ನರಸಿಂಹ ನಾಯಕ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಶೋಕ

ಬೆಂಗಳೂರು, ಸೆ. 25: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಸಹಕಾರಿ ಧುರೀಣ ಕೆ.ನರಸಿಂಹ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಗತಿಪರ ಕೃಷಿಕರಾಗಿದ್ದ ನರಸಿಂಹ ನಾಯಕ್ ಅವರು ಮ್ಯಾಮ್ಕೋಸ್‌ನ ಉಪಾಧ್ಯಕ್ಷರು ಹಾಗೂ ಪಟ್ಟಣ ಪಂಚಾಯತ್ ಸದಸ್ಯರಾಗಿ ಉತ್ತಮ ಕಾರ್ಯಗಳ ಮೂಲಕ ಜನಾನುರಾಗಿಯಾಗಿದ್ದರು ಎಂದು ಯಡಿಯೂರಪ್ಪ ಇಂದಿಲ್ಲಿ ಸ್ಮರಿಸಿದ್ದಾರೆ.
ನರಸಿಂಹ ನಾಯಕ್ ಅವರ ನಿಧನ ಸಹಕಾರಿ ಕ್ಷೇತ್ರಕ್ಕೆ ಮತ್ತು ವೈಯಕ್ತಿಕವಾಗಿ ನನಗೆ ನಷ್ಟವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Next Story





