Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ಈ ನೆಲಮೂಲದ ಅನುಭವ ಮತ್ತು ಅಧ್ಯಯನದ ಘಮಲು

ಈ ನೆಲಮೂಲದ ಅನುಭವ ಮತ್ತು ಅಧ್ಯಯನದ ಘಮಲು

ಹಾಣಾದಿ

ಕೆ.ಎಂ. ವಿಶ್ವನಾಥ ಮರತೂರಕೆ.ಎಂ. ವಿಶ್ವನಾಥ ಮರತೂರ29 Sept 2019 11:05 AM IST
share
ಈ ನೆಲಮೂಲದ ಅನುಭವ ಮತ್ತು ಅಧ್ಯಯನದ ಘಮಲು

ಒಂದು ಗ್ರಾಮದಲ್ಲಿ ನಡೆಯುವ ಈ ಕಥೆ ಅನೇಕಬಾರಿ ಬೇರೆಲ್ಲೆಡೆ ನಡೆದಿದೆಯೊ ಅಥವಾ ನಮ್ಮದೇ ಊರಿನ ಕಥೆಯೋ ಎನ್ನುವಷ್ಟು ಹತ್ತಿರವಾಗುತ್ತದೆ. ಕಥೆಯನ್ನು ಹಣೆಯುವ ಪ್ರಯತ್ನ ಉತ್ತಮವಾಗಿ ಮಾಡಲಾಗಿದೆ. ಪಠ್ಯವನ್ನು ಅರಗಿಸಿಕೊಳ್ಳದ ಈ ತಾಂತ್ರಿಕ ಯುಗದಲ್ಲಿ ಹಿರಿಯರ ಸಾಹಿತ್ಯವನ್ನು ಪ್ರೀತಿಯಿಂದ ಓದುತ್ತಾ, ಅದರಂತೆ ಬರೆಯುವಲ್ಲಿ ತೊಡಗಿಸಿಕೊಂಡಿರುವ ಈ ಹುಡುಗ ಮೆಚ್ಚುಗೆಗೆ ಪಾತ್ರವಾಗುತ್ತಾನೆ. ಕಾದಂಬರಿ ಮೊದಲಾದರೂ ತೋರಿರುವ ಬರವಣಿಗೆಯ ಗಟ್ಟಿತನ, ಕಥಾವಸ್ತು, ಜೀವಪರತೆ ಎಲ್ಲವೂ ಅಭಿನಂದನಾರ್ಹವಾಗಿದೆ.

ಈಬಿಸಿಲಂದ್ರೆ ಅಪ್ಪ ಇದ್ದಂಗೆ, ಮುಂಜಾನೆ ಎಳೆ ಮಗುವಿನಂತೆ, ಮಧ್ಯಾಹ್ನ ಉರಿ ಬಿಸಿಲಿನಂತೆ ಸಿಡುಕಿನ ಮನುಷ್ಯ, ರಾತ್ರಿ ಬಿಸಿಲು ಬಿಟ್ಟು ಹೋದ ಅವಶೇಷದಂತಿರುತ್ತಿದ್ದ. ಬಿಸಿಲಿನಷ್ಟೆ ಸದ್ದಿಲ್ಲದೆ ಕುದಿಯುತ್ತಿರುವ ಮನುಷ್ಯ ನೀರು ಹರಿದು ನುಣುಪಾದ ಜಾರು ಕಲ್ಲುಗಳು. ಉಸುಕು ಮಣ್ಣು ಬೆರೆತು ನೆಲದಲ್ಲಿ ನೀರು ನಿಂತ ಅಗಲವಾದ ಜಾಗ. ಮಧ್ಯೆ ಮಧ್ಯೆ ವಿಚಿತ್ರ ಕೀಟಗಳ ಹಾರಾಟ ಈ ಮೇಲಿನ ಸಾಲುಗಳು ನಾನು ಇತ್ತೀಚೆಗೆ ಓದಿರುವ ಕಪಿಲ ಪಿ. ಹುಮನಾಬಾದೆ ಎನ್ನುವ ಪ್ರೀತಿಯ ಹರೆಯದ ಹುಡುಗನ ಹಾಣಾದಿ ಕಾದಂಬರಿಯ ಸಾಲುಗಳು. ಕನ್ನಡ ಸಾಹಿತ್ಯ ಲೋಕದ ನಂಟು ಈ ಕಾದಂಬರಿಯ ಜೀವಾಳ.

ಬೀದರಿನಿಂದ ಕಲಬುರಗಿಯ ನೆಲದ ವಾಸನೆಯು ಈ ಕಾದಂಬರಿ ವಿಷಯ ವಸ್ತು. ಈ ನೆಲದ ಭಾಷೆ, ಆಸ್ವಾದ ಮೇಲ್ನೋಟಕ್ಕೆ ಕಂಡುಬರುತ್ತದೆ. ಇಲ್ಲಿ ಬಳಸಿರುವ ಪದಗಳು ಆತನ ಕನ್ನಡ ಸಾಹಿತ್ಯದ ಮೇರುಕೃತಿಗಳ ಅಧ್ಯಯನದ ಫಲವಾಗಿ ಮೂಡಿಬಂದಿವೆ. ಕಥಾ ಹಂದರವನ್ನು ಅತ್ಯಂತ ಸೂಕ್ತ ರೀತಿಯಲ್ಲಿ ಕಟ್ಟುವ ಕಲೆ ಹಿರಿಯರ ಸಾಹಿತ್ಯದ ಓದಿನಿಂದ ಮಾತ್ರ ಸಾಧ್ಯವೆನ್ನುವುದನ್ನು ಈ ಕಾದಂಬರಿ ಸಾಬೀತುಪಡಿಸುತ್ತದೆ. ಕಾದಂಬರಿ ಹಳ್ಳಿ ಸೊಗಡಿನ ಭಾಷೆಯಲ್ಲಿದ್ದು ಓದಿಗರಿಗೆ ಹತ್ತಿರವಾಗುತ್ತದೆ. ಕಥಾನಾಯಕ ಎಲ್ಲಿಯೂ ತನ್ನ ಹೆಸರು ನೇರವಾಗಿ ಪ್ರಸ್ತಾಪಿಸದಿದ್ದರೂ ಸಾಹಿತ್ಯ ಓದುಗರಿಗೆ ಕಥಾನಾಯಕ ಯಾರು ಯಾಕೆ ನಮಗೆ ತನ್ನ ಕಥೆ ಹೇಳುತ್ತಿದ್ದಾನೆ ಎನ್ನುವ ಸಣ್ಣ ಸುಳಿವು ಕಾದಂಬರಿ ಬಿಟ್ಟುಕೊಡುತ್ತದೆ. ಕಾದಂಬರಿಯ ಸೂಕ್ಷ್ಮತೆ ತಕ್ಷಣಕ್ಕೆ ಅರ್ಥವಾಗದೇ ಸಂಪೂರ್ಣ ಗ್ರಹಿಕೆಗೆ ಸಿಗುವುದು ಸ್ವಲ್ಪ ಕಷ್ಟವೇ ಎನಿಸುತ್ತದೆ. ಕನ್ನಡ ಕಾದಂಬರಿ ಲೋಕದಲ್ಲಿ ಈಗಾಗಲೇ ಅನೇಕ ಹಿರಿಯರು ತಮ್ಮ ಬದುಕನ್ನು ಬಾಲ್ಯವನ್ನು ಹಲವು ಬಗೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ.

ಹಾಣಾದಿಯು ಕೂಡಾ ಅದೇ ಹಾದಿಯಲ್ಲಿದೆ ಎನಿಸುತ್ತದೆ. ಕಥೆ ನಮಗೆ ಹಲವು ವಿಚಾರಗಳನ್ನು ಬಿಚ್ಚಿಡುತ್ತಾ ಎಳೆದುಕೊಳ್ಳುತ್ತಾ ಬಾಲ್ಯದ ನೆನಪುಗಳತ್ತ ಕರೆದುಕೊಂಡು ಹೋಗುತ್ತದೆ. ನಾವ್ಯಾರು ನೆನಪಿಡದೇ ಅನೇಕ ಸಂಗತಿಗಳನ್ನು ಕಾದಂಬರಿ ಅತ್ಯಂತ ಉಚ್ಛ್ರಾಯ ಸ್ಥಿತಿಯಲ್ಲಿ ತಿಳಿಸುತ್ತಾ ಹೋಗುತ್ತದೆ. ಆಯಿ, ಬಾದಾಮಿ ಗಿಡಿ ಇವುಗಳ ಉಲ್ಲೇಖ ಕೃತಕವೆನಿಸಿದರೂ ಅವು ಕಥೆಗಾರನೊಂದಿಗೆ ಸಂಧಿಸುವ ಬಗೆ ಅತ್ಯಂತ ಸೂಕ್ತವಾದದ್ದು. ಕಾದಂಬರಿಯ ಒಳ ಹರಿವು, ಮನಸ್ಸುಗಳನ್ನು ಬೀಳಿಸುತ್ತಾ ಏಳಿಸುತ್ತಾ, ಸತ್ಯ ಹೇಳುವುದಕ್ಕೆ ತೂಕಡಿಸುತ್ತಲೇ ಎಲ್ಲವೂ ಹೇಳುತ್ತದೆ. ಜನಮಾನಸದಲ್ಲಿ ಹಾಸುಹೊಕ್ಕಾಗಿರುವ ಸಾಮಾನ್ಯ ಬದುಕನ್ನು ತಿಳಿಸುತ್ತ ಅಪ್ಪ, ಅಜ್ಜಿ, ಇರುವೆ ಸಾಲು, ಕೆಂಪು ಮತ್ತು ಕಪ್ಪ್ಪು ಮಣ್ಣಿನ ಹುತ್ತ, ಸಾವು, ನಿಗೂಢತೆ, ಭಯ, ಹಾಣಾದಿ, ಬಂಡಿ, ಹೊಲ, ಸೂರ್ಯ ಹೀಗೆ ಮನುಷ್ಯ ಪ್ರೀತಿಗೆ ಬೇಕಾಗಿರುವ ಎಲ್ಲವನ್ನು ಕಥಾ ಹಂದರಕ್ಕೆ ಜೋಡಿಸಿ ಅದರೊಳಗೊಂದಿಷ್ಟು ಅಲಂಕಾರಗಳ ಜೊತೆಗೆ ಒಗ್ಗರಣೆ ಬೆರೆಸಿ ಕೊಡುವ ಒಟ್ಟು ಮೊತ್ತವೇ ಹಾಣಾದಿ. ಹಾಣಾದಿ ಆತನ ಮೊದಲ ಕಾದಂಬರಿ ಎಂದು ನನಗೆ ಅನಿಸಲಿಲ್ಲ ಬದಲಿಗೆ ಮಾಗಿದ ಓದಿನ ಫಲವೆನಿಸಿತು.

ಅದಕ್ಕಿಂತ ಹೆಚ್ಚಾಗಿ ಕೊಡ ಬಾಗಿದ ಹುಡುಗನ ಪ್ರೀತಿಯ ಫಲವೆನಿಸಿತು. ಕಾದಂಬರಿಯು ಪ್ರತಿ ಪ್ರಾರಂಭಕ್ಕೂ ಅತೀಹೆಚ್ಚು ಅಲಂಕಾರಗಳು, ಹೋಲಿಕೆಗಳು, ಉಪಮೇಯ, ಉಪಮಾನಗಳು ಬಳಕೆಯಾಗಿರುವುದರಿಂದ ಕೆಲವೊಮ್ಮೆ ಅಭಾಸವೆನಿಸುತ್ತದೆ. ಕಾದಂಬರಿಯುದ್ದಕ್ಕೂ ಕಥೆಗಾರನನ್ನು ನೇರವಾಗಿ ಕಾಣದಿದ್ದಾಗ ಇವನ್ಯಾರು ಎನ್ನುವ ಪ್ರಶ್ನೆ ಹೊಳೆದಾಗ ಕೋಪ ಬರುತ್ತದೆ. ಹೇಳುವ ಸಣ್ಣ ವಿಷಯವನ್ನು ಇಷ್ಟೆಲ್ಲ ಸುತ್ತಾಡಬೇಕ ಎನಿಸತ್ತದೆ. ಕಾದಂಬರಿ ಓದು ಮುಗಿದ ಬಳಿಕ ಹೌದು ಇದೆಲ್ಲವೂ ಬೇಕಿತ್ತು ಎಂದು ನಿರ್ಧಾರಕ್ಕೆ ಬರುತ್ತೇವೆ. ಕಥೆಗಾರ ಪ್ರತಿ ಪುಟದಲ್ಲಿಯೂ ಮಲಗಿ, ಎದ್ದು, ಓಡಿ, ಬಿದ್ದು, ಒದ್ದಾಡಿದ್ದು ನಿಚ್ಚಳವಾಗಿ ಕಾಣುತ್ತದೆ. ಹಾಣಾದಿ ಒಂದು ಕಾಲಘಟ್ಟದಲ್ಲಿ ನಡೆದ ಘಟನೆಯಾಗಿದ್ದು ಅದನ್ನು ಕಾದಂಬರಿ ರೂಪಕ್ಕೆ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದೆ. ಕೆಲವೊಮ್ಮೆ ನಾನೇ ಕಾದಂಬರಿಕಾರ ಎನ್ನುವ ಸುಳಿವು ಬಿಟ್ಟುಕೊಡಲು ಹೆದರುತ್ತದೆ. ಕಾಲಮಾನಗಳನ್ನು ಕಾದಂಬರಿಯಲ್ಲಿ ಹಿಡಿದಿಡಲು ಸಾಧ್ಯವಾಗಿದೆ. ಕಥೆ, ಉಪಕಥೆ, ಕನಸಿನೊಳಗೊಂದು ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ. ಒಂದು ಗ್ರಾಮದಲ್ಲಿ ನಡೆಯುವ ಈ ಕಥೆ ಅನೇಕಬಾರಿ ಬೇರೆಲ್ಲೆಡೆ ನಡೆದಿದೆಯೊ ಅಥವಾ ನಮ್ಮದೇ ಊರಿನ ಕಥೆಯೋ ಎನ್ನುವಷ್ಟು ಹತ್ತಿರವಾಗುತ್ತದೆ. ಕಥೆಯನ್ನು ಹಣೆಯುವ ಪ್ರಯತ್ನ ಉತ್ತಮವಾಗಿ ಮಾಡಲಾಗಿದೆ. ಪಠ್ಯವನ್ನು ಅರಗಿಸಿಕೊಳ್ಳದ ಈ ತಾಂತ್ರಿಕ ಯುಗದಲ್ಲಿ ಹಿರಿಯರ ಸಾಹಿತ್ಯವನ್ನು ಪ್ರೀತಿಯಿಂದ ಓದುತ್ತಾ, ಅದರಂತೆ ಬರೆಯುವಲ್ಲಿ ತೊಡಗಿಸಿಕೊಂಡಿರುವ ಈ ಹುಡುಗ ಮೆಚ್ಚುಗೆಗೆ ಪಾತ್ರವಾಗುತ್ತಾನೆ.

ಕಾದಂಬರಿ ಮೊದಲಾದರೂ ತೋರಿರುವ ಬರವಣಿಗೆಯ ಗಟ್ಟಿತನ, ಕಥಾವಸ್ತು, ಜೀವಪರತೆ ಎಲ್ಲವೂ ಅಭಿನಂದನಾರ್ಹವಾಗಿದೆ. ಇನ್ನು ಹೆಚ್ಚು ಅಧ್ಯಯನಶೀಲನಾಗುವ ಅಗತ್ಯವಂತೂ ಇದ್ದೇ ಇದೆ. ಸಮಕಾಲೀನ ಕಾದಂಬರಿ ಪ್ರಪಂಚಕ್ಕೆ ಸೆಡ್ಡು ಹೊಡೆದು ನಿಲ್ಲಬಲ್ಲ, ಕನ್ನಡ ಸಾಹಿತ್ಯದ ಕಾದಂಬರಿ ಲೋಕಕ್ಕೆ ಪಾದಾರ್ಪಣೆ ಮಾಡಬಲ್ಲ ಶಕ್ತಿ ಹಾಣಾದಿ ಪಡೆದುಕೊಂಡಿದೆ.

share
ಕೆ.ಎಂ. ವಿಶ್ವನಾಥ ಮರತೂರ
ಕೆ.ಎಂ. ವಿಶ್ವನಾಥ ಮರತೂರ
Next Story
X