ಅ.1ರಂದು ಉಡುಪಿ ತಾಲೂಕು ಮಟ್ಟದ ಕ್ರೀಡಾಕೂಟ
ಉಡುಪಿ, ಸೆ.29: ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬ್ರಹ್ಮಾವರ ವಲಯ ಹಾಗೂ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಗಳ ಜಂಟಿ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ ನಾಳೆ ಅ.1ರಂದು ಬೆಳಗ್ಗೆ 9.30ಕ್ಕೆ ಕೆಮ್ಮಣ್ಣು ಸರಕಾರಿ ಪ್ರೌಢ ಶಾಲಾ ಕ್ರೀಡಾಂಗಣದಲ್ಲಿ ಜರಗಲಿದೆ.
ಕ್ರೀಡಾಕೂಟವನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಉಡುಪಿ ಶಾಸಕ ರಘುಪತಿ ಭಟ್ ವಹಿಸಲಿರುವರು. ಅತಿಥಿ ಗಳಾಗಿ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಮೊದಲಾದವರು ಭಾಗವಹಿ ಸಲಿರುವರು. ಮಧ್ಯಾಹ್ನ 3ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Next Story





