಾಗೂ 66 ಟಿ-20 ಅಂತರ್‌ರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ತ್ರಿಕೋನ ಸರಣಿಯ ಅಂತ್ಯಕ್ಕೆ ವಿದಾಯ ಹೇಳುವುದಾಗಿ ಈ ತಿಂಗಳಾರಂಭದಲ್ಲಿ ಘೋಷಿಸಿದ್ದ ಮಸಕಝ ಟಿ-20ಯಲ್ಲಿ 25.96ರ ಸರಾಸರಿಯಲ್ಲಿ 11 ಅರ್ಧಶತಕಗಳ ಸಹಿತ 1,662 ರನ್ ಗಳಿಸಿದ್ದಾರೆ. ಟಿ-20ಯಲ್ಲಿ ಝಿಂಬಾಬ್ವೆ ಪರ ಗರಿಷ್ಠ ರನ್ ಗಳಿಸಿದ ಆಟಗಾರನೆಂಬ ಹೆಗ್ಗಳಿಕೆಯೊಂದಿಗೆ ವಿದಾಯ ಹೇಳಿದ್ದಾರೆ.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X