ಸೆ. 27: ಉಡುಪಿ ಜಿಲ್ಲೆಗೆ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಭೇಟಿ
ಉಡುಪಿ, ಸೆ.26: ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕ ಗೊಂಡ ಬಳಿಕ ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿ ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಉಡುಪಿಗೆ ಆಗಮಿಸುವ ಬಸವರಾಜ ಬೊಮ್ಮಾಯಿ, ಸಂಜೆಯವರಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 10:30ಕ್ಕೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯುವ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವರು, ಬಳಿಕ ಅಪರಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯುವ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು.
ಅಪರಾಹ್ನ 3 ಗಂಟೆಗೆ ಕೃಷ್ಣ ಮಠಕ್ಕೆ ಭೇಟಿ ನೀಡುವ ಅವರು, 3:30ಕ್ಕೆ ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಸಂಜೆ 5 ಕ್ಕೆ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಇಲಾಖಾ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ 7 ಗಂಟೆಗೆ ಉಡುಪಿುಂದ ಬೆಂಗಳೂರಿಗೆ ತೆರಳುವರು.
Next Story





