ಬಿಬಿಎಂಪಿ ಮೇಯರ್ ಚುನಾವಣೆ: ಯಾವುದೇ ಸಮಿತಿ ರಚಿಸಿಲ್ಲ- ನಳೀನ್ ಕುಮಾರ್ ಕಟೀಲ್

ಬೆಂಗಳೂರು, ಸೆ.25: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ದೃಷ್ಟಿಯಿಂದ ಪಕ್ಷವು ಯಾವುದೇ ಸಮಿತಿ ರಚನೆ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.
ಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ ಬಿಬಿಎಂಪಿ ಮೇಯರ್ ಚುನಾವಣೆಗೆ ಪಕ್ಷದ ಆಯ್ಕೆ ಸಮಿತಿಯ ರಚನೆಯಾಗಿರುವುದು ಸತ್ಯಕ್ಕೆ ದೂರವಾದದ್ದು. ಬೆಂಗಳೂರು ಪ್ರಮುಖರೊಂದಿಗೆ ಸಮಾಲೋಚನೆ ಮಾಡಿ ಮೇಯರ್ ಅಭ್ಯರ್ಥಿ ಆಯ್ಕೆಯನ್ನು ರಾಜ್ಯ ಬಿಜೆಪಿ ಮಾಡಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





