ಅ.1ಕ್ಕೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಉಡುಪಿ, ಸೆ.26: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ವಕೀಲರ ಸಂಘ ಉಡುಪಿ, ಹಿರಿಯ ನಾಗರಿಕರ ಸಂಸ್ಥೆಗಳು ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅ.1ರಂದು ಬೆಳಗ್ಗೆ 10:30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





