ಹಾಸನ: ರಸ್ತೆ ಮಧ್ಯೆಯೇ ಹೊತ್ತಿ ಉರಿದ ಖಾಸಗಿ ಬಸ್
30 ಪ್ರಯಾಣಿಕರು ಪಾರು

ಹಾಸನ, ಸೆ.29: ಖಾಸಗಿ ಬಸ್ ಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ತಾಲೂಕಿನ ಶಾಂತಿಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ.
ಬೆಂಗಳೂರಿನಿಂದ ಬೈಂದೂರುಗೆ ಬರುತ್ತಿದ್ದ ಕೆ.ಎ. 20 ಬಿ-6676 ಸಂಖ್ಯೆಯ ಖಾಸಗಿ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಶಾಂತಿಗ್ರಾಮ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್ ನಲ್ಲಿದ್ದ 30 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.
ವಿಚಾರ ತಿಳಿದ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದು, ಆದರೆ ಅಷ್ಟೊತ್ತಿಗಾಗಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
Next Story





