ಒಲಿಂಪಿಕ್ ಪದಕ ವಿಜೇತ ಯೋಗೇಶ್ವರ್ ದತ್ ಬಿಜೆಪಿಗೆ ಸೇರ್ಪಡೆ

ಹೊಸದಿಲ್ಲಿ, ಸೆ.26: ಒಲಿಂಪಿಕ್ ಪದಕ ವಿಜೇತ ಯೋಗೇಶ್ವರ್ ದತ್ ಮತ್ತು ಭಾರತೀಯ ಹಾಕಿ ತಂಡದ ಮಾಜಿ ನಾಯಕ ಸಂದೀಪ್ ಸಿಂಗ್ ಇಂದು ಅಕಾಲಿದಳ ಶಾಸಕ ಬಾಲ್ಕೌರ್ ಸಿಂಗ್ ಜೊತೆಗೂಡಿ ಬಿಜೆಪಿಗೆ ಸೇರ್ಪಡೆಗೊಂಡರು.
2012ರಲ್ಲಿ ನಡೆದಿದ್ದ ಒಲಿಂಪಿಕ್ಸ್ ನಲ್ಲಿ ಹರ್ಯಾಣದ ಯೋಗೇಶ್ವರ್ ದತ್ 60 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ಕೆಲಸದಿಂದ ಪ್ರಭಾವಿತಗೊಂಡು ಬಿಜೆಪಿ ಸೇರ್ಪಡೆಗೊಂಡಿದ್ದೇನೆ ಎಂದು ಅವರು ಹೇಳಿದರು.
Next Story