Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೆಯಲ್ಲೇ ಕುಳಿತು ನಿಮ್ಮ ವೋಟರ್...

ಮನೆಯಲ್ಲೇ ಕುಳಿತು ನಿಮ್ಮ ವೋಟರ್ ಐಡಿಯಲ್ಲಿ ನೀವೇ ತಿದ್ದುಪಡಿಗಳನ್ನು ಮಾಡುವುದು ಹೇಗೆ?

ಇಲ್ಲಿದೆ ಸಂಪೂರ್ಣ ವಿವರ

ವಾರ್ತಾಭಾರತಿವಾರ್ತಾಭಾರತಿ24 Sept 2019 10:15 PM IST
share
ಮನೆಯಲ್ಲೇ ಕುಳಿತು ನಿಮ್ಮ ವೋಟರ್ ಐಡಿಯಲ್ಲಿ ನೀವೇ ತಿದ್ದುಪಡಿಗಳನ್ನು ಮಾಡುವುದು ಹೇಗೆ?

ಉಡುಪಿ, ಸೆ.24: ಮತದಾರರ ಪಟ್ಟಿಯಲ್ಲಿರುವ ನಿಮ್ಮ ಭಾವಚಿತ್ರ ಹಿಂದೆ ಯಾವಾಗಲೋ ತೆಗೆದ ಹಳೆಯ ಕಪ್ಪು ಬಿಳುಪು ಚಿತ್ರವಾಗಿದ್ದು, ನಿಮಗೇ ಗುರುತು ಹಿಡಿಯಲು ಕಷ್ಟವಾಗಿದೆಯೇ, ನಿಮ್ಮ ಇತ್ತೀಚಿನ ಬಣ್ಣದ ಭಾವಚಿತ್ರ ಸೇರ್ಪಡೆ ಮಾಡಿಕೊಳ್ಳುವ ಇಚ್ಛೆ ಇದೆಯೇ, ಮತದಾರರ ಪಟ್ಟಿಯಲ್ಲಿ ನಿಮ್ಮ ಜನ್ಮ ದಿನಾಂಕ ಅಥವಾ ವಿಳಾಸ ತಪ್ಪಾಗಿ ದಾಖಲಾಗಿದೆಯೇ ಅಥವಾ ಹಿಂದೆ ನೀಡಿದ ವಿಳಾಸದಿಂದ ಹೊಸ ವಿಳಾಸಕ್ಕೆ ಬದಲಾಗಿದ್ದೀರಾ ?

ನಿಮ್ಮ ಈ ಎಲ್ಲಾ ಸಮಸ್ಯೆ ಗೊಂದಲಗಳಿಗೆ ಸೂಕ್ತ ಪರಿಹಾರ ಇದೆ. ಇದಕ್ಕಾಗಿ ನೀವು ನಿಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಯಾವುದೇ ಸರಕಾರಿ ಕಚೇರಿಯಲ್ಲಿ ಕ್ಯೂ ನಿಲ್ಲಬೇಕಿಲ್ಲ, ನೀವೇ ನಿಮ್ಮ ಮನೆಯಲ್ಲಿಯೇ ಕುಳಿತು ಈ ಎಲ್ಲಾ ಬದಲಾವಣೆ ಮಾಡಿಕೊಳ್ಳಲು ಭಾರತೀಯ ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ.

ಇದಕ್ಕಾಗಿ ನೀವು ಮಾಡಬೇಕಿರುವುದು ಇಷ್ಟೇ, ನಿಮ್ಮ ಮೊಬೈಲ್‌ನ ಪ್ಲೇಸ್ಟೋರ್‌ನಲ್ಲಿ ವೋಟರ್ ಹೆಲ್ಪ್‌ಲೈನ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. ಅದರಲ್ಲಿ ಬರುವ ಸೂಚನೆಗಳನ್ನು ಪಾಲಿಸಿ. Next ಒತ್ತಿ, ನಂತರ ಬರುವ ಸ್ಕ್ರೀನ್‌ನಲ್ಲಿ ಇವಿಪಿ ಎಂಬುದನ್ನು ಪ್ರೆಸ್ ಮಾಡಿ, ನಿಮ್ಮ ಮೊಬೈಲ್ ಸಂಖ್ಯೆ ನೀಡಿ, ನಂತರ ಬರುವ ಒಟಿಪಿ ದಾಖಲಿಸಿದಾಗ, ನಿಮ್ಮ ವೋಟರ್ ಐಡಿಯ ಸಂಖ್ಯೆಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚನೆ ಬರುತ್ತದೆ. ಇದನ್ನು ಪಾಲಿಸಿದ ನಂತರ ಬರುವ ಸ್ಕ್ರೀನ್‌ನಲ್ಲಿ ವಿವರಗಳನ್ನು ನಮೂದಿಸಿ. ಮತದಾರರ ಪಟ್ಟಿಯಲ್ಲಿನ ನಿಮ್ಮ ಹೆಸರನ್ನು ಹುಡುಕಿದಾಗ, ನಿಮ್ಮ ಭಾವಚಿತ್ರ ಸಹಿತ ಮಾಹಿತಿ ಬರುತ್ತದೆ.

ಈ ಭಾವಚಿತ್ರ ಸಹಿತ ಮಾಹಿತಿಯಲ್ಲಿ ನಿಮ್ಮ ಭಾವಚಿತ್ರ, ಹೆಸರು, ವಯಸ್ಸು, ಲಿಂಗ, ತಂದೆ/ಪತಿ ಹೆಸರು, ವಿಳಾಸ ಇವುಗಳ ಮುಂದೆ ಪೆನ್ಸಿಲ್‌ನ ಐಕಾನ್ ಇದ್ದು, ನೀವು ಯಾವುದನ್ನು ಬದಲಾವಣೆ ಮಾಡಬೇಕೋ ಅದನ್ನು ಒತ್ತಿದಾಗ, ಆ ಬದಲಾವಣೆಗೆ ಪೂರಕವಾದ ಸಂಬಂದಪಟ್ಟ ದಾಖಲೆಗಳನ್ನು ಅಪ್ ಲೋಡ್ ಮಾಡಲು ಕೋರುತ್ತದೆ. ಸಂಬಂದಪಟ್ಟ ದಾಖಲೆಗಳನ್ನು ಅಪ್ ಲೋಡ್ ಮಾಡಿದಲ್ಲಿ, ಮತದಾರರ ಗುರುತು ಚೀಟಿಯಲ್ಲಿ ನೀವು ಕೋರಿದ ಬದಲಾವಣೆ ಸಾಧ್ಯವಾಗಲಿದೆ.

ಅಲ್ಲದೇ ಮತದಾರರ ಪಟ್ಟಿಯಲ್ಲಿ ನಿಮ್ಮ ಕುಟುಂಬದವರ ಹೆಸರು ಬೇರೆ ಬೇರೆ ಭಾಗದಲ್ಲಿ ಬೇರೆ ಬೇರೆ ಮತಗಟ್ಟೆಯಲ್ಲಿ ದಾಖಲಾಗಿದ್ದು, ಮತದಾನ ಮಾಡಲು ಬೇರೆ ಬೇರೆ ಕಡೆ ತೆರಳುವ ಸಮಸ್ಯೆ ಇದ್ದಲ್ಲಿ ಅದಕ್ಕೂ ಪರಿಹಾರವಿದೆ. ಈ ಮೊಬೈಲ್ ಆ್ಯಪ್‌ನಲ್ಲಿ ಫ್ಯಾಮಿಲಿ ಗ್ರೂಪಿಂಗ್‌ಗೆ ಸಹ ಅವಕಾಶ ನೀಡಿದ್ದು, ಬೇರೆ ಬೇರೆ ಮತಗಟ್ಟೆಗಳಲ್ಲಿರುವ ಒಂದೇ ಕುಟುಂಬದ ಸದಸ್ಯರನ್ನು ಒಂದೇ ಮತಗಟ್ಟೆಯಲ್ಲಿ ಒಂದೇ ಭಾಗದಲ್ಲಿ ಸೇರ್ಪಡೆ ಮಾಡಲು ಸಹ ಅವಕಾಶವಿದೆ.

ಭಾರತೀಯ ಚುನಾವಣಾ ಆಯೋಗ, ಮತದಾರರಿಗೆ ನೀಡಿರುವ ಈ ಸದಾವಕಾಶ ಅ.15ರವರೆಗೆ ಮಾತ್ರ ದೊರೆಯಲಿದ್ದು, ಆ ನಂತರ ನೀವು ಬದಲಾವಣೆ ಮಾಡಿರುವ ಹೊಸ ವೋಟರ್ ಐಡಿ ಕಾರ್ಡ್ ನೀಡುವ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಮತದಾರರ ಬಹುಕಾಲದ ಬೇಡಿಕೆಯಾದ ತಮ್ಮ ಭಾವಚಿತ್ರ ತಿದ್ದುಪಡಿ ಮತ್ತು ಇತರೆ ತಿದ್ದುಪಡಿಗಳನ್ನು ಮತದಾರರೇ ಮಾಡಿಕೊಳ್ಳಲು ಚುನಾವಣಾ ಆಯೋಗ ಸಿದ್ದಪಡಿಸಿರುವ, ಈ ವೋಟರ್ ಹೆಲ್ಪ್‌ಲೈನ್ ಆ್ಯಪ್ ಅತ್ಯಂತ ಸರಳವಾಗಿದ್ದು, ಬಳಕೆದಾರರ ಸ್ನೇಹಿಯಾಗಿ ರೂಪಿಸಲಾಗಿದೆ. ಈ ಆ್ಯಪ್ ಬಳಕೆ ಬಗ್ಗೆ ಯಾವುದೇ ಸಮಸ್ಯೆಗಳಿದ್ದಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರ ಮತ್ತು ಎಲ್ಲಾ ತಾಲೂಕುಗಳ ತಹಶೀಲ್ದಾರ್ ಕಚೇರಿಗಳನ್ನು ಸಂಪರ್ಕಿಸಿ, ಅಲ್ಲೂ ಸಹ ಬದಲಾವಣೆಗಳನ್ನು ಮಾಡಿಕೊಳ್ಳುವಂತೆ ಮತ್ತು ಆ್ಯಪ್ ಬಳಕೆ ಮತ್ತಿತರ ಮಾಹಿತಿಗಾಗಿ ಮತದಾರರ ಉಚಿತ ಸಹಾಯವಾಣಿ ಸಂಖ್ಯೆ 1950ನ್ನು ಸಂಪರ್ಕಿಸುವಂತೆ ಉಡುಪಿ ಜಿಲ್ಲಾ ಚುನಾವಣಾ ಶಾಖೆಯ ಅಧೀಕ್ಷಕ ಸಂಪತ್ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X