Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟ್ಲದ ಆಲಂಗಾರು ಭಾಗದಲ್ಲಿ ಗಣಿಗಾರಿಕೆ...

ವಿಟ್ಲದ ಆಲಂಗಾರು ಭಾಗದಲ್ಲಿ ಗಣಿಗಾರಿಕೆ ನಿಲ್ಲಿಸುವಂತೆ ರೈತ ಸಂಘದ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 Sept 2019 8:50 PM IST
share

ವಿಟ್ಲ, ಸೆ. 27: ವಿಟ್ಲ ಕಸಬಾ ಗ್ರಾಮದ ಆಲಂಗಾರು ಭಾಗದ ರೈತರಿಗೆ ಗಣಿಗಾರಿಕೆಯಿಂದ ಕೃಷಿ ನಾಶವಾಗುವ ದೂರಿನ ಹಿನ್ನಲೆಯಲ್ಲಿ ಸ್ಥಳೀಯ ಪರಿಸರ ರಕ್ಷಣೆಯ ನಿಟ್ಟಿನಲ್ಲಿ ರೈತ ಸಂಘ 2016ರಿಂದಲೇ ಹೋರಾಟ ಮಾಡುತ್ತಾ ಬಂದಿದ್ದು, ಇದೀಗ ಗಣಿ ಇಲಾಖೆ ಕಲ್ಲು ಗಣಿ ಗುತ್ತಿಗೆಯನ್ನು ರದ್ದುಗೊಳಿಸಿದ ಬಗ್ಗೆ ಆದೇಶ ಹೊರಡಿಸಿ 11 ದಿನ ಕಳೆದರೂ ಕಲ್ಲು ಕೋರೆ ನಡೆಯುತ್ತಿದೆ. ಇದನ್ನು ತಕ್ಷಣ ಸಂಬಂಧಪಟ್ಟವರು ನಿಲ್ಲಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ಒತ್ತಾಯಿಸಿದ್ದಾರೆ.

ವಿಟ್ಲ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮವಾಗಿ ಸ್ಪೋಟಕಗಳನ್ನು ಬಳಸಿ ನಡೆಯುತ್ತಿರುವ ಗಣಿಗಾರಿಕೆಯಿಂದ ಬೆಳೆಗಳು ನಾಶವಾಗುತ್ತಿರುವ ಬಗ್ಗೆ ವಿಟ್ಲ ಕಸಬ ಭಾಗದ ರೈತರ ದೂರುಗಳ ಹಿನ್ನಲೆಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಲಾಗಿತ್ತು. ನ್ಯಾಯಾಲಯ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಸಂದರ್ಭದಲ್ಲಿ ಗಣಿ ಇಲಾಖೆ ನೀಡಿದ್ದ ಪರವಾನಿಗೆಯನ್ನು ಹಿಂಪಡೆಯುವುದಾಗಿ ಹೇಳಿ ಆದೇಶ ಹೊರಡಿಸಿದ ಪ್ರಕಾರ ಕಲ್ಲು ಗಣಿಗಾರಿಕೆ ಸ್ಥಗಿತವಾಗಬೇಕಾಗಿತ್ತು. ಆದರೆ, ರಾಜಕೀಯ ವ್ಯಕ್ತಿಗಳ ಪ್ರಭಾವದ ಹಿನ್ನಲೆಯಲ್ಲಿ ಆದೇಶವನ್ನು ಉಲ್ಲಂಘಿಸಿ ಗಣಿಗಾರಿಕೆ ಮುಂದುವರಿದಿದೆ. ರೈತರಿಗೆ ಸಮಸ್ಯೆಯಾಗುವ ಗಣಿಗಾರಿಕೆಯನ್ನು ತಡೆ ಹಿಡಿಯಬೇಕು ಎಂದು ಅವರು ಆಗ್ರಹಿಸಿದರು.

ನ್ಯಾಯಾಲಯದ ಆದೇಶವನ್ನು ಪಾಲಿಸಬೇಕಾದ ಸ್ಥಳೀಯ ಪಂಚಾಯತ್ ಮುಂದುವರಿದು ಗಣಿಗಾರಿಕೆಯನ್ನು ಸ್ಥಗಿತ ಮಾಡುತ್ತಿಲ್ಲ. ಇದನ್ನು ಗಮನಿಸಿದರೆ ಅವರು ಕೂಡಾ ಈ ಅಕ್ರಮದಲ್ಲಿ ಶಾಮೀಲಾಗಿದ್ದಾರೆ ಎನ್ನುವ ಬಗ್ಗೆ ಅನುಮಾನಗಳು ಮೂಡುತ್ತಿದೆ. ಪೆÇಲೀಸ್ ಇಲಾಖೆಗೂ ಈ ಬಗ್ಗೆ ತಿಳಿಸಲಾಗುವುದು. ಅಧಿಕಾರಿಗಳು ನಿಲ್ಲಿಸದೇ ಇದ್ದಲ್ಲಿ ರೈತರೇ ಮುಂದುವರಿದು ಗಣಿಯನ್ನು ನಿಲ್ಲಿಸುವ ಕಾರ್ಯ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸ್ಥಳೀಯ ನಿವಾಸಿ ಶ್ರೀಪತಿ ಎ. ಮಾತನಾಡಿ, 10 ವರ್ಷಗಳಿಂದ ಗಣಿಗಾರಿಕೆಯ ಕೆಲಸಗಳು ಆರಂಭವಾಗಿದೆ. ಸ್ಥಳೀಯರೆಲ್ಲರೂ ಸೇರಿಕೊಂಡು ದೊಡ್ಡ ಮಟ್ಟದಲ್ಲಿ ಹೋರಾಟವನ್ನೂ ನಡೆಸಿದ್ದರೂ, ಗಣಿ ಇಲಾಖೆ ಪರವಾನಿಗೆ ನೀಡಿತ್ತು. ಜಿಲ್ಲಾಡಳಿತ ಸೇರಿ ಎಲ್ಲ ಅಧಿಕಾರಿಗಳಿಗೆ ಈ ಬಗ್ಗೆ ನಿರಂತರವಾಗಿ ದೂರುಗಳನ್ನು ನೀಡುತ್ತಾ ಬರಲಾಗಿದೆ ಎಂದು ತಿಳಿಸಿದರು.

ಹಿರಿಯ ಹೋರಾಟಗಾರ ಮುರುವ ಮಹಾಬಲ ಭಟ್ ಮಾತನಾಡಿ, ಪಂಚಾಯತ್‍ಯಲ್ಲಿ ಲೈಸನ್ಸ್ ರದ್ದು ಮಾಡಿದರೂ, ಗಣಿ ಇಲಾಖೆಯ ಪರವಾನಿಗೆ ಇದ್ದ ಹಿನ್ನಲೆಯಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿತ್ತು. ಈ ಗಣಿ ಇಲಾಖೆಯೂ ನೀಡಿದ ಪರವಾನಿಗೆಯನ್ನು ರದ್ದು ಗೊಳಿಸಿದೆ. ಎಲ್ಲರೂ ಅಕ್ರಮ ಎಂದು ಹೇಳುವುದನ್ನು ಒಪ್ಪಿಕೊಂಡಿದ್ದಾರೆ. ಅಕ್ರಮವನ್ನು ತಡೆಗಟ್ಟುವುದು ಸಂಭಂದಪಟ್ಟವರ ಜವಾಬ್ದಾರಿ. ಅದನ್ನು ಮಾಡದೇ ಹೋದಲ್ಲಿ ಅ. 2ರೊಳಗೆ ರೈತರ ಜೊತೆಗೆಯಾಗಿ ಆಂದೋಲನ ಆಯೋಜಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸ್ಥಳೀಯರಾದ ಎ. ರಾಜೇಶ್, ಅಯ್ಯಪ್ಪ ಮೂಲ್ಯ, ರಾಧಾಕೃಷ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X