ಸಾಹಿತ್ಯ ಅಕಾಡಮಿಗಳ ರಿಜಿಸ್ಟ್ರಾರ್ ಚಂದ್ರಹಾಸ ರೈ ಮಾತೃ ಇಲಾಖೆಗೆ
ಮಂಗಳೂರು, ಸೆ.25: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯಲ್ಲಿ ರಿಜಿಸ್ಟ್ರಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಹಾಸ ರೈ. ಬಿ ಅವರ ನಿಯೋಜನೆ ಅವಧಿ ಮುಗಿದಿರುವುದರಿಂದ ಅವರನ್ನು ಮಾತೃ ಇಲಾಖೆಯಾದ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಬಿಡುಗಡೆ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಚಂದ್ರಹಾಸ ರೈ ತುಳು ಅಕಾಡಮಿಯಲ್ಲದೆ ಬ್ಯಾರಿ, ಕೊಡವ ಹಾಗೂ ಅರೆಭಾಷಾ ಅಕಾಡಮಿಯ ಪ್ರಭಾರ ರಿಜಿಸ್ಟ್ರಾರ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ದ.ಕ.ಜಿಲ್ಲಾ ಸಹಾಯಕ ನಿರ್ದೇಶಕರಾಗಿಯೂ ೆಚ್ಚುವರಿ ಪ್ರಭಾರದಲ್ಲಿರಿಸಲಾಗಿತ್ತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್‌ರನ್ನು ತುಳು ಹಾಗೂ ಬ್ಯಾರಿ ಸಾಹಿತ್ಯ ಅಕಾಡಮಿಯ ರಿಜಿಸ್ಟ್ರಾರ್ ಆಗಿ ಹೆಚ್ಚುವರಿ ಪ್ರಭಾರಿಯನ್ನಾಗಿ ನೇಮಿಸಲಾಗಿದೆ.
Next Story





