ಕ್ಷುಲ್ಲಕ ಕಾರಣಕ್ಕೆ ಎಂಎಸ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು, ಸೆ.23: ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಮಿಳುನಾಡಿನ ತಂಜಾವೂರು ನಿವಾಸಿ ಗಾಯತ್ರಿ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇಲ್ಲಿನ ಪ್ರತಿಷ್ಠಿತ ಕಾಲೇಜಿನಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುದರ್ಶನ್ ಎಂಬಾತನನ್ನು ಪ್ರೀತಿಸುತ್ತಿದ್ದ ಈಕೆ, ರವಿವಾರ ಹೊರಗಡೆ ಹೋಗುವಂತೆ ಒತ್ತಾಯಿಸಿದ್ದಾಳೆ. ಇದನ್ನು ಸುದರ್ಶನ್ ನಿರಾಕರಿಸಿದ ಕಾರಣ, ಮನನೊಂದ ಗಾಯತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಈ ಸಂಬಂಧ ಬನಶಂಕರಿ ಪೋಲಿಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.
Next Story