ಅಧಿಕಾರ ರಾಜಕಾರಣದಿಂದ ಕಾಂಗ್ರೆಸ್ ಅಧಃಪತನ: ಬೊಮ್ಮಾಯಿ

ಉಡುಪಿ, ಸೆ.27: ಅಧಿಕಾರಕ್ಕಾಗಿ ಮಾಡುವ ರಾಜಕಾರಣ ಶಾಶ್ವತ ಅಲ್ಲ. ಕಾಂಗ್ರೆಸ್ ಪಕ್ಷದ ಇಂದಿನ ಅಧೋಗತಿಗೆ ಅಧಿಕಾರಕ್ಕಾಗಿ ಮಾಡಿರುವ ರಾಜಕಾರಣವೇ ಕಾರಣ. ಇಂದು ಕಾಂಗ್ರೆಸ್ ಪಕ್ಷ ಅಧಃಪತನದಲ್ಲಿದೆ. ಯಾವುದೇ ರಾಜ್ಯದಲ್ಲೂ ಕಾಂಗ್ರೆಸ್ ಎದ್ದು ನಿಲ್ಲುವ ಪರಿಸ್ಥಿತಿಯಲ್ಲಿ ಇಲ್ಲ. ಅದು ಮುಳುಗುತ್ತಿರುವ ಹಡಗು ಎಂದು ರಾಜ್ಯ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಪಕ್ಷದ ಕಚೇರಿಯಲ್ಲಿ ಅಭಿ ನಂದನೆ ಸ್ವೀಕರಿಸಿ ಅವರು ಮಾತನಾಡುತಿದ್ದರು. ಬಿಜೆಪಿ ಜನ ಹಾಗೂ ದೇಶದ ಹಿತಕ್ಕಾಗಿ ರಾಜಕಾರಣ ಮಾಡಿದೆ ಹೊರತು ಎಂದಿಗೂ ಅಧಿಕಾರಕ್ಕಾಗಿ ರಾಜ ಕಾರಣ ಮಾಡಿಲ್ಲ. ಇದರಿಂದ ಬಿಜೆಪಿ ಇಂದು ಇಡೀ ದೇಶದಲ್ಲಿ ಅಧಿಕಾರ ಪಡೆದುಕೊಂಡಿದೆ. ನಾವು ನಂಬಿಕೊಂಡು ಬಂದ ಆದರ್ಶ, ವಿಚಾರಧಾರೆ, ಕಾರ್ಯಕ್ರಮಗಳನ್ನು ಅಧಿಕಾರಕ್ಕೆ ಬಂದಾಗ ಅನುಷ್ಠಾನಗೊಳಿುವುದೇ ದೊಡ್ಡ ಸವಾಲು ಎಂದರು.
ಜಿಲ್ಲೆಯ ಜನರ, ಪಕ್ಷ ಹಾಗೂ ಕಾರ್ಯಕರ್ತರ ಹಿತರಕ್ಷಣೆ ಮತ್ತು ವಿಚಾರಗಳ ಧ್ವನಿಯಾಗಿ ಕೆಲಸ ಮಾಡಲು ನಾನು ಸಿದ್ಧನೀದ್ದೇನೆ. ಕರಾವಳಿ ಜಿಲ್ಲೆ ಗಳನ್ನು ಅಭಿವೃದ್ಧಿ ಪಡಿಸಲು ವಿಫುಲ ಅವಕಾಶಗಳಿವೆ. ಪ್ರವಾಸೋದ್ಯಮ, ಕೈಗಾರಿಕೆ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಹಣ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.
ಶಾಸಕರುಗಳಾದ ರಘುಪತಿ ಭಟ್, ಸುನೀಲ್ ಕುಮಾರ್, ಲಾಲಾಜಿ ಆರ್. ಮೆಂಡನ್, ಸುಕುಮಾರ್ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಮುಖಂಡ ರಾದ ಉದಯ ಕುಮಾರ್ ಶೆಟ್ಟಿ, ಸಂಧ್ಯಾ ರಮೇಶ್, ಪ್ರಭಾಕರ ಪೂಜಾರಿ ಕುತ್ಯಾರ್ ನವೀನ್ ಶೆಟ್ಟಿ ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಯಶ್‌ಪಾಲ್ ಸುವರ್ಣ ಸ್ವಾಗತಿಸಿದರು. ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.







