ನಾಪತ್ತೆಯಾಗಿದ್ದ ಬಾಲಕಿ ಬಾವಿಯಲ್ಲಿ ಶವವಾಗಿ ಪತ್ತೆ
![ನಾಪತ್ತೆಯಾಗಿದ್ದ ಬಾಲಕಿ ಬಾವಿಯಲ್ಲಿ ಶವವಾಗಿ ಪತ್ತೆ ನಾಪತ್ತೆಯಾಗಿದ್ದ ಬಾಲಕಿ ಬಾವಿಯಲ್ಲಿ ಶವವಾಗಿ ಪತ್ತೆ](https://www.varthabharati.in/sites/default/files/images/articles/2019/09/26/211906-1569436982.jpg)
ಶಿವಮೊಗ್ಗ, ಸೆ. 25: ನಾಪತ್ತೆಯಾಗಿದ್ದ ಬಾಲಕಿಯು ಮನೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ಮಾದಾಪುರ ಗ್ರಾಮದಲ್ಲಿ ನಡೆದಿದೆ.
ಪೂಜಾ (17) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ರಿಪ್ಪನ್ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್ನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿದ್ದಳು.
ಸೋಮವಾರ ಬಾಲಕಿಯು ಮನೆಬಿಟ್ಟು ಹೋಗಿದ್ದಳು. ಈ ಕುರಿತು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಆದರೆ ಬಾಲಕಿಯ ಮೃತದೇಹವು ಆಕೆಯ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಬಾಲಕಿಯ ಸಾವು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Next Story