Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಶ್ಮೀರದಲ್ಲಿ 370ನೆ ವಿಧಿ ಉಳಿಯಲು...

ಕಾಶ್ಮೀರದಲ್ಲಿ 370ನೆ ವಿಧಿ ಉಳಿಯಲು ಕಾಂಗ್ರೆಸ್ ನಿಂದ ಓಟ್ ಬ್ಯಾಂಕ್ ರಾಜಕೀಯ ಕಾರಣ -ಮುರಳೀಧರ ರಾವ್

'ಏಕದೇಶ ಏಕ ಸಂವಿಧಾನ' ಅಭಿಯಾನದ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ29 Sept 2019 9:08 PM IST
share
ಕಾಶ್ಮೀರದಲ್ಲಿ 370ನೆ ವಿಧಿ ಉಳಿಯಲು ಕಾಂಗ್ರೆಸ್ ನಿಂದ ಓಟ್ ಬ್ಯಾಂಕ್ ರಾಜಕೀಯ ಕಾರಣ -ಮುರಳೀಧರ ರಾವ್

ಮಂಗಳೂರು: ಕಾಶ್ಮೀರದಲ್ಲಿ ಕಾಂಗ್ರೆಸ್ ನ ಓಟ್ ಬ್ಯಾಂಕ್ ರಾಜಕಾರಣ ದಿಂದ 370ನೆ ವಿಧಿ ಉಳಿದುಕೊಂಡಿತ್ತು ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ,ರಾಜ್ಯದ ಪ್ರಭಾರಿ ಮುರಳೀಧರ ರಾವ್ ತಿಳಿಸಿದ್ದಾರೆ.

ನಗರದ ಟಿ.ವಿ.ರಮಣ್  ಪೈ ಸಭಾಂಗಣದಲ್ಲಿಂದು ಬಿಜೆಪಿ ವತಿಯಿಂದ ಹಮ್ಮಿಕೊಂಡ ಏಕದೇಶ ಏಕ ಸಂವಿಧಾನ ಅಭಿಯಾನದ ಸಮಾವೇಶವನ್ನು ಉದ್ದೇಶಿಸಿ ಅವರು  ಮಾತನಾಡುತ್ತಿದ್ದರು.

ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿ ಮಾರ್ಪಡಿಸಲು ಸಂವಿಧಾನದ 370 ವಿಧಿಯನ್ನು ರದ್ದು ಪಡಿಸುವ  ಆಶಯಹೊಂದಿದ್ದರು‌. ದೇಶದ ಏಕತೆ ಮತ್ತು ಅಖಂಡ ತೆಗಾಗಿ ಕಾಶ್ಮೀರಕ್ಕೆ ಸಂಬಂಧಿ ಸಿದಂತೆ 370 ವಿಧಿ ರದ್ದಾಗಿದೆ. ಮಹಾರಾಜ ಹರಿಸಿಂಗ್ ವಿಲೀನಕ್ಕೆ ಒಪ್ಪಿದಾಗ ಪ್ರತ್ಯೇಕ ಕತೆಯ ನಿಬಂಧನೆಗಳಿರಲಿಲ್ಲ. ಕಾಂಗ್ರೆಸ್ ನ ಹಲವು ಮುಖಂಡರು ಕಾಶ್ಮೀರ ಕ್ಕೆ ಪ್ರತ್ಯೇಕ ಸಂವಿಧಾನವನ್ನು ಒಪ್ಪಿರಲಿಲ್ಲ. ಆದರೆ ನೆಹರು ಅವರ ಮುತುವರ್ಜಿಯಿಂದ ಸಂವಿಧಾನದ 370ವಿಧಿಯನ್ನು ತಾತ್ಕಾಲಿಕ ವಾಗಿ ಸೇರ್ಪಡೆ ಗೊಳಿಸಲಾಯಿತು. ಸಂವಿಧಾನದ 370 ವಿಧಿಯ ಮೂಲಕ ಕಾಶ್ಮೀರ ಕ್ಕೆ ಪ್ರತ್ಯೇಕ ಸ್ಥಾನ ಮಾನ ನೀಡಿರುವುದು ಕಾಂಗ್ರೆಸ್  ನಾಯಕರಿಂದ ಇತಿಹಾಸದಲ್ಲಾಗಿರುವ ಪ್ರಮಾದ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಆಯಾಪ್ರದೇಶದ ಭಾಷೆ, ಸಂಸ್ಕ್ರತಿ ರಕ್ಷಣೆಗೆ ಅವಕಾಶವಿದೆ. ಪ್ರತ್ಯೇಕ 370 ವಿಧಿಯ ಅಗತ್ಯವಿಲ್ಲ. ಕಾಶ್ಮೀರದಲ್ಲಿ ಕಳೆದ 70 ವರ್ಷದಲ್ಲಿ  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ, ಹಿಂದುಳಿದವರಿಗೆ ಯಾವೂದೇ ಮೀಸಲಾತಿ ಸೌಲಭ್ಯ ದೊರೆಯಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ಮತ್ತು ಕಮ್ಯನಿಸ್ಟ್ ಕಾಶ್ಮೀರದ ಸಮಸ್ಯೆಯ ಯ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಮುರಳೀಧರ ರಾವ್ ತಿಳಿಸಿದರು.

ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಭೆಯನ್ನು ದ್ದೇಶಿಸಿ ಮಾತನಾಡುತ್ತಾ, ಕಾಶ್ಮೀರದಲ್ಲಿ 370ನೆ ವಿಧಿಯ ರದ್ದಾಗಿರುವ ದಿನ ಆ.5 ಕಾಶ್ಮೀರ ಜನತೆಗೆ  ಸ್ವಾತಂತ್ರ್ಯ ದೊರೆತ ದಿನ ಎನ್ನಬಹುದು. ಇನ್ನು ಮುಂದೆ ಕಾಶ್ಮೀರದಲ್ಲಿ ಭಯೋತ್ಪಾದನೆ ನಿರ್ನಾಮ ವಾಗಲಿದೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಟಂದೂರು, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಡಾ.ಭರತ್ ಶೆಟ್ಟಿ, ಬಿಜೆಪಿ ಮುಖಂಡರಾದ ಉದಯ ಕುಮಾರ್, ಮೀನಾಕ್ಷಿ ಶಾಂತಿ ಗೋಡು ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X