ಬಂಗಾಳ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ಗಂಗುಲಿ ಮರು ಆಯ್ಕೆ

ಕೋಲ್ಕತಾ, ಸೆ.26: ಬಂಗಾಳ ಕ್ರಿಕೆಟ್ ಸಂಸ್ಥೆ(ಸಿಎಬಿ)ಅಧ್ಯಕ್ಷರಾಗಿ ಭಾರತದ ಮಾಜಿ ನಾಯಕ ಸೌರವ್ ಗಂಗುಲಿ ಮತ್ತೊಂದು ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗಂಗುಲಿ 2020ರ ಜುಲೈ ತನಕ ಸಿಎಬಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಆ ಬಳಿಕ ಬಿಸಿಸಿಐ ನಿಯಮದ ಪ್ರಕಾರ ಅಧ್ಯಕ್ಷ ಸ್ತಾನದಿಂದ ದೂರ ಉಳಿಯಲಿದ್ದಾರೆ.
ಗಂಗುಲಿ 2015ರಲ್ಲಿ ಜಗಮೋಹನ್ ದಾಲ್ಮಿಯಾ ನಿಧನದಿಂದ ತೆರವಾದ ಸ್ಥಾನವನ್ನು ತುಂಬಿದ್ದರು. 2014ರಲ್ಲಿ ಜೊತೆ ಕಾರ್ಯದರ್ಶಿಯಾಗುವ ಮೊದಲು ಕಾರ್ಯಕಾರಿ ಸಮಿತಿಯಲ್ಲಿ ಕಾರ್ಯನಿರ್ವಹಿಸಿದ್ದರು. 47ರ ಹರೆಯದ ಗಂಗುಲಿ 2020ರಲ್ಲಿ ಸಿಎಬಿ ಅಧ್ಯಕ್ಷರಾಗಿ ಆರು ವರ್ಷ ಪೂರ್ಣಗೊಳಿಸಲಿದ್ದಾರೆ.
Next Story





