ಉಸ್ತುವಾರಿ ಸಚಿವರ ಭರವಸೆ: ಮರಳಿಗಾಗಿ ಧರಣಿ ಅಂತ್ಯ

ಉಡುಪಿ, ಸೆ.27: ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರ ಭರವಸೆ ಹಿನ್ನೆಲೆಯಲ್ಲಿ ಕಳೆದ ಐದು ದಿನಗಳಿಂದ ಮರಳುಗಾರಿಕೆ ಆರಂಭಿ ಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕಟ್ಟಡ ಕಾರ್ಮಿಕರು ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಇಂದು ಅಂತ್ಯಗೊಂಡಿದೆ.
ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿದ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಧರಣಿ ಸ್ಥಳಕ್ಕೆ ಬರಲು ನಿರಾಕರಿಸಿದಾಗ ಪ್ರತಿಭಟನಕಾ ರರು, ರಸ್ತೆಗೆ ತೆರಳಿ ಧಿಕ್ಕಾರ ಕೂಗಿದರು. ಬಳಿಕ ಪ್ರತಿಭಟನೆಗೆ ಮಣಿದು ಸ್ಥಳಕ್ಕೆ ಆಗಮಿಸಿದ ಸಚಿವರು ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ್ ಕಲ್ಲಾಗರ, ಶೇಖರ ಬಂಗೇರ, ಬಾಲಕೃಷ್ಣ ಶೆಟ್ಟಿ, ದಾಸ ಭಂಡಾರಿ, ಕವಿರಾಜ್ ಮೊದಲಾದವರು ಉಪಸ್ಥಿತರಿದ್ದರು.
ಸರಕಾರ ಮಧ್ಯಪ್ರವೇಶ ಮಾಡಿ ಮರಳುಗಾರಿಕೆಯ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು ಮತ್ತು ಕುಂದಾಪುರ ಹಾಗೂ ಬೈಂದೂರುಗಳಲ್ಲಿಯೂ ಮರಳುಗಾರಿಕೆ ಆರಂಭಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಆದ್ದರಿಂದ ಈ ಧರಣಿಯನ್ನು ತಾತ್ಕಾಲಿಕ ವಾಗಿ ಹಿಂಪಡೆಯಲಾಗಿದೆ ಎಂದು ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಸಂಚಾಲಕರಾದ ಸುರೇಶ್ ಕಲ್ಲಾಗರ ಹಾಗೂ ಶೇಖರ ಬಂಗೇರ ಹೇಳಿಕೆ ಯಲ್ಲಿ ತಿಳಿಸಿದ್ದಾರೆ.





