Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅ.2ರಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ...

ಅ.2ರಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಪ್ಲಾಸ್ಟಿಕ್ ನಿಷೇಧ: ಡಿಸಿ ಜಗದೀಶ್

ವಾರ್ತಾಭಾರತಿವಾರ್ತಾಭಾರತಿ26 Sept 2019 9:55 PM IST
share
ಅ.2ರಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಪ್ಲಾಸ್ಟಿಕ್ ನಿಷೇಧ: ಡಿಸಿ ಜಗದೀಶ್

ಉಡುಪಿ, ಸೆ.26: ಜಿಲ್ಲೆಯ ಎಲ್ಲಾ ನಗರ ಸ್ಥಳಿಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್‌ಗಳು ಸೇರಿದಂತೆ ಜಿಲ್ಲೆಯಾದ್ಯಂತ ಅಕ್ಟೋಬರ್ 2ರ ನಂತರ ಪ್ಲಾಸ್ಟಿಕ್‌ನಿಷೇಧವನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದ್ದು, ನಿಷೇಧಿತ ಪ್ಲಾಸ್ಟಿಕ್ ಬಳಸುವ ಸಾರ್ವಜನಿಕರು ಸೇರಿದಂತೆ ಪ್ರತಿಯೊಬ್ಬರ ಮೇಲೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಗುರುವಾರ ಉಡುಪಿ ನಗರಸಭೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ರಾಜ್ಯ ಸರಕಾರದ 2016 ಮಾ.11ರ ಅಧಿಸೂಚನೆ ಹಾಗೂ ರಾಷ್ಟ್ರೀಯ ಹಸಿರು ಪೀಠದ ಕಳೆದ ಆಗಸ್ಟ್ 27ರ ಆದೇಶದಂತೆ ಈ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಸೆ.27ರಿಂದ ಅ.2ರವರೆಗೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮನೆಮನೆಗೆ ಭೇಟಿ ನೀಡಿ ಅರಿವು ಹಾಗೂ ಜಾಗೃತಿ ಮೂಡಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಅಂಗಡಿ, ಸಗಟು ವ್ಯಾಪಾರಿ, ಚಿಲ್ಲರೆ ವ್ಯಾಪಾರಿ ಬಳಿ ಇರುವ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಳ್ಳಲಾಗುವುದು ಹಾಗೂ ಎಲ್ಲಾ ಕಡೆಗಳಲ್ಲಿ ಇರುವ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸಲಾಗುವುದು ಎಂದವರು ಹೇಳಿದರು.

ಅ.2ರ ನಂತರ ಸಹ ಪ್ಲಾಸ್ಟಿಕ್ ಕಂಡು ಬಂದಲ್ಲಿ ಅಂತಹವರ ವಿರುದ್ದ ಪ್ಲಾಸ್ಟಿಕ್ ನಿಷೇಧಕಾಯ್ದೆಯಲ್ಲಿ ಸೂಚಿಸಿರುವ ದಂಡನಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಥಮ ಬಾರಿಗೆ 1,000ರೂ., ಎರಡನೇ ಬಾರಿಗೆ 2,000ರೂ. ದಂಡವನ್ನು ವಿಧಿಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುವುದು. ಇದು ಮುಂದುವರಿದರೆ ಉದ್ದಿಮೆ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಕೇಂದ್ರ ಸರಕಾರ ಸಹ ಪ್ಲಾಸ್ಟಿಕ್ ನಿಷೇಧ ಕುರಿತು ಸೂಚನೆ ನೀಡಿದ್ದು, ಸ್ವಚ್ಚತಾ ಸೇವಾ ಕಾರ್ಯಕ್ರಮ ರೂಪಿಸಿದೆ. ಅ.2ರಂದು ಗಾಂಧಿ ಜಯಂತಿ ಆಚರಣೆಯ ಬಳಿಕ ಫ್ಲಾಸ್ಟಿಕ್ ಮುಕ್ತಿಗಾಗಿ ಸ್ವಚ್ಚತಾ ಶ್ರಮದಾನವನ್ನು ದೊಡ್ಡ ಮಟ್ಟದಲ್ಲಿ ಕೈಗೊಳ್ಳಲಾಗುವುದು. ಇದರೊಂದಿಗೆ ಪ್ಲಾಸ್ಟಿಕ್ ನಿಷೇಧ ವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದರು.

ಪ್ಲಾಸ್ಟಿಕ್‌ನಿಂದ ವಸ್ತುಗಳನ್ನು ತಯಾರಿಸುವವರು, ಸರಬರಾಜು ಮಾಡುವ ವರು, ಸಂಗ್ರಹಣೆ ಮಾಡುವವರು, ಸಾಗಾಟ ಮಾಡುವವವರು, ಮಾರಾಟ ಮತ್ತು ವಿತರಣೆ ಮಾಡುವವರ ವಿರುದ್ದ ಸಹ ಕ್ರಮಕೈಗೊಳ್ಳಲಾಗುವುದು. ಯಾವುದೇ ರೀತಿಯ ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ನಿಷೇಧಿಸಿದ್ದು, ಸಾರ್ವಜನಿಕರು ಬಟ್ಟೆಯ ಕೈಚೀಲಗಳನ್ನು ಬಳಸುವಂತೆ ಡಿಸಿ ಹೇಳಿದರು.

ಫ್ಲೆಕ್ಸ್ ಮುದ್ರಿಸುವವರು, ಅಳವಡಿಸುವವರ ವಿರುದ್ದ ಮತ್ತು ಬೊಕ್ಕೆಗಳ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುವ ವ್ಯಾಪಾರಿಗಳ ವಿರುದ್ದ ಸಹ ಕ್ರಮ ಕೈಗೊಳ್ಳಲಾಗುವುದು ಎಂದ ಡಿಸಿ, ಎರಡು ಬಾರಿ ದಂಡ ವಿಧಿಸಿದ ಬಳಿಕ 3ನೇ ಬಾರಿ ಉಲ್ಲಂಸಿದರೆ ಅಂತಹವರ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲಾಗುವುದು. ಹೊರಗಿನಿಂದ ವಾಹನಗಳಲ್ಲಿ ಪ್ಲಾಸ್ಟಿಕ್ ವಸ್ತು ತರಿಸಿಕೊಂಡರೆ ಅಂತಹ ವಾಹನ ಮಾಲಕರು ಮತ್ತು ವಾಹನಗಳ ಮೇಲೂ ಮೊಕದ್ದಮೆ ದಾಖಲು ಮಾಡಲಾಗುವುದು ಎಂದರು.

ಜಿಲ್ಲೆಯಾದ್ಯಂತ ಸ್ಥಳೀಯಾಡಳಿತಗಳು ಮತ್ತು ಗ್ರಾಪಂಗಳಲ್ಲಿ ನಿಗದಿತ ಸ್ಥಳದಲ್ಲಿ ಮಾತ್ರ ಜಾಹೀರಾತು ಮತ್ತು ಪೋಸ್ಟರ್ ಅಳವಡಿಕೆ ಬಗ್ಗೆ ಮತ್ತು ಕಡ್ಡಾಯವಾಗಿ ಬಟ್ಟೆ ಅಥವಾ ಪರಿಸರ ಸ್ನೇಹಿ ವಸ್ತುವಿನಿಂದ ತಯಾರಿಸಿದ ಜಾಹೀರಾತುಗಳನ್ನು ಸಂಬಂದಪಟ್ಟವರಿಂದ ಸೂಕ್ತ ಅನುಮತಿ ಪಡೆದು ಅಳವಡಿಸುವಂತೆ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವುದೇ ಜಾಹಿರಾತು ಅಳವಡಿಸದಂತೆ ಅವರು ಸಂಬಂಧಿತ ಎಲ್ಲರಿಗೂ ಸೂಚಿಸಿದರು.

ನಗರಸಭೆ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X