ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವ ಬಸವರಾಜ ಬೊಮ್ಮಾಯಿ

ಉಡುಪಿ: ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮೊದಲ ಬಾರಿ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಬಳಿಕ ಅವರು ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಸುನಿಲ್ ಕುಮಾರ್, ಬಿ.ಎಂ.ಸುಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಉದಯಕುಮಾರ ಶೆಟ್ಟಿ, ಸುಪ್ರಸಾದ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
Next Story





