Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಾಯಿ ಮಕ್ಕಳ ಆಸ್ಪತ್ರೆಯನ್ನಾಗಿ...

ತಾಯಿ ಮಕ್ಕಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ: ಶ್ರೀರಾಮುಲು ಭರವಸೆ

ಕುಂದಾಪುರ ಸರಕಾರಿ ಆಸ್ಪತ್ರೆಯ ಹೆರಿಗೆ ವಿಭಾಗ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ28 Sept 2019 9:56 PM IST
share
ತಾಯಿ ಮಕ್ಕಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ: ಶ್ರೀರಾಮುಲು ಭರವಸೆ

ಕುಂದಾಪುರ, ಸೆ.28: ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯನ್ನು ತಾಯಿ - ಮಗು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವುದರೊಂದಿಗೆ ಅಗತ್ಯ ಇರುವ ವೈದ್ಯರು, ಸಿಬಂದಿ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಕುಂದಾಪುರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಬಳಿ ನಿರ್ಮಿಸಲಾದ 150 ಹಾಸಿಗೆಗಳ ಅತ್ಯಾಧುನಿಕ ಸುಸಜ್ಜಿತ ಸೌಲಭ್ಯಗಳನ್ನು ಒಳಗೊಂಡ ದಿ.ಲಕ್ಷ್ಮಿ ಸೋಮ ಬಂಗೇರ ಹೆರಿಗೆ ವಿಭಾಗದ ನೂತನ ಕಟ್ಟಡ ವನ್ನು ಉ್ಘಾಟಿಸಿ ಅವರು ಮಾತನಾಡುತಿದ್ದರು.

ಆರೋಗ್ಯ ಇಲಾಖೆಯಲ್ಲಿರುವ ವೈದ್ಯರ ಕೊರತೆ ನೀಗಿಸಲು ವೈದ್ಯರ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು. ಶುಶ್ರೂಷಕಿಯರ ಕನಿಷ್ಠ ವೇತನವನ್ನು 17,500ರೂ.ಗೆ ಏರಿಸಲಾಗಿದೆ. ಆಯಾಗಳ ಸೇವೆ ಖಾಯಂ ಗೊಳಿಸುವ ಕುರಿತು ಮುಖ್ಯಮಂತ್ರಿ ಹಾಗೂ ಆರ್ಥಿಕ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ನ್ಯಾಯ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದರು.

ಆಸ್ಪತ್ರೆಯ ಸಿಬ್ಬಂದಿ ರೋಗಿಗಳಿಗೆ ಸ್ಪಂದಿಸದ ಬಗ್ಗೆ ದೂರುಗಳು ಬಂದರೆ ಸುಮ್ಮನೆ ಇರುವುದಿಲ್ಲ. ಸರಕಾರಿ ವೈದ್ಯರು ಖಾಸಗಿಯಾಗಿಯೂ ಕ್ಲಿನಿಕ್ ತೆರೆದು ಕಾರ್ಯನಿರ್ವಹಿಸುವುದು ಗಮನಕ್ಕೆ ಬಂದರೆ ಅಲ್ಲಿಯೇ ಅಮಾನತು ಮಾಡಲಾಗುವುದು ಎಂದು ಶ್ರೀರಾಮುಲು ಎಚ್ಚರಿಕೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ, ಬಡವರ ಅನುಕೂಲಕ್ಕೆ ಜಾರಿಗೆ ತಂದಿರುವ ಆಯುಷ್ಮಾನ್ ಯೋಜನೆಯು ಕೆಲವು ನಿಯಮಾವಳಿಗಳಿಂದಾಗಿ ಶೇ.50ರಷ್ಟು ಪ್ರಯೋಜನ ಆಗುತ್ತಿಲ್ಲ. ಅದನ್ನು ಇನ್ನಷ್ಟು ಸರಳೀಕರಣಗೊಳಿಸಬೇಕಾಗಿದೆ ಎಂದು ಸಚಿವರನ್ನು ಒತ್ತಾಯಿಸಿದರು.

ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ.ಜಿ.ಶಂಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕರಾದ ರಘುಪತಿ ಭಟ್, ಬಿ.ಎಂ. ಸುಕುಮಾರ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಕುಂದಾಪುರ ತಾಪಂ ಅಧ್ಯಕ್ಷೆ ಶ್ಯಾಮಲಾ ಕುಂದರ್, ಉಪವಿಭಾಗದ ಸಹಾಯಕ ಆಯುಕ್ತ ಕೆ.ರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಆಸ್ಪತ್ರೆ ಆರೋಗ್ಯಾಧಿಕಾರಿ ಡಾ.ರಾಬರ್ಟ್ ಉಪಸ್ಥಿತರಿದ್ದರು.

ಸತೀಶ್ ಎಂ.ನಾಯಕ್ ಸ್ವಾಗತಿಸಿದರು. ಸದಾನಂದ ಬಳ್ಕೂರು ವಂದಿಸಿದರು. ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X