Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.75 ಯುವಕರು 21ರ ಹರೆಯಕ್ಕೂ ಮೊದಲು...

ಶೇ.75 ಯುವಕರು 21ರ ಹರೆಯಕ್ಕೂ ಮೊದಲು ಮದ್ಯಪಾನ ಮಾಡುತ್ತಾರೆ: ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ27 Sept 2019 9:24 PM IST
share
ಶೇ.75 ಯುವಕರು 21ರ ಹರೆಯಕ್ಕೂ ಮೊದಲು ಮದ್ಯಪಾನ ಮಾಡುತ್ತಾರೆ: ಸಮೀಕ್ಷೆ

ಮುಂಬೈ,ಸೆ.27: ಭಾರತದ ಶೇ.75 ಯುವಕರು 21ರ ಹರೆಯಕ್ಕೂ ಮೊದಲೇ ಮದ್ಯಪಾನ ಮಾಡುತ್ತಾರೆ ಎಂದು ಬಹುನಗರಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಪ್ಪಿಕೊಂಡಿದ್ದಾರೆ. ಭಾರತದ ಕಾನೂನಿನಂತೆ ಆಲ್ಕೊಹಾಲ್ ಸೇವಿಸಲು 21 ವರ್ಷ ವಯಸ್ಸಾಗಿರಬೇಕು. ದಕ್ಷಿಣ ಮುಂಬೈಯ ಸಂತ ಕ್ಸೇವಿಯರ್ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಅವಕಾಶ್ ಜಾದವ್ ಅವರ ಮಾರ್ಗದರ್ಶನದಲ್ಲಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳು ಈ ಸಮೀಕ್ಷೆಯನ್ನು ನಡೆಸಿದ್ದಾರೆ.

ಸಮೀಕ್ಷೆಯ ವರದಿಯನ್ನು ಮಾದಕದ್ರವ್ಯ ನಿಯಂತ್ರಣ ಮಂಡಳಿ (ಎನ್‌ಸಿಬಿ) ವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಭೂಮೇಶ್ ಅಗರ್ವಾಲ್ ಅವರಿಗೆ ಹಸ್ತಾಂತರಿಸಲಾಗಿದೆ. ಮುಂಬೈ, ಪುಣೆ, ದಿಲ್ಲಿ, ಕೋಲ್ಕತಾ, ರಾಜಸ್ಥಾನ ಮುಂತಾದ ನಗರಗಳ 16ರಿಂದ 21ರ ಹರೆಯದ 1,000 ಯುವಕರನ್ನು ಸಮೀಕ್ಷೆಯಲ್ಲಿ ಪ್ರಶ್ನಿಸಲಾಗಿದೆ. ಝೆಕ್ ಗಣರಾಜ್ಯದ ರಾಜಧಾನಿ ಪ್ರೇಗ್ ಮತ್ತು ಮಧ್ಯ ಯೂರೋಪ್ ದೇಶ ಹಂಗೇರಿಯ ಯುವಕರನ್ನೂ ಈ ಸಮೀಕ್ಷೆ ಒಳಗೊಂಡಿದೆ. ಶೇ.75 ಯುವಕರು 21ರ ಹರೆಯಕ್ಕೂ ಮೊದಲೇ ಮದ್ಯಪಾನ ಮಾಡಿದ್ದರೆ, ಶೇ.47 ಯುವಕರು ಸಿಗರೇಟ್ ಸೇದಲು ಆರಂಭಿಸಿದ್ದಾರೆ. ಶೇ.20 ಯುವಕರು ಮಾದಕ ದ್ರವ್ಯ ಸೇವಿಸಿದ್ದಾರೆ ಮತ್ತು ಶೇ.30 ಯುವಕರು ಹುಕ್ಕ ಸೇದಿದ್ದಾರೆ ಎಂದು ಸಮೀಕ್ಷೆಯಲ್ಲಿ ತಿಳಿದುಬಂದಿದೆ.

16ರಿಂದ 18ರ ನಡುವಿನ ವಯಸ್ಸಿನ ಶೇ.88 ಯುವಕರು ಒಂದಿಲ್ಲೊಂದು ಚಟವನ್ನು ಪ್ರಯತ್ನಿಸಿದ್ದಾರೆ ಎಂದು ಸಮೀಕ್ಷಾ ವರದಿ ತಿಳಿಸಿದೆ. ಗೆಳೆಯರ ಒತ್ತಡ ಮತ್ತು ಉದ್ದೀಪನ ವಸ್ತುಗಳು ಸುಲಭವಾಗಿ ಸಿಗುವುದು ಇತ್ಯಾದಿ, ಯುವಕರು ಬಹುಬೇಗನೆ ಇಂತಹ ಚಟಕ್ಕೆ ಸಿಲುಕಲು ಇರುವ ಕಾರಣಗಳಲ್ಲಿ ಕೆಲವಾಗಿವೆ ಎಂದು ವರದಿ ತಿಳಿಸಿದೆ. ಶೇ.17 ಯುವಕರು, ಈ ಚಟಗಳಿಂದ ಹೊರಬರಲು ನಾವು ಹೊರಗಿನವರ ಸಹಾಯ ಪಡೆದುಕೊಳ್ಳಲಿಲ್ಲ ಎಂದು ತಿಳಿಸಿದ್ದರೆ ಶೇ.83 ಯುವಕರು, ಈ ಸಮಸ್ಯೆಯಿಂದ ಹೊರಬರಲು ಎಲ್ಲಿ ಮತ್ತು ಹೇಗೆ ಸಹಾಯ ಪಡೆಯಬಹುದು ಎನ್ನುವುದು ತಿಳಿದಿಲ್ಲ ಎಂದು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X