Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಯುವತಿ ಪಾಯಲ್‌ಗೆ ಗೇಟ್ಸ್...

ಭಾರತದ ಯುವತಿ ಪಾಯಲ್‌ಗೆ ಗೇಟ್ಸ್ ಫೌಂಡೇಶನ್ ನ ‘ಚೇಂಜ್‌ಮೇಕರ್’ ಪುರಸ್ಕಾರ

ಈಕೆಯ ಸಾಧನೆಯೇನು ಗೊತ್ತಾ ?

ವಾರ್ತಾಭಾರತಿವಾರ್ತಾಭಾರತಿ25 Sept 2019 9:59 PM IST
share
ಭಾರತದ ಯುವತಿ ಪಾಯಲ್‌ಗೆ ಗೇಟ್ಸ್ ಫೌಂಡೇಶನ್ ನ ‘ಚೇಂಜ್‌ಮೇಕರ್’ ಪುರಸ್ಕಾರ

ನ್ಯೂಯಾರ್ಕ್, ಸೆ.25: ಬಾಲ ಕಾರ್ಮಿಕರ ಬಳಕೆ ಹಾಗೂ ಬಾಲ್ಯ ವಿವಾಹ ವಿರುದ್ಧ ಅಭಿಯಾನ ನಡೆಸಿದ್ದ ರಾಜಸ್ತಾನದ ಯುವತಿ ಪಾಯಲ್ ಜಾಂಗಿದ್, ಬಿಲ್ ಆ್ಯಂಡ್ ಮೆಲಿಂಡಾ ಗೇಟ್ಸ್ ಫೌಂಡೇಶನ್ ನೀಡುವ ಪ್ರತಿಷ್ಠಿತ ‘ಚೇಂಜ್‌ಮೇಕರ್’ ಪುರಸ್ಕಾರ ಪಡೆದಿದ್ದಾರೆ.

ಮಂಗಳವಾರ ನಡೆದ ‘ಗೋಲ್‌ಕೀಪರ್ಸ್ ಗ್ಲೋಬಲ್ ಗೋಲ್ಸ್ ಅವಾರ್ಡ್’ ಕಾರ್ಯಕ್ರಮದಲ್ಲಿ ಈ ಪ್ರತಿಷ್ಠಿತ ಪುರಸ್ಕಾರ ಪ್ರದಾನ ಮಾಡಲಾಗಿದೆ. ಅಪ್ರಾಪ್ತ ವಯಸ್ಸಿನಲ್ಲಿಯೇ ತನಗೆ ವಿವಾಹ ಮಾಡಿರುವುದನ್ನು ವಿರೋಧಿಸಿ ಹೋರಾಡಿದ್ದ ಪಾಯಲ್, ಬಾಲ್ಯ ವಿವಾಹವನ್ನು ವಿರೋಧಿಸಿ ಹಾಗೂ ಮಕ್ಕಳಿಗೆ ಶಿಕ್ಷಣ ಕೊಡಿಸುವಂತೆ ಪೋಷಕರ ಮನ ಒಲಿಸುವ ಅಭಿಯಾನದಲ್ಲಿ ತೊಡಗಿಕೊಂಡಿದ್ದಾರೆ.

ಈ ನಿಟ್ಟಿನಲ್ಲಿ ರ್ಯಾಲಿಗಳನ್ನು ಆಯೋಜಿಸುವುದು, ಮನೆ ಮನೆಗೆ ತೆರಳಿ ಮಾಹಿತಿ ನೀಡುವುದು, ಪೋಸ್ಟರ್‌ಗಳ ಮೂಲಕ ಜನಜಾಗೃತಿ, ಗೋಡೆಗಳಲ್ಲಿ ಚಿತ್ರ ಬಿಡಿಸುವ ಮೂಲಕ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. “ನಮ್ಮ ವಿದ್ಯಾಭ್ಯಾಸಕ್ಕೆ ಪೋಷಕರು ತಡೆಯೊಡ್ಡುತ್ತಿದ್ದಾರೆ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಲು ನಾವು ಕಠಿಣ ಪರಿಶ್ರಮ ಪಡುತ್ತಿದ್ದೇವೆ. ವಿಶ್ವದಲ್ಲಿ ಶಿಕ್ಷಣದಿಂದ ವಂಚಿತವಾದ ಪ್ರತಿಯೊಂದು ಮಗುವಿಗೂ ಸಹಾಯ ನೀಡಿ ಅವಕಾಶ ಕಲ್ಪಿಸುವ ಅಗತ್ಯವಿದೆ” ಎಂದು ಪಾಯಲ್ ಹೇಳಿದ್ದಾರೆ.

ತನ್ನ ಮಗಳ ಪ್ರಯತ್ನದ ಫಲವಾಗಿ ಬಾಲ್ಯ ವಿವಾಹ ಪ್ರಕರಣಗಳಲ್ಲಿ ಗಮನಾರ್ಹ ಇಳಿಕೆಯಾಗಿದೆ. ಅವಳು ಪ್ರಮುಖ ಸುಧಾರಣೆಗೆ ಕಾರಣವಾಗಿದ್ದಾರೆ. ಬಹುತೇಕ ಎಲ್ಲಾ ಮಕ್ಕಳೂ ಈಗ ಶಾಲೆಗೆ ಹೋಗುತ್ತಿದ್ದಾರೆ. ಕಳೆದ ಒಂದು ದಶಕದಿಂದ ಗ್ರಾಮದಲ್ಲಿ ಬಾಲ್ಯವಿವಾಹದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಪಾಯಲ್ ತಂದೆ ಪಪ್ಪೂರಾಮ್ ಜಾಂಗಿದ್ ಹೇಳಿದ್ದಾರೆ.

ನೋಬೆಲ್ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅವರು ಪಾಯಲ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ. “ನಮ್ಮ ಪುತ್ರಿ ನ್ಯೂಯಾರ್ಕ್‌ನಲ್ಲಿ ಪ್ರತಿಷ್ಠಿತ ಪುರಸ್ಕಾರ ಪಡೆದಿರುವುದು ಹೆಮ್ಮೆಯ ವಿಚಾರ. ತನ್ನ ವಿವಾಹವನ್ನು ತಿರಸ್ಕರಿಸಿದ ಆಕೆ ಇಡೀ ಗ್ರಾಮವನ್ನು ಬಾಲ್ಯ ವಿವಾಹದಿಂದ ಮುಕ್ತಗೊಳಿಸಿದ್ದಾಳೆ” ಎಂದು ಸತ್ಯಾರ್ಥಿ ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X