ಮಂಗಳೂರು: ಮೀನುಗಾರರ ಸಹಕಾರ ಸಂಘದ ಮಹಾಸಭೆ
ಮಂಗಳೂರು, ಸೆ. 27: ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ನಗರದ ಬಂದರ್‌ನಲ್ಲಿರುವ ಮುಸ್ಲಿಂ ಸೆಂಟ್ರಲ್ ಕಮಿಟಿಯ ಸಭಾಂಗಣದಲ್ಲಿ ಜರುಗಿತು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಬ್ದುಲ್ಲತೀಫ್ ವಾರ್ಷಿಕ ವರದಿ ವಾಚಿಸಿ 2018-19ನೆ ಸಾಲಿನಲ್ಲಿ ಸಂಘವು 89.44 ಕೋ.ರೂ. ವಹಿವಾಟು ನಡೆಸಿದ್ದು, 5.11ಕೋ.ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.25 ಡಿವಿಡೆಂಟ್ ಘೋಷಿಸಲಾಗಿದೆ ಎಂದರು.
ಸಂಘದ ಅಧ್ಯಕ್ಷ ಜೆ.ಮುಹಮ್ಮದ್ ಇಸಾಕ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅಹ್ಮದ್ ಬಾವ ಬಜಾಲ್, ಚಾರ್ಟಡ್ ಅಕೌಂಟೆಂಟ್ ಪ್ರವೀಣ್ ಕುಮಾರ್ ಶೆಟ್ಟಿ, ನಿರ್ದೇಶಕರಾದ ಯು.ಟಿ.ಅಹ್ಮದ್ ಶರೀಫ್, ಬಿ. ಇಬ್ರಾಹೀಂ, ಮುಹಮ್ಮದ್ ಅಶ್ರಫ್, ಎಂ.ಎ.ಗಫೂರ್, ಎಸ್.ಕೆ.ಇಸ್ಮಾಯಿಲ್, ಎಸ್.ಎಂ. ಇಬ್ರಾಹಿಂ, ಟಿ.ಎಚ್. ಹಮೀದ್, ಸುದತ್, ಬಿ.ಮುಹಮ್ಮದ್ ಶಾಲಿ, ಎ.ಎಂ.ಕೆ. ಮುಹಮ್ಮದ್ ಇಬ್ರಾಹಿಂ, ತಾಪಂ ಮಾಜಿ ಸದಸ್ಯ ಮುಹಮ್ಮದ್ ಮುಸ್ತಫಾ ಮಲಾರ್ ಉಪಸ್ಥಿತರಿದ್ದರು.
Next Story





