Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಯ ಪ್ರಜ್ಞೆ ಪಾಲಿಸದ ಅಧಿಕಾರಿಗಳ ಬಗ್ಗೆ...

ಸಮಯ ಪ್ರಜ್ಞೆ ಪಾಲಿಸದ ಅಧಿಕಾರಿಗಳ ಬಗ್ಗೆ ಕ್ರಮ - ಶಾಸಕರ ಎಚ್ಚರಿಕೆ

ಪುತ್ತೂರು ತ್ರೈಮಾಸಿಕ ಕೆಡಿಪಿ ಸಭೆ

ವಾರ್ತಾಭಾರತಿವಾರ್ತಾಭಾರತಿ21 Sept 2019 11:51 PM IST
share
ಸಮಯ ಪ್ರಜ್ಞೆ ಪಾಲಿಸದ ಅಧಿಕಾರಿಗಳ ಬಗ್ಗೆ ಕ್ರಮ - ಶಾಸಕರ ಎಚ್ಚರಿಕೆ

ಪುತ್ತೂರು; ತ್ರೈಮಾಸಿಕ ಕೆಡಿಪಿ ಸಭೆಗೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರಬೇಕು. ಬದ್ಧತೆ ಮತ್ತು ಪ್ರಾಮಾಣಿಕೆಯಿಂದ ಕೆಲಸ ಮಾಡಬೇಕು. ಸಭೆಗೆ ಗೈರುಹಾಜರಾಗುವ, ಬೇಕಾಬಿಟ್ಟಿ ಬರುವ ಅಧಿಕಾರಿಗಳು ಇಲ್ಲಿ ಇರಬೇಕೋ ಬೇಡವೋ ಎಂಬುವುದನ್ನು ನಿರ್ಧರಿಸಬೇಕಾಗುತ್ತದೆ. ನಮ್ಮ ಪೆನ್ನಿಗೂ ಕೆಲಸ ಕೊಡಬೇಕಾಗುತ್ತದೆ. ಮುಂದಿನ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ 10.30ಗೆ ಸಭಾಂಗಣದ ಬಾಗಿಲು ಬಂದ್ ಮಾಡಲಾಗುತ್ತದೆ. ಮತ್ತೆ ಬರುವ ಅಧಿಕಾರಿಗಳಿಗೆ ಸಭೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ. ಅಧಿಕಾರಿಗಳು ಸಮಯ ಪರಿಪಾಲನೆ ಮಾಡಬೇಕು ಎಂದು ಶಾಸಕ ಸಂಜೀವ ಮಠಂದೂರು ತಾಲೂಕು ಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. 

ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಪುತ್ತೂರು ತಾಲೂಕಿನಲ್ಲಿ ಎಷ್ಟು ಮಂದಿಗೆ ಆರೋಗ್ಯ ಕಾರ್ಡ್ ನೀಡಲಾಗಿದೆ ಎಂದು ಶಾಸಕರು ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್‍ ಕುಮಾರ್ ರೈ ಅವರನ್ನು ಪ್ರಶ್ನಿಸಿದರು. ಅವರು ಕಡಬ ಹೊರತು ಪಡಿಸಿ ಮಾಹಿತಿ ನೀಡಿದರು. ಕಡಬದ ಮಾಹಿತಿ ಇರಲಿಲ್ಲ. ಈ ಸಂದರ್ಭದಲ್ಲಿ ನೀವು ಪುತ್ತೂರಿಗೆ  ಮಾತ್ರ ಸೀಮಿತ ಅಧಿಕಾರಿಯಾಗಿದ್ದೀರಾ ಎಂದು ಪ್ರಶ್ನಿಸಿದ ಶಾಸಕರು ತನಗೆ ಸರಿಯಾದ ಮಾಹಿತಿ ನೀಡಬೇಕು ಎಂದು ಎಚ್ಚರಿಸಿದರು.

ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ ಡಿವೈಎಸ್ಪಿ ದಿನಕರ ಶೆಟ್ಟಿ ಅವರು ಸುಪ್ರೀಂ ಕೋರ್ಟು ಆದೇಶದಂತೆ ಅಪಘಾತ ತಡೆಯುವ ಹಾಗೂ ವಾಹನ ಚಾಲಕರಲ್ಲಿ ದಾಖಲೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನಗರ ಸೇರಿದಂತೆ ಅಲ್ಲಲ್ಲಿ ಸಂಚಾರಿ ಪೊಲೀಸರು ವಾಹನಗಳನ್ನು ನಿಲ್ಲಿಸಿ ತನಿಖೆ ನಡೆಸುತ್ತಿದ್ದಾರೆ. ಇದು ಸ್ವಲ್ಪ ಸಮಯಕ್ಕೆ ಮಾತ್ರ ಸೀಮಿತ ತಪಾಸಣೆಯಾಗಿದೆ. 1892 ನೋ ಪಾರ್ಕಿಂಗ್ ಹಾಗೂ 1488 ಒನ್ ವೇ ಕೇಸು ದಾಖಲಾಗಿದೆ. ಕೇಂದ್ರ ಸರ್ಕಾರ ದಂಡ ಶುಲ್ಕ ಹೆಚ್ಚುವರಿ ಮಾಡಿರುವುದು ಸ್ವಾಗತಾರ್ಹ ವಿಚಾರವಾಗಿದ್ದು, ಇದರ ಪರಿಣಾಮ ಅಪರಾಧ ಕಡಿಮೆಯಾಗುತ್ತಿದೆ. ಈಗ ಪ್ರಕರಣಗಳೇ ಸಿಗದಂತಾಗಿದೆ ಎಂದರು.

ಮಂಗಳೂರು ಮಹಾನಗರಪಾಲಿಕೆ ಬಿಟ್ಟರೆ ಪುತ್ತೂರಿನಲ್ಲಿ ಅತ್ಯಂತ ಹೆಚ್ಚು ಪೊಲೀಸ್ ಠಾಣೆಗಳಿವೆ. ಪುತ್ತೂರು ಮತ್ತು ಉಪ್ಪಿನಂಗಡಿ ಭಾಗದಲ್ಲಿ ಸಂಚಾರ ತಡೆಯಾಗದಂತೆ ಶಾಲಾ ಆರಂಭ ಮತ್ತು ಶಾಲೆ ಬಿಡುವ ಒತ್ತಡದ ಸಮಯದಲ್ಲಿ ಇನ್ಸ್ ಪೆಕ್ಟರ್ ಹಾಗೂ ಎಸೈಗಳು ಗಸ್ತು ತಿರುಗಬೇಕು. ಇದರಿಂದ ವಾಹನ ಚಾಲಕರಿಗೆ ಸ್ಪಲ್ಪ ಮಟ್ಟಿಗೆ ಎಚ್ಚರ ಮೂಡಲು ಸಹಕಾರಿಯಾಗಿದೆ ಎಂದು ಸೂಚಿಸಿದರು. ಪುತ್ತೂರಿಗೆ ಎಸ್ಪಿ ಕಚೇರಿ ಬರುವುದು ನಿಸ್ಸಂದೇಹ. ಈಗಾಗಲೇ ಬಲ್ನಾಡು ಹಾಗೂ ಕೆಮ್ಮಿಂಜೆ ಬಳಿ ಜಾಗ ಗುರುತಿಸಲಾಗಿದೆ. ಮಂಗಳೂರಿನಲ್ಲಿ ಕಮಿಷನರೇಟ್ ವ್ಯವಸ್ಥೆ ಇದೆ. ಹಾಗಾಗಿ ಎಸ್ಪಿ ಕಚೇರಿಗೆ ಪುತ್ತೂರು ಸೂಕ್ತ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗಿದೆ ಎಂದು ಶಾಸಕರು ತಿಳಿಸಿದರು.

ಅವಿಭಜಿತ ಪುತ್ತೂರು ತಾಲೂಕಿನಲ್ಲಿರುವ 68 ಕಂದಾಯ ಗ್ರಾಮಗಳಲ್ಲಿ ಅಡಕೆ ಕೊಳೆರೋಗದ ಸಮೀಕ್ಷೆಯನ್ನು ಕಂದಾಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಆಶ್ರಯದಲ್ಲಿ ತಕ್ಷಣ ಸರ್ವೆ ಕಾರ್ಯ ನಡೆಸಬೇಕು ಎಂದು ಶಾಸಕ ಸಂಜೀವ ಮಠಂದೂರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಳೆದ ಬಾರಿ ಕೊಳೆರೋಗದಿಂದ ಅಡಕೆ ಬೆಳೆಯುವ ರೈತರಿಗೆ ಸಾಕಷ್ಟು ನಷ್ಟ ಉಂಟಾಗಿದೆ. 8 ಸಾವಿರಕ್ಕೂ ಅಧಿಕ ರೈತರು ಅರ್ಜಿ ಸಲ್ಲಿಸಿದ್ದಾರೆ, ಆದರೆ ಅವರಲ್ಲಿ ಸುಮಾರು 1500 ಮಂದಿ ರೈತರಿಗೆ ಇನ್ನೂ ಕೊಳೆರೋಗ ಪರಿಹಾರ ಸಿಕ್ಕಿಲ್ಲ. ಯಾವುದೇ ನೆಪ ಹೇಳದೆ ಈ ಎಲ್ಲಾ ರೈತರಿಗೂ ಪರಿಹಾರ ಹಣ ಸಿಗಬೇಕು. ರೈತ ಎಂಬುವುದು ಒಂದೇ ಜಾತಿ. ಯಾವುದೇ ರೈತನಿಗೂ ಅನ್ಯಾಯವಾಗಬಾರದು ಎಂದವರು ಇಲಾಖೆಗಳಿಗೆ ಎಚ್ಚರಿಕೆ ನೀಡಿದರು. 

ಕಂದಾಯ ಇಲಾಖೆಯ ಗ್ರಾಮಮಟ್ಟದ ಅಧಿಕಾರಿಗಳು ಯಾವಾಗಲೂ 'ನಾಟ್ ರೀಚೆಬಲ್' ಆಗಿರುತ್ತಾರೆ. ಹೀಗೆ ಮುಂದುವರಿದರೆ ಅವರನ್ನು ಶಾಶ್ವತವಾಗಿ ನಾಟ್‍ರೀಚೆಬಲ್ ಮಾಡಬೇಕಾಗುತ್ತದೆ ಎಂದ ಅವರು ಪುತ್ತೂರು ಮತ್ತು ಕಡಬ ತಹಶೀಲ್ದಾರ್ ಅವರು ನಿಮ್ಮ ಇಲಾಖೆ ಅಧಿಕಾರಿಗಳ ಮೇಲೆ ಗಮನ ಹರಿಸಬೇಕು. ಭ್ರಷ್ಟಾಚಾರದಲ್ಲಿ ಭಾಗಿಯಾಗುವ ಕಂದಾಯ ಇಲಾಖೆ ಗ್ರಾಮಕರಣಿಕರು, ಕಂದಾಯ ನಿರೀಕ್ಷಕರ  ಮೇಲೆ ಪೊಲೀಸ್ ಇಲಾಖೆಯ ಸುಮೊಟೊ ತರಹ ನೀವೇ ದೂರು ದಾಖಲಿಸಿ ಶಿಕ್ಷೆ ಕೊಡುವ ಕೆಲಸವಾಗಬೇಕು ಎಂದು ತಹಶೀಲ್ದಾರ್ ಗಳಿಗೆ ಸೂಚಿಸಿದರು.

ಪುತ್ತೂರು ತಾಲೂಕಿಗೆ 4 ಜಿಲ್ಲಾಪಂಚಾಯಿತಿ ರಸ್ತೆ ಕಾಮಗಾರಿಗಳಿಗೆ ರೂ.5.75 ಕೋಟಿ, 3 ರಾಜ್ಯ ಹೆದ್ದಾರಿ ಕಾಮಗಾರಿಗೆ ರೂ.7.20 ಕೋಟಿ ಹಾಗೂ ಉಪ್ಪಿನಂಗಡಿ ಪುತ್ತೂರು ರಸ್ತೆಯನ್ನು ಚತುತ್ಪಥ ಗೊಳಿಸಲು ರೂ 12 ಕೋಟಿ ಅನುದಾನ ಮಂಜೂರಾಗಿದೆ. ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೆಮ್ಮಾಯಿಯಿಂದ 34 ನೆಕ್ಕಿಲಾಡಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕದ ತನಕ ಸುಮಾರು 7 ಕಿಮೀ ರಸ್ತೆಯನ್ನು ಚತುಷ್ಪಥಗೊಳಿಸಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಲೊಕೋಪಯೋಗಿ ಇಲಾಖೆ ಅಧಿಕಾರಿ ತಿಳಿಸಿದರು. ಈ ಕೆಲಸ ಆದಷ್ಟು ಬೇಗ ಪ್ರಾರಂಭವಾಗಬೇಕು.  ಅದಕ್ಕೂ ಮೊದಲು ಈಗಾಗಲೇ ವಾಹನಸಂಚಾರಕ್ಕೆ ತೊಂದರೆಯಾಗುತ್ತಿರುವ ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೆಲವು ಭಾಗಗಳಲ್ಲಿ ತೇಪೆ ಹಾಕಿ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ತಕ್ಷಣ ಮಾಡಬೇಕು ಎಂದು ಶಾಸಕರು ಸೂಚಿಸಿದರು. 

ವೇದಿಕೆಯಲ್ಲಿ ತಾಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಉಪಾಧ್ಯಕ್ಷೆ ಲಲಿತಾ ಈಶ್ವರ್, ಸ್ಥಾಯಿಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ, ಪುತ್ತೂರು ತಹಶೀಲ್ದಾರ್ ಅನಂತಶಂಕರ ಹಾಗೂ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ಉಪಸ್ಥಿತರಿದ್ದರು. ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಸ್ವಾಗತಿಸಿ, ಕಲಾಪ ನಿರ್ವಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X