ಕಳವು ಪ್ರಕರಣ : ಆರೋಪಿ ಸೆರೆ
ಬಂಟ್ವಾಳ : ತಾಲೂಕಿನ ಬಾಳ್ತಿಲದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪುತ್ತೂರು ತಾರಿಗುಡ್ಡೆ ನಿವಾಸಿ ಉದೈಫ್ ಬಂಧಿತ ಆರೋಪಿಯಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಟ್ವಾಳ ನಗರ ಠಾಣಾ ಅಪರಾಧ ವಿಭಾಗದ ಪಿಎಸ್ಐ ಸುಧಾಕರ್ ತೋನ್ಸೆ ಅವರು ಶನಿವಾರ ಸಿಬ್ಬಂದಿ ಜೊತೆ ಗಸ್ತು ತಿರುಗುತ್ತಿದ್ದ ಸಂದರ್ಭ ಆರೋಪಿಯನ್ನು ಕುದ್ರೆಬೆಟ್ಟು ಬಳಿ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಎಎಸ್ಐ ಸಂಜೀವ, ಹೆಡ್ ಕಾನ್ಸ್ಟೇಬಲ್ ಸುರೇಶ್ ಪಡಾರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಒಂದು ತಿಂಗಳ ಹಿಂದೆ ನಡೆದ ಅಂಗಡಿ ಕಳವು ಪ್ರಕರಣದಲ್ಲಿ ಉದೈಫ್ ಆರೋಪಿಯಾಗಿದ್ದು, ಈತನ ವಿರುದ್ಧ ಪುತ್ತೂರು ನಗರ, ಗ್ರಾಮಾಂತರ ಹಾಗೂ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಳ್ಳತನ ಪ್ರಕರಣಗಳು ದಾಖಲಾಗಿವೆ.
Next Story





