ಶ್ರೀ ಮಂಗಳಾ ದೇವಿಯಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ

ಮಂಗಳೂರು, ಸೆ. 29: ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕೆ ಮಂಗಳೂರು ಪೊಲೀಸ್ ಕಮೀಶನರ್ ಡಾ. ಹರ್ಷ ಚಾಲನೆ ನೀಡಿ ಶುಭ ಹಾರೈಸಿದರು.
ಗಣಪತಿ ಪ್ರಾರ್ಥನೆಯೊಂದಿಗೆ ಇಂದಿನಿಂದ ಅ.9ರವರೆಗೆ ವರ್ಷಾವಧಿ ಉತ್ಸವ ರಥೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿರುವ ನವರಾತ್ರಿ ಉತ್ಸವ ಆರಂಭಗೊಂಡಿತು.
ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಮನಪಾ ಸದಸ್ಯ ಪ್ರೇಮಾನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರ ಪಿ.ರಮಾನಾಥ ಹೆಗ್ಡೆ, ಆನುವಂಶಿಕ ಟ್ರಸ್ಟಿಗಳಾದ ರಘುರಾಮ ಉಪಾಧ್ಯಾಯ, ಬೋರ್ಡ್ ಟ್ರಸ್ಟಿಗಳಾದ ರಾಮನಾಯ್ಕ ಕೋಟೆಕಾರ್, ಪ್ರೇಮಲತಾ ಎಸ್.ಕುಮಾರ್, ಪ್ರಧಾನ ಅರ್ಚಕರಾದ ವೆಮಕಟೇಶ್ ಐತಾಳ್, ಗೊಪಾಲ್ ಐತಾಳ್ ಮೊದಲಾದವರು ಉಪಸ್ಥಿತರಿದ್ದರು.
Next Story





