Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಕೆಕೆಎಂಎ' ಮೃತ ಸದಸ್ಯರ ಕುಟುಂಬಕ್ಕೆ...

'ಕೆಕೆಎಂಎ' ಮೃತ ಸದಸ್ಯರ ಕುಟುಂಬಕ್ಕೆ ಸಹಾಯಹಸ್ತ, ವಿವಿಧ ಸಂತ್ರಸ್ತರಿಗೆ ನೆರವು

ವಾರ್ತಾಭಾರತಿವಾರ್ತಾಭಾರತಿ28 Sept 2019 8:36 PM IST
share
ಕೆಕೆಎಂಎ ಮೃತ ಸದಸ್ಯರ ಕುಟುಂಬಕ್ಕೆ ಸಹಾಯಹಸ್ತ, ವಿವಿಧ ಸಂತ್ರಸ್ತರಿಗೆ ನೆರವು

ಮಂಗಳೂರು, ಸೆ.28: ಕೆಕೆಎಂಎ (ಕುವೈತ್ ಕೇರಳ ಮುಸ್ಲಿಂ ಅಸೋಸಿಯೇಶನ್) ಕರ್ನಾಟಕ ಶಾಖೆಯಿಂದ ನಗರದ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಶನಿವಾರ ಸಂಜೆ ಹಮ್ಮಿಕೊಳ್ಳಲಾದ ಸಂಘಟನೆಯ ಮೃತ ಸದಸ್ಯರೋರ್ವರ ಕುಟುಂಬಕ್ಕೆ ‘ಫ್ಯಾಮಿಲಿ ಬೆನೆಫಿಟ್ ಸ್ಕೀಮ್’ ಅಡಿಯಲ್ಲಿ ಸಹಾಯಹಸ್ತ ಸೇರಿದಂತೆ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ವಿವಿಧ ಸಂತ್ರಸ್ತರಿಗೆ ಚೆಕ್ ವಿತರಿಸುವ ಕಾರ್ಯಕ್ರಮ ನಡೆಯಿತು.

ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ಕರಾವಳಿಯ ಬ್ಯಾರಿಗಳು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುತ್ತಿದ್ದು, ನಾಗರಿಕ ಸೇವೆಗಳಾದ ಐಎಎಸ್, ಐಪಿಎಸ್, ಐಎಫ್‌ಎಸ್‌ನಂತಹ ಉನ್ನತ ಹುದ್ದೆಗಳನ್ನು ಅಲಂಕರಿಸಿ ದೇಶ ಸೇವೆ ಮಾಡಬೇಕು ಎಂದು ತಿಳಿಸಿದರು.

ಸಮುದಾಯದ ಮಕ್ಕಳಿಗೆ ಕೇವಲ ಶರೀಅತ್ ಶಿಕ್ಷಣ ಕೊಡಿಸಿದರೆ ಸಾಲದು, ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸಬೇಕು. ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಧನಸಹಾಯ ಮಾಡುವ ಮೂಲಕ ಸಮುದಾಯಕ್ಕೆ ಕೊಡುಗೆ ನೀಡಬೇಕು. ಬಡವರಿಗೆ ಸಹಾಯ ಮಾಡುವ ಮಹತ್ಕಾರ್ಯ ಹಮ್ಮಿಕೊಂಡಿ ರುವ ಕೆಕೆಎಂಎ ಸಂಘಟನೆ ಮಾದರಿಯಾಗಿದೆ ಎಂದು ಹೇಳಿದರು.

ಕೆಕೆಎಂಎ ಕರ್ನಾಟಕ ಶಾಖೆಯ ಕುವೈತ್ ಅಧ್ಯಕ್ಷ ಎಸ್.ಎಂ.ಅಝರ್ ಮಾತನಾಡಿ, ಕೆಕೆಎಂಎ ಸಂಘಟನೆಯು ಕಡಿಮೆ ಸಮಯದಲ್ಲಿ 18 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ. ಕೇರಳ, ಕರ್ನಾಟಕ ಹಾಗೂ ಮಹಾರಾಷ್ಟ್ರದ ಕೊಂಕಣ್ ಭಾಗದವರು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಕಿಡ್ನಿ ಡಯಾಲಿಸಿಸ್ ಚಿಕಿತ್ಸೆಗೆ ಕೇರಳದಲ್ಲಿ ಹೆಚ್ಚಿನ ಸದಸ್ಯರಿಗೆ ಸಹಾಯಹಸ್ತ ನೀಡಲಾಗಿದೆ. ಇದನ್ನು ಕರ್ನಾಟಕಕ್ಕೂ ವಿಸ್ತರಿಸಲಾಗುತ್ತಿದೆ ಎಂದರು.

ಸಂಘಟನೆಯ ಸದಸ್ಯರು ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ ಸಹಾಯಹಸ್ತ ನೀಡುತ್ತಾ ಬರಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 140ಕ್ಕೂ ಹೆಚ್ಚು ಸದಸ್ಯರು ಅಗಲಿದ್ದಾರೆ. ಪ್ರತಿ ಕುಟುಂಬಕ್ಕೂ ಎಂಟರಿಂದ 10 ಲಕ್ಷ ರೂ.ವರೆಗೆ ಸಹಾಯಹಸ್ತ ನೀಡಲಾಗಿದೆ. ಮನೆರಹಿತರನ್ನು ಗುರುತಿಸಿ ಮನೆ ನಿರ್ಮಿಸಿ ಕೊಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ 11 ಫಲಾನುಭವಿಗಳಿಗೆ ಮನೆ ನಿರ್ಮಿಸಿ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಎಸೆಸೆಲ್ಸಿ, ಪಿಯುಸಿ ಹಾಗೂ ಉನ್ನತ ಶಿಕ್ಷಣದಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಹಾಯಧನ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಿಡ್ನಿ ಡಯಾಲಿಸಿಸ್ ಚಿಕಿತ್ಸೆಗಾಗಿ ಫಲಾನುಭವಿಗಳಿಗೆ ಚೆಕ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಐಡಿಎಸ್ ಕಾಲೇಜಿನ ಚೇರ್‌ಮನ್ ಆರ್ಕಿಟೆಕ್ಟ್ ಮುಹಮ್ಮದ್ ನಿಸಾರ್, ಸೀ ಫುಡ್ ಬೈಯರ್ಸ್ ಅಸೋಸಿಯೇಶನ್‌ ಅಧ್ಯಕ್ಷ ಬಾಷಾ ಹಸನ್, ದಿ ಶೆಪರ್ಡ್ಸ್ ಇಂಟರ್‌ನ್ಯಾಶನಲ್ ಅಕಾಡಮಿಯ ಮುಖ್ಯ ಆಡಳಿತಾಧಿಕಾರಿ ಹಸನ್ ಯೂಸುಫ್, ಎಚ್‌ಐಎಫ್ ಅಧ್ಯಕ್ಷ ಎ.ಕೆ. ಸಾಜಿದ್, ಕೆಕೆಎಂಎ ರಾಜ್ಯ ಘಟಕದ ಅಧ್ಯಕ್ಷ ಎಸ್.ಎಂ.ಫಾರೂಕ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನೂಮಾನ್ ಇಬ್ರಾಹೀಂ ಕಿರಾಅತ್ ಪಠಿಸಿದರು. ಕೆಕೆಎಂಎ ರಾಜ್ಯ ಘಟಕದ ಅಧ್ಯಕ್ಷ ಎಸ್.ಎಂ.ಫಾರೂಕ್ ಸ್ವಾಗತಿಸಿದರು. ಎಸ್.ಎಂ.ಇಮ್ತಿಯಾಝ್ ಕಾರ್ಯಕ್ರಮ ನಿರೂಪಿಸಿದರು. ಹುಸೈನ್ ಶಾಫಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X