Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪರಮಾಣು ಶಕ್ತ ಭಾರತ, ಪಾಕ್ ತಮ್ಮ...

ಪರಮಾಣು ಶಕ್ತ ಭಾರತ, ಪಾಕ್ ತಮ್ಮ ವಿವಾದಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಡೊನಾಲ್ಡ್ ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ26 Sept 2019 9:14 PM IST
share
ಪರಮಾಣು ಶಕ್ತ ಭಾರತ, ಪಾಕ್ ತಮ್ಮ ವಿವಾದಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಡೊನಾಲ್ಡ್ ಟ್ರಂಪ್

   ನ್ಯೂಯಾರ್ಕ್, ಸೆ. 26: ಭಾರತ ಮತ್ತು ಪಾಕಿಸ್ತಾನಗಳ ಉನ್ನತ ನಾಯಕತ್ವದ ಜೊತೆಗೆ ನಾನು ನಡೆಸಿದ ಮಾತುಕತೆಗಳ ವೇಳೆ ಕಾಶ್ಮೀರ ವಿಷಯದ ಬಗ್ಗೆ ಚರ್ಚಿಸಿದ್ದೇನೆ ಹಾಗೂ ಈ ವಿಷಯದಲ್ಲಿ ಉಭಯ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸುವ ಕೊಡುಗೆಯನ್ನು ನೀಡಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ.

ಪರಮಾಣು ಶಸ್ತ್ರಗಳನ್ನು ಹೊಂದಿರುವ ಈ ಎರಡು ನೆರೆಯ ದೇಶಗಳು, ತಮ್ಮ ನಡುವಿನ ವಿವಾದಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ವಿಶ್ವಸಂಸ್ಥೆಯ ಮಹಾಸಭೆಯ ವಾರ್ಷಿಕ ಅಧಿವೇಶನದ ನೇಪಥ್ಯದಲ್ಲಿ ಮಾತನಾಡಿದ ಟ್ರಂಪ್ ಹೇಳಿದರು.

ಕಾಶ್ಮೀರ ದ್ವಿಪಕ್ಷೀಯ ವಿಷಯವಾಗಿದ್ದು, ಅದರಲ್ಲಿ ಮೂರನೇ ಪಕ್ಷದ ಮಧ್ಯಸ್ಥಿಕೆಗೆ ಯಾವುದೇ ಅವಕಾಶವಿಲ್ಲ ಎನ್ನುವುದು ಭಾರತದ ನಿಲುವಾಗಿದೆ.

ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಭಾರತ ಹಿಂದಕ್ಕೆ ಪಡೆದುಕೊಂಡ ಬಳಿಕ, ಪಾಕಿಸ್ತಾನ ಈ ವಿಷಯವನ್ನು ಅಂತರ್‌ರಾಷ್ಟ್ರೀಕರಣಗೊಳಿಸಲು ಪ್ರಯತ್ನಿಸುತ್ತಿದೆ.

ಟ್ರಂಪ್ ಸೋಮವಾರ ವಿಶ್ವಸಂಸ್ಥೆಯ ಮಹಾಸಭೆಯ ವಾರ್ಷಿಕ ಅಧಿವೇಶನದ ನೇಪಥ್ಯದಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಜೊತೆ ಮಾತುಕತೆ ನಡೆಸಿದರೆ, ಮಂಗಳವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ಸಭೆ ನಡೆಸಿದರು.

ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್, ವಿಶ್ವಸಂಸ್ಥೆಯ ಅಧಿವೇಶನದ ನೇಪಥ್ಯದಲ್ಲಿ ಭಾರತ ಮತ್ತು ಪಾಕಿಸ್ತಾನಗಳ ನಾಯಕರೊಂದಿಗೆ ನಾನು ನಡೆಸಿದ ಮಾತುಕತೆಗಳು ಫಲಪ್ರದವಾಗಿತ್ತು ಎಂದು ಹೇಳಿದರು.

 ‘‘ಪಾಕಿಸ್ತಾನ ಮತ್ತು ಭಾರತದ ನಾಯಕರ ಜೊತೆಗಿನ ಮಾತುಕತೆಗಳ ವೇಳೆ, ನಾವು ಕಾಶ್ಮೀರದ ಬಗ್ಗೆ ಚರ್ಚಿಸಿದೆವು. ನನ್ನಿಂದ ಯಾವ ಸಹಾಯ ಬೇಕಾದರೂ ನಾನು ನೀಡುತ್ತೇನೆ ಎಂದೆ. ಅದು ಪಂಚಾಯತಿ ಆಗಿರಬಹುದು, ಮಧ್ಯಸ್ಥಿಕೆ ಆಗಿರಬಹುದು ಅಥವಾ ಯಾವುದೂ ಆಗಿರಬಹುದು’’ ಎಂದು ಟ್ರಂಪ್ ಹೇಳಿದರು.

ಕಾಶ್ಮೀರ ವಿಚಾರದಲ್ಲಿ ಟ್ರಂಪ್ ಮಧ್ಯಸ್ಥಿಕೆಯ ಕೊಡುಗೆ ನೀಡುತ್ತಿರುವುದು ಇದು ನಾಲ್ಕನೇ ಬಾರಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X