ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ
ಉಡುಪಿ, ಸೆ.28: ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿರುವ ಪ್ರತಿ ತಾಲೂಕಿಗೆ ಒಂದರಂತೆ ಗ್ರಾಪಂಗಳಿಗೆ ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಡ್ತಲ, ಕುಂದಾಪುರ ತಾಲೂಕಿನ ಕುಂಭಾಶಿ, ಉಡುಪಿ ತಾಲೂಕಿನ ಆರೂರು ಗ್ರಾಪಂಗಳು ಆಯ್ಕೆಯಾಗಿವೆ.
ಈ ಪ್ರಶಸ್ತಿಗೆ ರಾಜ್ಯದಲ್ಲಿ ಒಟ್ಟು 175 ಗ್ರಾಪಂಗಳು ಆಯ್ಕೆಯಾಗಿದ್ದು, ಆಯ್ಕೆಯಾದ ಗ್ರಾಪಂಗಳಿಗೆ ಅ.2ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Next Story





