ನ್ಯಾಯವಾದಿ ಎಸ್.ಎಸ್. ಖಾಝಿ ಮೇಲೆ ಹಲ್ಲೆ: ದುಷ್ಕರ್ಮಿಗಳ ಬಂಧನಕ್ಕೆ ವಕೀಲರ ಸಂಘ ಆಗ್ರಹ

ಮಂಗಳೂರು, ಸೆ.28: ಮಂಗಳೂರಿನ ಹಿರಿಯ ನ್ಯಾಯವಾದಿ ಎಸ್.ಎಸ್. ಖಾಝಿ ಅವರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರಿಗೆ ಮಂಗಳೂರು ವಕೀಲರ ಸಂಘವು ಶನಿವಾರ ಆಗ್ರಹಿಸಿತು.
ಮನವಿ ಸಲ್ಲಿಸುವ ನಿಯೋಗದಲ್ಲಿ ಸಂಘದ ಅಧ್ಯಕ್ಷ ಎನ್.ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ, ಉಪಾಧ್ಯಕ್ಷ ಜಿನೇಂದ್ರ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Next Story





