ಮಡಿಕೇರಿ: ಗುಂಡು ಹಾರಿಸಿ ಕಾಫಿ ವ್ಯಾಪಾರಿ ಆತ್ಮಹತ್ಯೆ

ಮಡಿಕೇರಿ, ಸೆ. 28: ಕಾಫಿ ವ್ಯಾಪಾರಿ ತನ್ನ ಮಳಿಗೆಯಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುದಿಕೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಚ್ಚಿಯಂಡ ಸುನೀಲ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹುದಿಕೇರಿಯ ಮಹಾದೇವ ದೇವಾಲಯ ಮುಂಭಾಗದ ತನ್ನ ಮಳಿಗೆಯಲ್ಲಿ ಅವರದೇ ರಿವಾಲ್ವರ್ ನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ 20 ವರ್ಷಗಳಿಂದ ಕಾಫಿ ವ್ಯಾಪಾರದಲ್ಲಿ ತೊಡಗಿಕೊಂಡಿದ್ದು, ಸಮಾಜ ಸೇವೆಯಲ್ಲೂ ಸಕ್ರಿಯರಾಗಿದ್ದರು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ವ್ಯಕ್ತಿ ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Next Story





