ಭಟ್ಕಳ: ತಂಡದಿಂದ ವ್ಯಕ್ತಿಗೆ ಹಲ್ಲೆ; ದೂರು ದಾಖಲು
ಭಟ್ಕಳ: ರಾತ್ರಿ ವೇಳೆ ಶೌಚಕ್ಕೆಂದು ಮನೆಯಿಂದ ಹೊರಬಂದ ವ್ಯಕ್ತಿಯೊಬ್ಬರ ಮೇಲೆ ನಾಲ್ಕೈದು ಜನರ ತಂಡವೊಂದು ಹಲ್ಲೆಗೈದು ಪರಾರಿಯಾಗಿರುವ ಘಟನೆ ತಾಲೂಕಿನ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೆದೋಮಿ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಮುರುಡೇಶ್ವರದ ಹಿರೇದೋಮಿ ನಿವಾಸಿ ನಾಗರಾಜ ನಾಯ್ಕ ಎಂದು ಗುರುತಿಸಲಾಗಿದೆ. ಹಲ್ಲೆಯಿಂದಾಗಿ ತಲೆ ಹಾಗೂ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





